Homeಮುಖಪುಟದ್ವೇಷ ಸುದ್ದಿಗಳ ವಿರುದ್ಧದ ಯಡಿಯೂರಪ್ಪನವರ ದೃಢ ನಿಲುವು ಸೂಕ್ತ, ಸ್ವಾಗತಾರ್ಹ: ಎಚ್‌.ಡಿ.ಕೆ

ದ್ವೇಷ ಸುದ್ದಿಗಳ ವಿರುದ್ಧದ ಯಡಿಯೂರಪ್ಪನವರ ದೃಢ ನಿಲುವು ಸೂಕ್ತ, ಸ್ವಾಗತಾರ್ಹ: ಎಚ್‌.ಡಿ.ಕೆ

- Advertisement -
- Advertisement -

ಸಮುದಾಯಗಳ ನಡುವೆ ಪರಸ್ಪರ ಸಂಘರ್ಷಕ್ಕೆ ಪ್ರಚೋದಿಸುವ ದುಷ್ಕರ್ಮಿಗಳ ವಿರುದ್ಧ ಮುಖ್ಯಮಂತ್ರಿಗಳು ತಾಳಿದ ದೃಢ ನಿಲುವು ಸೂಕ್ತ ಮತ್ತು ಸ್ವಾಗತಾರ್ಹ. ಆದರೆ ಯಡಿಯೂರಪ್ಪನವರ ಸ್ಪಷ್ಟ ಎಚ್ಚರಿಕೆಯ ನಂತರವೂ ಅನೇಕ ಮಾಧ್ಯಮಗಳು ಸಂಕುಚಿತ ಮನೋಭಾವನೆಯ ದ್ವೇಷಕಾರಿಕೊಳ್ಳುತ್ತಿವೆ ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಹಿಂದೆಂದೂ ಕಂಡರಿಯದ ರಾಷ್ಟ್ರೀಯ ಅರೋಗ್ಯ ಸಂಕಟದ ಈ ದಿನಗಳಲ್ಲಿ ಕೋಮು ದ್ವೇಷ ಹೊತ್ತಿಸುವುದು ಅಕ್ಷಮ್ಯ ಅಪರಾಧ. ಅಪರಾಧಿಗಳ ವಿರುದ್ಧ ತಕ್ಷಣವೇ ಕಠಿಣ ಕ್ರಮ ಜರುಗಿಸದೇ ಹೋದರೆ ರಾಜ್ಯವೇ ಕೋಮುದಳ್ಳುರಿಗೆ ಬಲಿಯಾಗುವ ಅಪಾಯ ತಪ್ಪಿದ್ದಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರಿಂಟ್, ಟಿವಿ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಸಮುದಾಯಗಳ ವಿರುದ್ಧ ದ್ವೇಷವನ್ನು ಬಿತ್ತರಿಸುವ ಎಲ್ಲರ ಮೇಲೂ ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಳ್ಳಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲು ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಯಾರೂ ಸಹ ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳ ಮೇಲೆ ಒಂದು ಶಬ್ಧ ಮಾತಾಡಕೂಡದು: ಯಡಿಯೂರಪ್ಪ


ನೀವು ತಳೆದ ನಿಲುವಿನ ಬಗ್ಗೆ ನಿಮ್ಮದೇ ಪಕ್ಷದ ಕೆಲವು ಜನಪ್ರತಿನಿಧಿಗಳು ಪ್ರಚೋದನಕಾರಿ ಮತ್ತು ವ್ಯತಿರಿಕ್ತ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳಾದ ನೀವು ಇಂತಹವುಗಳಿಗೂ ಕಡಿವಾಣ ಹಾಕಬೇಕಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.


ಇದನ್ನೂ ಓದಿ: ಸುಳ್ಳು ಸುದ್ದಿಗಳ ವಿರುದ್ಧ ಎಚ್ಚರಿಕೆ ಕೊಟ್ಟ ಯಡಿಯೂರಪ್ಪ ಅವರ ಹೇಳಿಕೆಗೆ ಟ್ವಿಟ್ಟರಿನಲ್ಲಿ ಪರ ವಿರೋಧದ ಟ್ರೆಂಡ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...