Homeಕರ್ನಾಟಕ"ಲೈಂಗಿಕ ಕಿರುಕುಳ ನೀಡಿರುವುದನ್ನು ಸ್ವತಃ ಯಡಿಯೂರಪ್ಪ ಒಪ್ಪಿದ್ದಾರೆ" : ಹೈಕೋರ್ಟ್‌ನಲ್ಲಿ ಸರ್ಕಾರದ ವಾದ

“ಲೈಂಗಿಕ ಕಿರುಕುಳ ನೀಡಿರುವುದನ್ನು ಸ್ವತಃ ಯಡಿಯೂರಪ್ಪ ಒಪ್ಪಿದ್ದಾರೆ” : ಹೈಕೋರ್ಟ್‌ನಲ್ಲಿ ಸರ್ಕಾರದ ವಾದ

- Advertisement -
- Advertisement -

“ಬಾಲಕಿಯ ಶರ್ಟ್ ಒಳಗೆ ಏಕೆ ಕೈ ಹಾಕಿದ್ದಿರಿ ಎಂದು ಕೇಳಿದ್ದಕ್ಕೆ, ಅವಳ ಮೇಲೆ ರೇಪ್‌ ನಡೆದಿದೆಯೊ ಇಲ್ಲವೊ ಎಂಬುವುದನ್ನು ಚೆಕ್ ಮಾಡಲು ಹಾಕಿದ್ದೆ” ಎಂದು ಸ್ವತಃ ಯಡಿಯೂರಪ್ಪನವರೇ ಸಂತ್ರಸ್ತೆಯ ತಾಯಿಗೆ ಹೇಳಿದ್ದಾರೆ. ಯಡಿಯೂರಪ್ಪನವರ ಈ ನಡೆಯಿಂದ ಲೈಂಗಿಕ ದೌರ್ಜನ್ಯ ಎಸಗಿರುವುದು ಸ್ಪಷ್ಟವಾಗಿದೆ” ಎಂದು ರಾಜ್ಯ ಸರ್ಕಾರವು ಬುಧವಾರ (ಡಿ.18) ಹೈಕೋರ್ಟ್‌ಗೆ ಹೇಳಿದೆ.

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತನ್ನ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ಬುಧವಾರ ನಡೆಯಿತು.

ಈ ವೇಳೆ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ.ರವಿವರ್ಮ ಕುಮಾರ್‌ ಅವರು “ಸ್ವತಃ ಯಡಿಯೂರಪ್ಪ ಅವರು “ಬಾಲಕಿಯ ಮೇಲೆ ರೇಪ್‌ ನಡೆದಿದೆಯೊ ಇಲ್ಲವೊ ಎಂದು ಪರಿಶೀಲಿಸಲು ಆಕೆಯ ಶರ್ಟ್‌ ಒಳಕೆ ಕೈ ಹಾಕಿದ್ದೆ” ಎಂದು ಹೇಳಿರುವಾಗ ಅವರ ಈ ಕೃತ್ಯ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯವಲ್ಲವೇ? ಲೈಂಗಿಕ ದೌರ್ಜನ್ಯ ನಡೆದಿರುವುದು ಸ್ಪಷ್ಟವಾಗಿದೆ” ಎಂದು ವಾದಿಸಿದರು.

ಪೋಕ್ಸೋ ಪ್ರಕರಣ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು.

ಪ್ರೊ. ರವಿವರ್ಮ ಕುಮಾರ್ ಅವರ ವಾದವನ್ನು ಬಲವಾಗಿ ಅಲ್ಲಗಳೆದ ಅರ್ಜಿದಾರರ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು “ಸಂತ್ರಸ್ತ ಬಾಲಕಿಯ ತಾಯಿ ಈ ಪ್ರಕರಣದಲ್ಲಿ ದೂರುದಾರರು (ಈಗ ಮೃತರಾಗಿದ್ದಾರೆ). ಆದರೆ, ಆಕೆ ಇಂತಹುದೇ ದೂರುಗಳನ್ನು ಹಲವು ಅಧಿಕಾರಿಗಳು, ಸಂಬಂಧಿಗಳು, ರಾಜಕಾರಣಿಗಳ ಮೇಲೆ ದಾಖಲಿಸಿದ್ದು, ಒಟ್ಟು 53 ದೂರುಗಳನ್ನು ದಾಖಲಿಸಿದ್ದಾರೆ” ಎಂದರು.

“ಒಂದೂವರೆ ತಿಂಗಳ ನಂತರ ಪ್ರಕರಣ ದಾಖಲಿಸಲಾಗಿದೆ. ಯಡಿಯೂರಪ್ಪ ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂಬ ಬಾಲಕಿಯ ಹೇಳಿಕೆ ಇದೆ. ವಾಸ್ತವವನ್ನು ಗಮನಿಸಿದಾಗ, ಹಲವು ಜನರ ಸಮ್ಮುಖದಲ್ಲಿ ಇಂತಹ ಘಟನೆ ನಡೆಯಲು ಸಾಧ್ಯವಿತ್ತೇ? ಬಾಲಕಿಯ ಹೇಳಿಕೆ ಆಧರಿಸಿ ಆರೋಪ ಪಟ್ಟಿ ದಾಖಲಿಸಲಾಗಿದೆ. ಕೆಲವರ ಹೇಳಿಕೆ ಪಡೆದಿದ್ದರೂ ಅವರನ್ನು ಸಾಕ್ಷಿಯಾಗಿ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿಲ್ಲ” ಎಂದು ಹೇಳಿದರು.

ಆಗ, ನ್ಯಾಯಮೂರ್ತಿ ನಾಗಪ್ರಸನ್ನ ಅವರು “ನ್ಯಾಯಾಲಯ ಈ ಹಂತದಲ್ಲಿ ಬಾಲಕಿಯ ಸಿಆರ್‌ಪಿಸಿ ಸೆಕ್ಷನ್‌ 164ರ ಹೇಳಿಕೆಯನ್ನು ಪರಿಗಣಿಸಬೇಕಲ್ಲವೇ?” ಎಂದು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನಾಗೇಶ್‌ ಅವರು “ಯಡಿಯೂರಪ್ಪ ಅವರಿಗೆ 82 ವರ್ಷ ವಯಸ್ಸಾಗಿದೆ. ಅವರ ಕೈಗಳು ನಡುಗುತ್ತವೆ. ಲೈಟ್‌ ಸ್ವಿಚ್‌ ಹಾಕಲೂ ನಮಗೆ ಹೇಳುತ್ತಾರೆ ಎಂದು ಅವರ ಮನೆಯ ಕೆಲಸದವರ ಹೇಳಿಕೆಯಿದೆ. ಬಾಲಕಿ ರೂಮಿಗೆ ಹೋಗಿರಲಿಲ್ಲ ಎಂಬ ಸಾಕ್ಷಿಯ ಹೇಳಿಕೆ ಇದೆ. ಅಂಗರಕ್ಷಕರು ಯಡಿಯೂರಪ್ಪನವರ ಆಜುಬಾಜಿನಲ್ಲೇ ಇರುತ್ತಾರೆ. ಅಲ್ಲಿದ್ದ ಎಲ್ಲಾ ಸಾಕ್ಷಿಗಳೂ ಇಂತಹ ಘಟನೆ ನಡೆದಿಲ್ಲ, ಯಡಿಯೂರಪ್ಪ ಹಾಲ್‌ ಬಿಟ್ಟು ಎಲ್ಲೂ ಹೋಗಿರಲಿಲ್ಲ ಎಂದು ಹೇಳಿದ್ದಾರೆ. ಆದರೂ, ತನಿಖಾಧಿಕಾರಿ ಕೇವಲ ಬಾಲಕಿಯ ಹೇಳಿಕೆ ಆಧರಿಸಿ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಮಹಿಳೆ ದೂರು ನೀಡುವ ಮುನ್ನ ರಾಜಕಾರಣಿಯೊಬ್ಬರನ್ನು ಭೇಟಿ ಮಾಡಿ ಠಾಣೆಗೆ ಬಂದಿದ್ದರು. ಹೀಗಾಗಿ, ಇದರ ಹಿಂದೆ ಕಾಣದ ಹಿತಾಸಕ್ತಿ ಅಡಗಿದೆ” ಎಂದರು.

ಆಗ ಪ್ರೊ.ರವಿವರ್ಮ ಕುಮಾರ್ ಅವರು ಆರೋಪ ಪಟ್ಟಿಯ ಮತ್ತಷ್ಟು ಅಂಶಗಳನ್ನು ಓದಲು ಮುಂದಾದರು. ಈ ಹಂತದಲ್ಲಿ ಪೀಠವು ಕೆಲವು ಅಂಶಗಳನ್ನು ಮುಕ್ತ ನ್ಯಾಯಾಲಯದಲ್ಲಿ ಓದುವುದು ಬೇಡ ಎಂದು ತಡೆಯಿತು. ಅಂತಿಮವಾಗಿ ವಿಚಾರಣೆಯನ್ನು ಗುರುವಾರಕ್ಕೆ (ಡಿ.19) ಮುಂದೂಡಿತು.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ವಕ್ಫ್ ಗೊಂದಲ ಪರಿಶೀಲನೆಗೆ ಸಮಿತಿ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...