Homeಕರ್ನಾಟಕಯತ್ನಾಳ್ ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ: ಸತೀಶ್ ಜಾರಕಿಹೊಳಿ

ಯತ್ನಾಳ್ ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ: ಸತೀಶ್ ಜಾರಕಿಹೊಳಿ

- Advertisement -
- Advertisement -

ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಸೇರುತ್ತಿದ್ದಾರೆ ಎಂಬ ವರದಿಗಳನ್ನು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಮಂಗಳವಾರ ತಳ್ಳಿಹಾಕಿದ್ದು, ಇಂತಹ ಪ್ರಶ್ನೆಯೆ ಉದ್ಭವಿಸುವುದಿಲ್ಲ ಎಂದು ಹೇಳಿದ್ದಾರೆ. ಬಿಜೆಪಿ ಮತ್ತು ಯತ್ನಾಳ್ ಅವರ ಸಿದ್ಧಾಂತ ಒಂದೇ ಆಗಿದ್ದು ಅದು ಕಾಂಗ್ರೆಸ್‌ಗೆ ಹೊಂದಿಕೆಯಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಅವರು ಸುಮಾರು ಒಂದು ವರ್ಷ ಅಥವಾ ಅದಕ್ಕಿಂತ ಕಡಿಮೆ ಅವಧಿಯಲ್ಲಿ ಬಿಜೆಪಿಗೆ ಮತ್ತೆ ಮರಳಲಿದ್ದಾರೆ ಎಂದು ಜಾರಕಿಹೊಳಿ ಹೇಳಿದ್ದಾರೆ. ಯತ್ನಾಳ್ ಬಿಜೆಪಿಯಿಂದ ಉಚ್ಚಾಟಿತರಾದ ನಂತರ ಕೆಲವು ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿರಬಹುದು, ಆದರೆ ಅಷ್ಟಕ್ಕೆ ಅವರು ಪಕ್ಷಕ್ಕೆ ಸೇರುತ್ತಿದ್ದಾರೆ ಎಂದು ಅರ್ಥವಲ್ಲ ಎಂದು ಜಾರಕಿಹೊಳಿ ಮಂಗಳವಾರ ಬೆಳಗಾವಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಈ ಹಿಂದೆಯೂ ಯತ್ನಾಳ್ ಬಿಜೆಪಿ ತೊರೆದು ಮತ್ತೆ ಬಿಜೆಪಿ ಸೇರಿದ್ದರು, ಅವರಿಗೆ ಕಾಂಗ್ರೆಸ್ ಸಿದ್ಧಾಂತ ಸರಿಹೊಂದುವುದಿಲ್ಲ ಎಂದು ಜಾರಕಿಹೊಳಿ ಹೇಳಿದ್ದಾರೆ.

ನವದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ಸಭೆ ನಡೆಸಿದ್ದೆ ಎಂದು ಜಾರಕಿಹೊಳಿ ಹೇಳಿದ್ದಾರೆ. ಈ ವೇಳೆ ಅವರು ಕೇಂದ್ರ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು ಭೇಟಿಯಾಗಿದ್ದ ಊಹಾಪೋಹಗಳಿಗೂ ಉತ್ತರಿಸಿದ್ದಾರೆ.

“ಬೆಳಗಾವಿ ಜಿಲ್ಲೆಯಲ್ಲಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಕೈಗಾರಿಕೆಗಳನ್ನು ಮಂಜೂರು ಮಾಡುವಂತೆ ವಿನಂತಿಸಲು ನಾನು ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದೆ. ಬೆಳಗಾವಿ ಬೆಂಗಳೂರಿನಂತೆಯೇ ಅಭಿವೃದ್ಧಿ ಹೊಂದಬೇಕೆಂದು ನಾವು ಬಯಸುತ್ತೇವೆ. ಕುಮಾರಸ್ವಾಮಿ ಅವರೊಂದಿಗಿನ ಈ ಭೇಟಿಯಲ್ಲಿ ರಾಜಕೀಯದ ಬಗ್ಗೆ ಚರ್ಚಿಸಲಾಗಿಲ್ಲ ಮತ್ತು ದೇವೇಗೌಡರೊಂದಿಗಿನ ಭೇಟಿ ಕಾಕತಾಳೀಯವಾಗಿತ್ತು” ಎಂದು ಅವರು ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗಿನ ಭೇಟಿಯು ಕೆಪಿಸಿಸಿ ಅಧ್ಯಕ್ಷರನ್ನು ಬದಲಾಯಿಸುವ ಬಗ್ಗೆ ಚರ್ಚಿಸಲು ಅಲ್ಲ ಎಂದು ಅವರು ಹೇಳಿದ್ದಾರೆ. “ಈ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಹೈಕಮಾಂಡ್‌ಗೆ ಬಿಟ್ಟ ವಿಷಯ” ಎಂದು ಜಾರಕಿಹೊಳಿ ಹೇಳಿದ್ದಾರೆ.

ರಾಜ್ಯದಲ್ಲಿ ಹಾಲಿನ ಬೆಲೆ ಏರಿಕೆ ಮತ್ತು ಇತರ ತೆರಿಗೆಗಳ ಹೆಚ್ಚಳದ ವಿರುದ್ಧ ಬಿಜೆಪಿ ಪ್ರತಿಭಟನೆ ಘೋಷಿಸಿರುವ ಬಗ್ಗೆ ಉತ್ತರಿಸಿದ ಅವರು, “ಕರ್ನಾಟಕ ಹಾಲು ಒಕ್ಕೂಟದಿಂದ ಪ್ರಸ್ತಾವನೆ ಬಂದ ನಂತರ ಹಾಲಿನ ಬೆಲೆಗಳನ್ನು ಹೆಚ್ಚಿಸಲಾಗಿದೆ. ಜೊತೆಗೆ ಇಂತಹ ಹೆಚ್ಚಳ ಇದು ಮೊದಲ ಬಾರಿಗೆ ಮಾಡಿರುವುದಲ್ಲ. ವಿವಿಧ ಸರ್ಕಾರಗಳ ಅವಧಿಯಲ್ಲಿ, ತೆರಿಗೆಗಳನ್ನು ಹೆಚ್ಚಿಸಲಾಯಿತು ಮತ್ತು ಹಾಲಿನ ಬೆಲೆಗಳನ್ನು ಸಹ ಹೆಚ್ಚಿಸಲಾಗಿತ್ತು” ಎಂದು ಅವರು ಹೇಳಿದ್ದಾರೆ.

ಬಿಜೆಪಿಯ ಈ ಪ್ರತಿಭಟನೆಗಳು ಅನಗತ್ಯವಾಗಿದ್ದು, ಇದನ್ನೆ ಅನ್ವಯಿಸಿ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡಿರುವ ಟೋಲ್ ಏರಿಕೆಯ ವಿರುದ್ಧ  ಅವರು ಪ್ರತಿಭಟನೆ ನಡೆಸಬೇಕು ಎಂದು ಜಾರಕಿಹೊಳಿ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಹಾರಾಷ್ಟ್ರ ಸರಕಾರದ ಸಾಲ ಮನ್ನಾ ಭರವಸೆ ಉಲ್ಲಂಘನೆ: 90,000ಕ್ಕೆ ಯಕೃತ್ತು, 75,000ಕ್ಕೆ ಕಿಡ್ನಿ ಮಾರಾಟಕ್ಕಿಟ್ಟು ರೈತನ ಪ್ರತಿಭಟನೆ

ಮಹಾರಾಷ್ಟ್ರ ಸರಕಾರದ ಸಾಲ ಮನ್ನಾ ಭರವಸೆ ಉಲ್ಲಂಘನೆ: 90,000ಕ್ಕೆ ಯಕೃತ್ತು, 75,000ಕ್ಕೆ ಕಿಡ್ನಿ ಮಾರಾಟಕ್ಕಿಟ್ಟು ರೈತನ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...