Homeಮುಖಪುಟಅನಾರೋಗ್ಯದ ಕಾರಣ ಮುಂದಿಟ್ಟು ರಾಜೀನಾಮೆಗೆ ಮುಂದಾದ ಯಡಿಯೂರಪ್ಪ?

ಅನಾರೋಗ್ಯದ ಕಾರಣ ಮುಂದಿಟ್ಟು ರಾಜೀನಾಮೆಗೆ ಮುಂದಾದ ಯಡಿಯೂರಪ್ಪ?

- Advertisement -
- Advertisement -

ರಾಜ್ಯದ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಅನಾರೋಗ್ಯದ ಕಾರಣ ಮುಂದಿಟ್ಟು ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಅವರು ಶುಕ್ರವಾರ ಸಂಜೆ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದರು. ಯಡಿಯೂರಪ್ಪ ಅವರ ನಾಯಕತ್ವದ ಕುರಿತು ಹಿಂದಿನಿಂದಲೂ ಪಕ್ಷದ ಆಂತರಿಕ ವಲಯದಲ್ಲಿ ಅಸಮಾಧಾನಗಳು ಹೊಗೆಯಾಡುತ್ತಲೆ ಇದ್ದವು.

ಅವರು ರಾಜೀನಾಮೆಯನ್ನು ಸ್ವೀಕರಿಸಬೇಕೆ ಎಂದು ಇದೀಗ ಪಕ್ಷದ ಹೈಕಮಾಂಡ್‌ ನಿರ್ಧರಿಸಬೇಕಿದೆ. ಒಂದು ವೇಳೆ ಪಕ್ಷವು ಅವರನ್ನು ಬದಲಾಯಿಸಲು ತೀರ್ಮಾನಿಸಿದರೆ, ಜುಲೈ 26 ರೊಳಗೆ ನಾಯಕತ್ವದ ಬದಲಾವಣೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಆದರೆ ಇದುವರೆಗೂ ಮುಂದಿನ ಮುಖ್ಯಮಂತ್ರಿ ಯಾರು ಎಂಬುವುದು ಇನ್ನೂ ತೀರ್ಮಾನ ಆಗಿಲ್ಲ ಎಂದು ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಹೇಳಿದೆ.

ಇದನ್ನೂ ಓದಿ: ದೇವರೆ ಶಿಕ್ಷೆ ಕೊಡುವ ಕಾಲ‌ ಬರುತ್ತದೆ’: ಯಡಿಯೂರಪ್ಪ ವಿರುದ್ದ ರೇವಣ್ಣ ಕಿಡಿ

ಆದಾಗ್ಯೂ, ಯಡಿಯೂರಪ್ಪ ಅವರು ಪ್ರಧಾನ ಮಂತ್ರಿಯೊಂದಿಗಿನ ಭೇಟಿಯ ನಂತರ ನಡೆದ ಬೆಳವಣಿಗೆಯ ಬಗ್ಗೆಗಿನ ಊಹಾಪೋಹಗಳನ್ನು ಶನಿವಾರ ಬೆಳಿಗ್ಗೆ ತಳ್ಳಿಹಾಕಿದ್ದಾರೆ. “ಇದರಲ್ಲಿ ಯಾವುದೇ ಸತ್ಯವಿಲ್ಲ” ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಬೆಳಿಗ್ಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪ್ರಧಾನಮಂತ್ರಿಯವರ ಭೇಟಿಯ ನಂತರ ಮುಖ್ಯಮಂತ್ರಿ ಕಚೇರಿಯಿಂದ ಬಂದ ಹೇಳಿಕೆಯು, “ಪ್ರಧಾನಿ ಮತ್ತು ಮುಖ್ಯಮಂತ್ರಿ ಬೆಂಗಳೂರು ಪೆರಿಫೆರಲ್ ರಿಂಗ್ ರೋಡ್ ಯೋಜನೆ ಮತ್ತು ಮೇಕೆದಾಟು ಯೋಜನೆ ಸೇರಿದಂತೆ ಹಲವಾರು ಯೋಜನೆಗಳ ಬಗ್ಗೆ ಚರ್ಚಿಸಿದ್ದಾರೆ” ಎಂದು ಹೇಳಿದೆ.

ಯಡಿಯೂರಪ್ಪ ಅವರು ಶನಿವಾರ ತಮ್ಮ ಮಗ ವಿಜಯೇಂದ್ರ ಅವರೊಂದಿಗೆ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದರು.

ಇದನ್ನೂ ಓದಿ: ಯಡಿಯೂರಪ್ಪನವರ ವಿಶೇಷ ಪ್ಯಾಕೇಜ್‌ನಲ್ಲಿ ನೇಕಾರರಿಗೆ ಸಿಕ್ಕಿದ್ದೆಷ್ಟು? ವಿಡಿಯೋ ನೋಡಿ

ರಾಜ್ಯದ ಹಲವಾರು ನಾಯಕರು ಮುಖ್ಯಮಂತ್ರಿಯ ವಿರುದ್ದ ಬಹಿರಂಗವಾಗಿಯೆ ಅಸಮಾಧಾನ ವ್ಯಕ್ತಪಡಿಸಿದ್ದರು. ರಾಜ್ಯ ನಾಯಕತ್ವದ ವಿರುದ್ದ ಪಕ್ಷದ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಲ್, ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ ಮತ್ತು ವಿಧಾನ ಪರಿಷತ್ ಸದಸ್ಯ ಎಚ್. ​​ವಿಶ್ವನಾಥ್ ಅವರು ನಿರಂತರ ದಾಳಿ ನಡೆಸುತ್ತಲೆ ಇದ್ದಾರೆ. ಸಿಎಂ ಪುತ್ರ ವಿಜಯೇಂದ್ರ ಅವರು ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬುವುದು ಪ್ರಮುಖ ಆರೋಪವಾಗಿದೆ.

ಇತ್ತೀಚೆಗಷ್ಟೇ ಬಿಜೆಪಿಯ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಭೇಟಿ ನೀಡಿ ಆಡಳಿತ ಪಕ್ಷದ ಶಾಸಕರನ್ನು ಭೇಟಿ ಮಾಡಿದ್ದರು. ಈ ಭೇಟಿಯ ನಂತರ ಅವರು ಮುಖ್ಯಮಂತ್ರಿಗೆ ಪಕ್ಷದಲ್ಲಿ ಬೆಂಬಲವಿದ್ದು, ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ ಎಂದು ಹೇಳಿದ್ದರು. ಇದರ ನಂತರ ಕೂಡಾ ಯಡಿಯೂರಪ್ಪ ಅವರ ವಿರೋಧಿ ಬಣದ ಕಚ್ಚಾಟಗಳು ನಿಂತಿರಲಿಲ್ಲ.

ಇದನ್ನೂ ಓದಿ: ಮೋದಿ ಮೆಚ್ಚಿಸಿ, ಕುರ್ಚಿ ಉಳಿಸಿಕೊಳ್ಳಲು ಹಿಂದಿ ಜಾಹೀರಾತಿಗೆ ಕೋಟ್ಯಾಂತರ ರೂ. ಸುರಿಯುತ್ತಿರುವ ಯಡಿಯೂರಪ್ಪ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...