Homeಮುಖಪುಟಯತ್ನಾಳ್‌ರವರನ್ನು ತಕ್ಷಣ ಅಮಾನತು ಮಾಡಬೇಕು: ಸಿದ್ದರಾಮಯ್ಯ ಆಗ್ರಹ

ಯತ್ನಾಳ್‌ರವರನ್ನು ತಕ್ಷಣ ಅಮಾನತು ಮಾಡಬೇಕು: ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

ಬಸವನಗೌಡ ಪಾಟೀಲ್ ಯತ್ನಾಳ್ ಅವರು ಸದನಕ್ಕೆ ಅಗೌರವ ತೋರಿದ್ದಾರೆ. ಸಂವಿಧಾನದ ಹೆಸರಲ್ಲಿ ಪ್ರಮಾಣ ಮಾಡಿದವರು ಒಬ್ಬ ಹಿರಿಯ ಸ್ವಾತಂತ್ರ್ಯ ಹೋರಾಟಗಾರನಿಗೆ ಅವಮಾನಿಸಿರುವುದು ಸಂವಿಧಾನಕ್ಕೆ ಮಾಡಿರುವ ಅವಮಾನ. ಇಂತಹ ದೇಶದ್ರೋಹಿಗಳ ಜೊತೆ ಕಲಾಪದಲ್ಲಿ ಕುಳಿತುಕೊಳ್ಳಲು ನಾವು ಸಿದ್ಧರಿಲ್ಲ. ಅವರನ್ನು ಸಭಾಧ್ಯಕ್ಷರು ತಕ್ಷಣ ಅಮಾನತು ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬಿಜೆಪಿ ನಾಯಕರು, ಮಂತ್ರಿಗಳು ಯತ್ನಾಳ್ ಹೇಳಿಕೆಯನ್ನು ಖಂಡಿಸುವ ಬದಲು ಬೆಂಬಲಿಸಿ ಮಾತನಾಡುತ್ತಾರೆ. ಪಕ್ಷದ ಶಾಸಕನೊಬ್ಬ ದೇಶದ ಸ್ವಾತಂತ್ರ್ಯ ಚಳುವಳಿಗೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನಿಸುವುದು ವೈಯಕ್ತಿಕ ಅಭಿಪ್ರಾಯ ಹೇಗಾಗುತ್ತದೆ? ಹಾಗಾದರೆ ಯತ್ನಾಳ್ ಹೇಳಿಕೆಗೆ ಬಿಜೆಪಿ ಸಮ್ಮತಿ ಇದೆಯೇ ಎಂಬುದನ್ನು ಅಧಿಕೃತವಾಗಿ ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿಯವರನ್ನು ಒಂದು ಪಕ್ಷಕ್ಕೆ ಕಟ್ಟಿಹಾಕುವುದು ಸರಿಯಲ್ಲ. ಅವರು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಮತ್ತು ತದನಂತರದ ಕಾಲದಲ್ಲೂ ಹತ್ತಾರು ಹೋರಾಟಗಳಲ್ಲಿ ಬಾಗಿಯಾಗಿ ಜೈಲುವಾಸ ಅನುಭವಿಸಿದ್ದಕ್ಕೆ ಸಾಕ್ಷಿಗಳಿವೆ. ಅವರು ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ 14 ತಿಂಗಳು ಜೈಲುವಾಸ ಅನುಭವಿಸಿದ್ದಕ್ಕೆ ದಾಖಲೆ ಇದೆ.  ತುರ್ತು ಪರಿಸ್ಥಿತಿಯಲ್ಲಿ ಜೈಲಿಗೆ ಹೋಗಿದ್ದರು. ದಲಿತರು, ಒಬಿಸಿ ಸೇರಿದಂತೆ ಹಲವು ಹೋರಾಟ ಮಾಡಿದವರು. ನಾನು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಸರ್ಕಾರದ ವಿರುದ್ಧವೂ ಪ್ರತಿಭಟನೆ ನಡೆಸಿದ್ದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ನನ್ನ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದ್ದಾಗಲೂ ಅವರು ಆಡಳಿತರೂಢ ಸರ್ಕಾರದ ವಿರುದ್ಧ ಅನೇಕ ಗಮನಾರ್ಹ ಪ್ರತಿಭಟನೆಗಳನ್ನು ಹೋರಾಟಗಳನ್ನು ನಡೆಸಿರುವ ಸಾಕಷ್ಟು ಉದಾಹರಣೆಗಳಿವೆ. ದಲಿತರು ಹಿಂದುಳಿದವರಿಗಾಗಿ ನಿರಂತರ ಹೋರಾಟ ನಡೆಸಿದ್ದಾರೆ. ಅಂತಹ ವ್ಯಕ್ತಿಯ ಬಗ್ಗೆ ಶಾಸಕ ಯತ್ನಾಳ್ ಇಂತಹ ಕೀಳು ಮಟ್ಟದ ಹೇಳಿಕೆ ನೀಡಿರುವುದು ಸರಿಯಲ್ಲ. ಆದರೆ, ಈ ಕುರಿತು ಸದನದಲ್ಲಿ ಚರ್ಚೆಗೆ ಅವಕಾಶ ಕೇಳಿದ್ರೆ ಸ್ಪೀಕರ್ ಕಾನೂನು ಸಚಿವರನ್ನು ಕೇಳಬೇಕು ಎನ್ನುವ ಮೂಲಕ ಸದನವನ್ನು ತಪ್ಪು ದಾರಿಗೆ ಎಳೆದಿದ್ದಾರೆ” ಎಂದು ಸಿದ್ದು ಕಿಡಿಕಾರಿದರು.

ಇನ್ನು ಸ್ಪೀಕರ್​ಗೆ ವಿಶೇಷ ಅಧಿಕಾರ ಇದೆ. ಆದರೆ, ಕಾನೂನು ಸಚಿವರನ್ನು ಕೇಳಿ ಹೇಳುತ್ತಾರೆ. ಸಂವಿಧಾನ ಇಲ್ಲ ಅಂದಿದ್ರೆ ನಾವು ಶಾಸಕರಾಗ್ತಿರಲಿಲ್ಲ, ಇಲ್ಲಿ ದೊರೆಸ್ವಾಮಿ ಮುಖ್ಯ ಅಲ್ಲ, ಇಡೀ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿರುವ ಅವಮಾನ ಹಾಗೂ ದೇಶದ್ರೋಹದ ಕೆಲಸ, ಸದನಕ್ಕೆ ಅಗೌರವ ಕೊಡುವ ರೀತಿ ವರ್ತನೆ ಮಾಡಿದ್ರೆ ಅವರನ್ನು ಅಮಾನತು ಮಾಡಬೇಕು ಎಂದರು.

ಸದನಕ್ಕೆ ಅಗೌರವ ತೋರುವ‌ ಸದಸ್ಯರನ್ನು ಅಮಾನತು ಮಾಡಬೇಕೆಂದು ಮಧ್ಯಪ್ರದೇಶ ಹೈಕೋರ್ಟ್ ಆದೇಶ ನೀಡಿತ್ತು. ಆ ತೀರ್ಪನ್ನು ಆಧಾರವಾಗಿಟ್ಟುಕೊಂಡು ಯತ್ನಾಳ್ ಅವರನ್ನು ಅಮಾನತು ಮಾಡುವಂತೆ ಸಭಾಧ್ಯಕ್ಷರಲ್ಲಿ ಒತ್ತಾಯ ಮಾಡಿದ್ದೇವೆ. ಆದರೆ ನಮಗೆ ಮಾತನಾಡಲು ಅವಕಾಶವನ್ನೇ ನೀಡದಿರುವ ಸಭಾಧ್ಯಕ್ಷರ ವರ್ತನೆ ಸರಿ ಅಲ್ಲ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...