Homeಚಳವಳಿರೈತ ಹೋರಾಟಕ್ಕೆ ಒಂದು ವರ್ಷ: ಇಂದಿನ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ

ರೈತ ಹೋರಾಟಕ್ಕೆ ಒಂದು ವರ್ಷ: ಇಂದಿನ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ

- Advertisement -

ದೆಹಲಿ ಗಡಿಗಳಲ್ಲಿ ರೈತ ಹೋರಾಟ ಆರಂಭವಾಗಿ ನವೆಂಬರ್ 26ಕ್ಕೆ ಒಂದು ವರ್ಷ. ಈ ಐತಿಹಾಸಿಕ ಹೋರಾಟದ ದಿನಕ್ಕೆ ಸಾಕ್ಷಿಯಾಗಲು ಸಾವಿರಾರು ರೈತರು ಈಗಾಗಲೇ ಪ್ರತಿಭಟನಾ ನಿರತ ಗಡಿಗಳಲ್ಲಿ ಬಂದು ಸೇರಿದ್ದಾರೆ. ಇಂದು (ನ.26) ಚಳವಳಿಯ ’ಭಾಗಶಃ ವಿಜಯ’ ಆಚರಿಸಲಾಗುವುದು ಮತ್ತು ಉಳಿದ ಹಕ್ಕೊತ್ತಾಯಗಳನ್ನು ಪೂರೈಸುವಂತೆ ಒತ್ತಾಯಿಸಲಾಗುವುದು’ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.

ಇಂದು ದೇಶಾದ್ಯಂತ ನಡೆಯಲಿರುವ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ. ದೆಹಲಿಯಿಂದ ದೂರವಿರುವ ರಾಜ್ಯಗಳ ರಾಜಧಾನಿಗಳಲ್ಲಿ, ವಿವಿಧ ಬಗೆಯ ಪ್ರತಿಭಟನೆಗಳ ಜೊತೆಗೆ ಟ್ರ್ಯಾಕ್ಟರ್ ರ್‍ಯಾಲಿಗಳನ್ನು ಆಯೋಜಿಸಲಾಗುವುದು. ರೈತ ಹೋರಾಟವನ್ನು ಬೆಂಬಲಿಸಿ ವಿಶ್ವದಾದ್ಯಂತ ಅಂತರಾಷ್ಟ್ರೀಯ ರೈತ ಸಂಘಟನೆಗಳು ಮತ್ತು ಭಾರತೀಯ ವಲಸಿಗರು ‘ಐಕ್ಯತಾ ಕಾರ್ಯಕ್ರಮ’ಗಳನ್ನು ನಡೆಸಲು ಯೋಜನೆ ರೂಪಿಸಿವೆ ಎಂದು ಎಸ್‌ಕೆಎಂ ತಿಳಿಸಿದೆ.

“ನವೆಂಬರ್ 26 ರಂದು, ಮಧ್ಯಾಹ್ನ 12 ರಿಂದ 2 ರವರೆಗೆ ಲಂಡನ್‌ನಲ್ಲಿ ಭಾರತೀಯ ಹೈಕಮಿಷನ್ ಎದುರು ಪ್ರತಿಭಟನೆ ನಡೆಯಲಿದೆ. ಅದೇ ದಿನ, ವ್ಯಾಂಕೋವರ್, ಕೆನಡಾದ ಸರ್ರೆಯಲ್ಲಿ ಪ್ರತಿಭಟನೆ ಇರುತ್ತದೆ. ನವೆಂಬರ್ 30 ರಂದು ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ಪ್ರತಿಭಟನೆ ನಡೆಯಲಿದೆ. ಡಿಸೆಂಬರ್ 4 ರಂದು ಕ್ಯಾಲಿಫೋರ್ನಿಯಾದಲ್ಲಿ ಕಾರ್ ರ್ಯಾಲಿ ಮತ್ತು ನ್ಯೂಯಾರ್ಕ್ ನಲ್ಲಿ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಸ್ಯಾನ್ ಜೋಸ್ ಗುರುದ್ವಾರದಲ್ಲಿ ರೈತ ಹುತಾತ್ಮರ ಸ್ಮರಣಾರ್ಥ ಮತ್ತು ಮೇಣದಬತ್ತಿಯ ಜಾಗರಣೆ ನಡೆಯಲಿದೆ. ಡಿಸೆಂಬರ್ 8 ರಂದು ಆಸ್ಟ್ರಿಯಾದ ವಿಯೆನ್ನಾದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದೆ” ಎಂದು ಎಸ್‌ಕೆಎಂ ತಿಳಿಸಿದೆ.

ಇದನ್ನೂ ಓದಿ: ನವೆಂಬರ್‌ 29 ರಂದು 60 ಟ್ರ್ಯಾಕ್ಟರ್‌ಗಳಲ್ಲಿ ಸಂಸತ್ತಿಗೆ ಮೆರವಣಿಗೆ: ರಾಕೇಶ್ ಟಿಕಾಯತ್

ಕರ್ನಾಟಕ: ನವೆಂಬರ್ 26 ರಾಜ್ಯದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳ ಬಂದ್

ಕೇಂದ್ರ ಸರ್ಕಾರ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳುವುದಾಗಿ ಘೋಷಿಸಿದೆ. ಆದರೆ ಕೇಂದ್ರಕ್ಕೆ ಅನುಗುಣವಾಗಿ ಕರ್ನಾಟಕ ರಾಜ್ಯವು ಎಪಿಎಂಸಿ ಮತ್ತು ಭೂಸುಧಾರಣ ಕಾಯ್ದೆಗೆ ತಂದಿರುವ ತಿದ್ದುಪಡಿಗಳನ್ನು ವಾಪಸ್ ಪಡೆದುಕೊಳ್ಳಬೇಕೆಂದು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹಿಸಿದೆ. ಅದಕ್ಕಾಗಿ ಇಂದು ರಾಜ್ಯದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟಿಸಲು ಕರೆ ನೀಡಿದೆ.

ಬೆಂಗಳೂರಿನ ಹೊಸಕೋಟೆ, ದೇವನಹಳ್ಳಿ ಬಳಿ ಹೆದ್ದಾರಿ ಬಂದ್ ಹೋರಾಟ ನಡೆಯಲಿದೆ. ಅಲ್ಲದೆ ರಾಮನಗರ, ಮಂಡ್ಯ, ರಾಯಚೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಹೆದ್ದಾರಿ ಬಂದ್ ಹೋರಾಟ ನಡೆಯಲಿದೆ ರೈತ ಮುಖಂಡರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ್‌ರವರು ಮಾತನಾಡಿ, “ಕೇಂದ್ರದ ಕರಾಳ ಕಾಯ್ದೆಗಳು ಸಂಸತ್ತಿನಲ್ಲಿ ರದ್ದುಗೊಳ್ಳಬೇಕಿದೆ. ಜೊತೆಗೆ ಎಂಎಸ್‌ಪಿ ಜಾರಿಗೆ ಕಾನೂನು ಬೇಕೆಂದು ಆಗ್ರಹಿಸಿ ಚಳವಳಿ ಮುಂದುವರೆಯಲಿದೆ. ಕರ್ನಾಟಕ ಸರ್ಕಾರ ತಿದ್ದುಪಡಿ ಮಾಡಿರುವ ಮೂರು ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ನವೆಂಬರ್ 26 ರಂದು ಹೆದ್ದಾರಿ ಬಂದ್ ನಡೆಯಲಿದೆ. ಸಾರ್ವಜನಿಕರು ಅಂದು ಪ್ರಯಾಣ ಮಾಡದೇ ರೈತ ಹೋರಾಟಕ್ಕೆ ಬೆಂಬಲಿಸಿಬೇಕು” ಎಂದು ಮನವಿ ಮಾಡಿದ್ದಾರೆ.

ಬೆಂಗಳೂರಿನಿಂದ ಶ್ರೀರಂಗಪಟ್ಟಣದ ಕಡೆಗೆ ಈಗಾಗಲೇ ಬೈಕ್ ರ್‍ಯಾಲಿ ನಡೆಯುತ್ತಿದೆ.

ಇದನ್ನೂ ಓದಿ: ಎಂಸ್‌ಪಿಯತ್ತ ರೈತರ ಚಿತ್ತ: ದೆಹಲಿ ಗಡಿಗಳತ್ತ ಮುನ್ನುಗ್ಗುತ್ತಿರುವ ಪ್ರತಿಭಟನಾಕಾರರ ದಂಡು

+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಎಸ್‌‌ಪಿ ನಾಯಕ ಮುಲಾಯಂ ಸೊಸೆ ಬಿಜೆಪಿಗೆ ಸೇರ್ಪಡೆ: ಮಾಧ್ಯಮಗಳಲ್ಲಿ ಮರೆಯಾದ ಒಂದು ಅಂಶ!

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್ ಅವರ ಸೊಸೆ ಅಪರ್ಣಾ ಯಾದವ್‌ ಅವರು ಬಿಜೆಪಿ ಸೇರಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ. ಎಸ್‌ಪಿಗೆ ಹಿನ್ನೆಡೆಯಾಗುವ ಸಾಧ್ಯತೆ ಎಂದು ಕೆಲವು...
Wordpress Social Share Plugin powered by Ultimatelysocial