ಮೈತ್ರಿ ಸರ್ಕಾರದ ಶಾಸಕರಿಗೆ ಯಡಿಯೂರಪ್ಪ ಹಣದ ಆಮಿಷ: ತನಿಖೆಗೆ ಆದೇಶಿಸಿದ ಕೋರ್ಟ್

2019ರಲ್ಲಿ ಮೈತ್ರಿ ಸರ್ಕಾರವನ್ನು ಬೀಳಿಸುವಲ್ಲಿ ಸಿಎಂ ಯಡಿಯೂರಪ್ಪ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನುವುದಕ್ಕೆ ಆಡಿಯೋ ಕ್ಲಿಪ್ ಸಾಕ್ಷಿಯಿತ್ತು. ಆದರೆ ಇದರ ತನಿಖೆಗೆ ಯಯಡಿಯೂರಪ್ಪ ತಡೆಯಾಜ್ಞೆ ತಂದಿದ್ದರು. ಆದರೆ ಈಗ ಹೈಕೋರ್ಟ್‌ನ ಕಲಬುರ್ಗಿಯ ವಿಶೇಷ ನ್ಯಾಯಪೀಠ ಈ ಪ್ರಕರಣವನ್ನು ತನಿಖೆ ನಡೆಸಲು ಆದೇಶ ನೀಡಿದೆ.

ಹೆಚ್​.ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್​-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸುವ ನಿಟ್ಟಿನಲ್ಲಿ 2019ರಲ್ಲಿ ಅಂದಿನ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಸಾಕಷ್ಟು ಕಸರತ್ತು ನಡೆಸಿದ್ದರು. ಕಾಂಗ್ರೆಸ್​-ಜೆಡಿಎಸ್​ ಶಾಸಕರನ್ನು ಸಂಪರ್ಕಿಸಿ ಅವರಿಗೆ ಹಣದ ಆಮಿಷವೊಡ್ಡಿ ಬಿಜೆಪಿ ಸರ್ಕಾರ ರಚಿಸಲು ಯತ್ನಿಸಿದ್ದರು. ಈ ಸಂಬಂಧ ಬಿಡುಗಡೆಯಾಗಿದ್ದ ಬಿ.ಎಸ್.​ ಯಡಿಯೂರಪ್ಪ​ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್​ ರಾಜ್ಯದಲ್ಲಿ ದೊಡ್ಡ ಮಟ್ಟದ ಸಂಚಲನವನ್ನು ಸೃಷ್ಟಿ ಮಾಡಿತ್ತು.

ತಮ್ಮ ತಂದೆಯ ಕಡೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಆಮಿಷವೊಡ್ಡಲಾಗಿತ್ತು ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಪುತ್ರ ಶರಣಗೌಡ ಪಾಟೀಲ ಕಂದಕೂರ ಅವರಿಂದ ಬಿ.ಎಸ್.​ ಯಡಿಯೂರಪ್ಪ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಲ್ಲದೆ, ಈ ಕುರಿತ ಆಡಿಯೋ ಸಹ ಬಿಡುಗಡೆಯಾಗಿತ್ತು.

ಇದನ್ನೂ ಓದಿ: ಇಶ್ರತ್ ಜಹಾನ್ ನಕಲಿ ಎನ್ಕೌಂಟರ್: 3 ಪೊಲೀಸರನ್ನು ಬಿಡುಗಡೆ ಮಾಡಿದ ಸಿಬಿಐ ಕೋರ್ಟ್

2019 ರಲ್ಲಿ ಬಿ.ಎಸ್​. ಯಡಿಯೂರಪ್ಪ ಆಪರೇಷನ್ ಕಮಲದ ಆಡಿಯೋ ಬಿಡುಗಡೆಯಾಗುತ್ತಿದ್ದಂತೆ ಅಂದಿನ ಸ್ಪೀಕರ್​ ರಮೇಶ್​ ಕುಮಾರ್​ ಈ ಪ್ರಕರಣವನ್ನು ಎಸ್​ಐಟಿ ತನಿಖೆಗೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದರು. ಆದರೆ, ಅಂದಿನ ಸಿಎಂ ಕುಮಾರಸ್ವಾಮಿ ಈ ಪ್ರಕರಣವನ್ನು ಎಸ್​ಐಟಿ ತನಿಖೆಗೆ ನೀಡಿರಲಿಲ್ಲ. ಆದರೆ, ಪೊಲೀಸ್​ ಠಾಣೆಯಲ್ಲಿ ಸಲ್ಲಿಸಿದ ದೂರಿನ ಮೇಲೆ ಪೊಲೀಸರು ತನಿಖೆ ಕೈಗೊಳ್ಳಲೇಬೇಕಿತ್ತು.

ಆದರೆ, ಬಿಜೆಪಿ ನಾಯಕರು ಕಲಬುರ್ಗಿ ಹೈಕೋರ್ಟ್ ಪೀಠದಲ್ಲಿ ಪ್ರಕರಣದ ತನಿಖೆಗೆ ತಡೆಯಾಜ್ಞೆ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ನಂತರ ಈ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು. ಹೀಗಾಗಿ ತಡೆಯಾಜ್ಞೆ ತೆರೆವುಗೊಳಿಸುವಂತೆ ಶರಣಗೌಡ ಪಾಟೀಲ ಕಂದಕೂರರಿಂದ ಮೇಲ್ಮನವಿ ಸಲ್ಲಿಸಲಾಗಿತ್ತು. ಶರಣಗೌಡ ಕಂದಕೂರ ಪರ ಹಿರಿಯ ನ್ಯಾಯವಾದಿ ರವಿವರ್ಮ ಕುಮಾರ್ ಮತ್ತು ಪಿ.ವಿಲಾಸ್ ಕುಮಾರ್ ರಿಂದ ವಾದ ಮಂಡನೆ ಮಾಡಲಾಗಿತ್ತು.

ಯಡಿಯೂರಪ್ಪ ಪರ ಅಶೋಕ್ ಹಾರನಹಳ್ಳಿ, ಸಿ.ವಿ.ನಾಗೇಶ್ ಮತ್ತು ಸರ್ಕಾರಿ ವಕೀಲರಿಂದ ವಾದ ಮಂಡನೆ ಮಾಡಲಾಗಿತ್ತು. ಕೊನೆಗೆ ವಾದ ವಿವಾದ ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಯಡಿಯೂರಪ್ಪ ವಿರುದ್ಧದ ಅಪರೇಷನ್ ಕಮಲ ಆಡಿಯೋ ಪ್ರಕರಣದ ತನಿಖೆಗೆ ಅವಕಾಶ ಕಲ್ಪಿಸಿ ಆದೇಶಿಸಿದೆ. ಇದು ಯಡಿಯೂರಪ್ಪನವರಿಗೆ ಮತ್ತೊಂದು ಆಘಾತ ತಂದಿದೆ.


ಇದನ್ನೂ ಓದಿ: ಯಡಿಯೂರಪ್ಪ ಆಪರೇಷನ್ ಕಮಲದ ಪಿತಾಮಹ: ಸಿದ್ದರಾಮಯ್ಯ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
+ posts

LEAVE A REPLY

Please enter your comment!
Please enter your name here