Homeಕರ್ನಾಟಕಸುಳ್ಳು ಸುದ್ದಿಗಳ ವಿರುದ್ಧ ಎಚ್ಚರಿಕೆ ಕೊಟ್ಟ ಯಡಿಯೂರಪ್ಪ ಅವರ ಹೇಳಿಕೆಗೆ ಟ್ವಿಟ್ಟರಿನಲ್ಲಿ ಪರ ವಿರೋಧದ ಟ್ರೆಂಡ್

ಸುಳ್ಳು ಸುದ್ದಿಗಳ ವಿರುದ್ಧ ಎಚ್ಚರಿಕೆ ಕೊಟ್ಟ ಯಡಿಯೂರಪ್ಪ ಅವರ ಹೇಳಿಕೆಗೆ ಟ್ವಿಟ್ಟರಿನಲ್ಲಿ ಪರ ವಿರೋಧದ ಟ್ರೆಂಡ್

- Advertisement -
- Advertisement -

ಕೊರೊನಾ ವೈರಸನ್ನು ಮುಸ್ಲಿಮರು ಹರಡುತ್ತಿದ್ದಾರೆ ಎಂದು ಅಪಪ್ರಚಾರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು  ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನಿನ್ನೆ ಎಚ್ಚರಿಕೆ ಕೊಟ್ಟಿರುವುದು ಭಾರಿ ವಾದ ಪ್ರತಿವಾದಗಳಿಗೆ ಎಡೆಮಾಡಿಕೊಟ್ಟಿದೆ.

ನಿನ್ನೆಯಿಂದ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆಗಳಾಗುತ್ತಿದ್ದು, ಈಗ ಟ್ವಿಟ್ಟರಿನಲ್ಲಿ ಯಡಿಯೂರಪ್ಪ ಅವರ ಹೇಳಿಕೆಯನ್ನು ಬೆಂಬಲಿಸಿ ಹಾಗೂ ವಿರೋಧಿಸುವ ಪೋಸ್ಟುಗಳು ಟ್ರೆಂಡ್ ಆಗುತ್ತಿವೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇನ್ನೊಂದು ಚಾನಲ್ ಜತೆ ಮಾತಾಡಿದಾಗಲೂ ಅದದೇ ಶಬ್ದಗಳನ್ನೂ, ಖಡಕ್ಕಾಗಿ, ಸ್ಪಷ್ಟವಾಗಿ ಹೇಳಿದ್ದಾರೆ. ಇದರಲ್ಲೂ…

Posted by Dinesh Kumar Dinoo on Monday, April 6, 2020

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬೆಂಬಲಿಸಿ ಹಲವರು ಟ್ವೀಟ್ ಮಾಡಿದ್ದು, ಮುಖ್ಯಮಂತ್ರಿಗಳು ಮಾಡಿದ್ದು ಸರಿಯಾಗಿಯೆ ಇದೆ, ಒಂದು ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ರಾಜಧರ್ಮ ಪಾಲಿಸಿದ್ದಾರೆ ಎಂದು #WeStandWithBSY ಎಂಬ ಹ್ಯಾಶ್ ಟ್ಯಾಗ್ ಬಳಸಿ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಸರೇಶ್ ಕುಮಾರ್. ಜಿ. ಆರ್ ಎನ್ನುವ ಟ್ವಿಟ್ಟರ್ ಹ್ಯಾಂಡೆಲ್ ನಿಂದ “ರಾಷ್ಟ್ರಕವಿ ಕುವೆಂಪುರವರ ವಿಶ್ವಮಾನವ ಸಂದೇಶವನ್ನ ಅರ್ಥ ಆಗುವ ರೀತಿಯಲ್ಲಿ ಮಾಧ್ಯಮಗಳಿಗೆ ಬೆವರಿಳಿಸಿದ, ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಎಂದು ತೋರಿಸಿರುವ ಯಡಿಯೂರಪ್ಪ ಜೊತೆ ಜೊತೆ ನಾವಿದ್ದೇವೆ” ಎಂದು ಟ್ವೀಟ್ ಮಾಡಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು “ಕೊರೊನಾ ಹಾವಳಿಗೆ ಜಾತಿ-ಧರ್ಮಗಳ ಬಣ್ಣಹಚ್ಚಿ ಸಮಾಜವನ್ನು ಒಡೆಯುವ ಕೆಲಸವನ್ನು ಕೆಲವರು, ಸುಳ್ಳು ಸುದ್ದಿ,ತಿರುಚಿದ ವಿಡಿಯೋ ತುಣುಕುಗಳ ಮೂಲಕ ಮಾಡುತ್ತಿದ್ದಾರೆ. ಇಂತಹವರ ಬಗ್ಗೆ ಯಡಿಯೂರಪ್ಪನವರು ಖಡಕ್ ಎಚ್ಚರಿಕೆ ನೀಡಿರುವುದನ್ನು ನಾನು ಸ್ವಾಗತಿಸಿ ಬೆಂಬಲಿಸುತ್ತೇನೆ. ಅವರು ನುಡಿದಂತೆ ನಡೆಯ ಬೇಕೆಂದು ಆಗ್ರಹಿಸುತ್ತೇನೆ” ಎಂದು ಇಂದು ಮಧ್ಯಾಹ್ನ ಟ್ವೀಟ್‌ ಮಾಡಿದ್ದರು.

ನಮ್ಮ ರಾಹುಲ್ ಎನ್ನುವ ಟ್ವಿಟ್ಟರ್ ಹ್ಯಾಂಡಲ್ “ಕೊರೋನಾ ಸೋಂಕಿನ ಜೊತೆ ಕೋಮುವಾದದ ಸೋಂಕನ್ನು ಅಂಟಿಸಬೇಡಿ ಎಂಬ ಹೇಳಿಕೆ ನೀಡಿದ ಯಡಿಯೂರಪ್ಪನವರಿಗೆ ಅಭಿನಂದನೆಗಳು. ಅನ್ಯ ಕೆಲವು ಭಾಜಪ ಮುಖಂಡರಗಳು ಇದನ್ನು ನೋಡಿ ಕಲಿಯಲಿ. ಬನ್ನಿ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಡೋಣ” ಎನ್ನುವ ಟ್ವಿಟ್ಟರ್ ಹಾಕಿ ದಿನೇಶ್ ಗುಂಡುರಾವ್ ಮಾತು ಎಂದು ಹೇಳಿ ಯಡಿಯೂರಪ್ಪರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರತೀಕ್ ಗುಪ್ತ ಎಂಬವರು “ನಾನು ಬಿಜೆಪಿಯ ಮುಖ್ಯಮಂತ್ರಿಯೊಬ್ಬರ ಪರವಾಗಿ ನಿಲ್ಲುತ್ತೇನೆ ಎಂದು ಭಾವಿಸಿಯೇ ಇರಲಿಲ್ಲ” ಎಂದು ಟ್ವೀಟ್ ಮಾಡುತ್ತಿದ್ದಾರೆ.

ಸಂಘ ಪರಿವಾರವು ಮುಸ್ಲಿಮರ ಬಗ್ಗೆ ದ್ವಂದ್ವ ನಿಲುವು ಹೊಂದಿದೆ ಎಂದು ಇನ್ನೊಂದು ಟ್ವೀಟ್ ಹೇಳಿದೆ.

ಇದಲ್ಲದೆ ಮುಖ್ಯಮಂತ್ರಿಗಳ ಹೇಳಿಕೆಗೆ ಬಿಜಿಪಿ ಬೆಂಬಲಿಗರಿಂದಲೇ ವಿರೋಧ ಎದ್ದಿದೆ. ಮುಖ್ಯಮಂತ್ರಿಗಳನ್ನು ಬದಲಿಸಿ, ನಾವು ಮುಖ್ಯಮಂತ್ರಿಗಳನ್ನು ವಿರೋಧಿಸುತ್ತೇವೆ ಎಂದು ಹೇಳಿ #WELOSTHOPEBSY ಹ್ಯಾಶ್ ಟ್ಯಾಗ್ ಮೂಲಕ ಅವರನ್ನು ಬದಲಾಯಿಸುವಂತೆ ಅಮಿತ್ ಶಾ ಅವರಿಗೆ ಮನವಿ ಮಾಡುತ್ತಿದ್ದಾರೆ.

ಚೌಕಿದಾರ್ ಅಜಯ್ ಎಂಬ ಟ್ವಿಟ್ಟರ್ ಹ್ಯಾಂಡಲ್ “ಕರ್ನಾಟಕದ ಮುಖ್ಯಮಂತ್ರಿಯನ್ನು ಬದಲಿಸಿ” ಎಂದು ಬರೆದುಕೊಂಡಿದ್ದಾರೆ.

 

ಒಟ್ಟಿನಲ್ಲಿ ಯಡಿಯೂರಪ್ಪ ಅವರ ಹೇಳಿಕೆಯೂ ರಾಜಕೀಯವಾಗಿ ಬಿಸಿ ಬಿಸಿ ಚರ್ಚೆಯನ್ನು ಉಂಟು ಮಾಡಿದ್ದು. ಸಾಮಾಜಿಕ ಜಾಲತಾಣದಾದ್ಯಂತ ಭಾರೀ ಚರ್ಚೆಯನ್ನು ಉಂಟುಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...