Homeಮುಖಪುಟಯಡಿಯೂರಪ್ಪ ಮುಖ್ಯಮಂತ್ರಿ ಅಷ್ಟೇ - ಬಸನಗೌಡ ಪಾಟೀಲ್ ಯತ್ನಾಳ್

ಯಡಿಯೂರಪ್ಪ ಮುಖ್ಯಮಂತ್ರಿ ಅಷ್ಟೇ – ಬಸನಗೌಡ ಪಾಟೀಲ್ ಯತ್ನಾಳ್

- Advertisement -
- Advertisement -

ಭಿನ್ನಮತೀಯ ಶಾಸಕರು ಸಭೆ ಸೇರಿ ಯಡಿಯೂರಪ್ಪ ವಿರುದ್ಧ ಚರ್ಚಿಸಿದ್ದಾರೆ ಎಂಬ ವರ್ತಮಾನದ ಬೆನ್ನಿಗೇ ಯಡಿಯೂರಪ್ಪ ಮುಖ್ಯಮಂತ್ರಿ ಅಷ್ಟೇ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡುವ ಮೂಲಕ ಮತ್ತುಷ್ಟು ವಿವಾದಕ್ಕೆ ಕಾರಣರಾಗಿದ್ದಾರೆ.

ಹಿಂದೆ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ ನಮ್ಮ ನಾಯಕರಾಗಿದ್ದರು. ಈಗ ನರೇಂದ್ರ ಮೋದಿ, ಅಮಿತ್ ಶಾ ಮತ್ತು ಜೆ.ಪಿ.ನಡ್ಡಾ ನಮ್ಮ ನಾಯಕರು. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಅಷ್ಟೇ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ನಾಯಕತ್ವವನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದಾರೆ.

ಸಚಿವ ಸ್ಥಾನ ವಂಚಿತರಾಗಿರುವ ಉಮೇಶ್ ಕತ್ತಿ ಅವರ ಬೆಂಗಳೂರಿನ ನಿವಾಸದಲ್ಲಿ ಐವರು ಬಿಜೆಪಿ ಶಾಸಕರು ಒಂದೆಡೆ ಸೇರಿ ಬಂಡಾಯದ ಮುನ್ಸೂಚನೆಯನ್ನು ನೀಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬೆನ್ನಿಗೆ ನಿಂತಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ತಮ್ಮ ರಾಗ ಬದಲಿಸಿದ್ದಾರೆ.

ನಾವು ಉಮೇಶ್ ಕತ್ತಿ ನಿವಾಸದಲ್ಲಿ ಸೇರಿ ಊಟ, ಮಾವಿನ ಹಣ್ಣು ಸೇವಿಸಿದ್ದೇವೆ. ಹರಟೆ ಹೊರದಿದ್ದೇವೆ. ಸಣ್ಣ ಪುಟ್ಟ ರಾಜಕೀಯ ವಿಚಾರ ಮಾಡಿದ್ದೇವೆ. ಅದೇ ವಿಷಯವನ್ನು ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲ. ನಾವು ಮುಖ್ಯಮಂತ್ರಿಗಳ ವಿರುದ್ದವಾಗಲೀ, ಹೈಕಮಾಂಡ್ ವಿರುದ್ಧವಾಗಲೀ ಸಭೆ ನಡೆಸಿಲ್ಲ ಯತ್ನಾಳ್‌ ಹೇಳಿದ್ದಾರೆ.

ನಾಯಕತ್ವದ ಬದಲಾವಣೆ ಕುರಿತು ನಾನು ಏನೂ ಹೇಳಲಾರೆ. ನಾಯಕತ್ವ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟಿದ್ದು. ಬದಲಾವಣೆ ಮಾಡಿದರೂ ಒಪ್ಪುತ್ತೇವೆ. ಮುಂದುವರಿಯಲಿ ಅಂದರೂ ಬದ್ದರಾಗಿರುತ್ತೇವೆ. ಹೈಕಮಾಂಡ್ ಏನು ಹೇಳುತ್ತೋ ಅದನ್ನಷ್ಟೇ ಪಾಲಿಸುತ್ತೇವೆ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದವಾಗಿರುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಅಭಿವೃದ್ದಿ ಕೆಲಸಗಳು ಆಗಿಲ್ಲ. ಅದನ್ನು ಮುಖ್ಯಮಂತ್ರಿಗೂ ಹೇಳಿದ್ದೇವೆ. ನೀವು ಬಂದು ಮುಖ್ಯಮಂತ್ರಿಗಳ ಮುಂದೆ ಹೇಳಿ ಅಂದರೂ ನೇರವಾಗಿ ಹೇಳುತ್ತೇನೆ. ನನಗೆ ಹಣ ಬಿಡುಗಡೆ ಆಗಿಲ್ಲ. ಅದಕ್ಕೆ ಅಸಮಾಧಾನ ಇರುವುದು ಸತ್ಯ ಎಂದು ವಿವರಿಸಿದ್ದಾರೆ.

ನಾನು ಸಚಿವ ಸ್ಥಾನ ಕೇಳಿಲ್ಲ. ಕೇಳುವುದೂ ಇಲ್ಲ. ಯಡಿಯೂರಪ್ಪ ಇರುವವರೆಗೂ ಅವರನ್ನು ಕೇಳುವುದಿಲ್ಲ. ಹಿರಿಯರು ಅವರು. ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿದವರಲ್ಲಿ ಯಡಿಯೂರಪ್ಪ, ಅನಂತಕುಮಾರ್ ಮತ್ತು ಈಶ್ವರಪ್ಪ, ಮಲ್ಲಿಕಾರ್ಜುನಯ್ಯ, ಆನಂತರ ನಾನೇ ಹಿರಿಯ. ಪಕ್ಷಕ್ಕಾಗಿ ದುಡಿದವರಲ್ಲಿ ಒಬ್ಬ ಎಂದು ಹೇಳಿಕೊಂಡಿದ್ದಾರೆ.

ನಮ್ಮಲ್ಲಿ ಹೈಕಮಾಂಡ್ ಬಲಿಷ್ಠವಾಗಿದೆ. ಅವರ ವಿರುದ್ದ ಮಾತನಾಡಲಾರೆವು. ಉಮೇಶ್ ಕತ್ತಿ ಅವರಿಗೆ ಸಚಿವರ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿಗಳೇ ಹೇಳಿದ್ದಾರೆ. ನುಡಿದಂತೆ ನಡೆಯಬೇಕು. ರಮೇಶ್ ಕತ್ತಿ ಅವರಿಗೆ ರಾಜ್ಯಸಭಾ ಸದಸ್ಯ ಸ್ಥಾನವನ್ನೂ ಕೇಳಿಲ್ಲ. ಸಣ್ಣಪುಟ್ಟ ರಾಜಕೀಯ ವಿಚಾರಗಳು ಚರ್ಚೆಯಾಗಿದೆಯೇ ಹೊರತು  ಅಸಮಾಧಾನ ವ್ಯಕ್ತವಾಗಿಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.


ಇದನ್ನೂ ಓದಿ: ಬಿಜೆಪಿಯಲ್ಲಿ ಮತ್ತೆ ಭುಗಿಲೆದ್ದ ಭಿನ್ನಮತ; ಬಿಎಸ್‌ವೈ ಸ್ಥಾನಕ್ಕೆ ’ಕತ್ತಿ’ಯಿಂದ ಕುತ್ತು? 


Also Read: Karnataka government drops naming of flyover after “Veer” Savarkar

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...