Homeಕರ್ನಾಟಕಜೆಡಿಎಸ್ ತನ್ನ ಸಿದ್ಧಾಂತವನ್ನು ಹೇಗೆ ಉಳಿಸಿಕೊಳ್ಳುತ್ತದೆ? ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಪ್ರತಿಪಕ್ಷಗಳ ಪ್ರಶ್ನೆ

ಜೆಡಿಎಸ್ ತನ್ನ ಸಿದ್ಧಾಂತವನ್ನು ಹೇಗೆ ಉಳಿಸಿಕೊಳ್ಳುತ್ತದೆ? ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಪ್ರತಿಪಕ್ಷಗಳ ಪ್ರಶ್ನೆ

- Advertisement -
- Advertisement -

2024ರ ಲೋಕಸಭೆ ಚುನಾವಣೆಯನ್ನು ಒಟ್ಟಾಗಿ ಎದುರಿಸಲು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಇದರ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ನಾವು ಇದಕ್ಕೆ ತಲೆ ಕೆಡಿಸಿಕೊಂಡಿಲ್ಲ, ಆದರೆ ಜೆಡಿಎಸ್ ತನ್ನ ಸಿದ್ಧಾಂತವನ್ನು ಹೇಗೆ ಉಳಿಸಿಕೊಳ್ಳುತ್ತದೆ ಎಂದು ಪ್ರಶ್ನಿಸಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದ ಬಳಿಕ ಬಿಜೆಪಿ ಕಡೆ ಜೆಡಿಎಸ್ ವಾಲಿತ್ತು,  ಇದೀಗ ಯಡಿಯೂರಪ್ಪ ಸ್ಪಷ್ಟನೆ ನೀಡಿ ಮೈತ್ರಿಯನ್ನು ದೃಢಪಡಿಸಿದ್ದಾರೆ.

ಮೈತ್ರಿಕೂಟದ ಅಡಿಯಲ್ಲಿ ಜೆಡಿಎಸ್‌ಗೆ ನಾಲ್ಕು ಸ್ಥಾನಗಳನ್ನು ನೀಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಪ್ಪಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿ ಜೆಡಿಎಸ್‌ಗೆ ಬಿಟ್ಟುಕೊಡುವ ನಾಲ್ಕು ಸ್ಥಾನಗಳ ಬಗ್ಗೆ ಸ್ಪಷ್ಟತೆ ಇಲ್ಲ. ಸದ್ಯಕ್ಕೆ ಜೆಡಿಎಸ್‌ಗೆ ಮಂಡ್ಯ, ಕೋಲಾರ, ತುಮಕೂರು ಮತ್ತು ಹಾಸನ ಲೋಕಸಭಾ ಸ್ಥಾನಗಳು ಸಿಗುವ ಸಾಧ್ಯತೆ ಇದೆ.

ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಲೋಕಸಭಾ ಚುನಾವಣೆಯಲ್ಲಿ ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ಯಾರು ಪ್ರತ್ಯೇಕವಾಗಿ ಚುನಾವಣೆ ಸ್ಪರ್ಧಿಸುತ್ತಾರೆ ಎನ್ನುವ ಬಗ್ಗೆ ನಮಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಜನರ ಹತ್ತಿರ ಮತ ಕೇಳುತ್ತೇವೆ.  ಜನ ನಮ್ಮ ಪರವಾಗಿದ್ದಾರೆ ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಸ್ವಾಗತಿಸಿದ್ದಾರೆ. ಮೈತ್ರಿಯ ನಂತರ ಜೆಡಿಎಸ್ ತನ್ನ ಸಿದ್ಧಾಂತವನ್ನು ಹೇಗೆ ಉಳಿಸಿಕೊಳ್ಳುತ್ತದೆ? ಪಕ್ಷ ಉಳಿಯುತ್ತದೋ ಇಲ್ಲವೋ ಗೊತ್ತಿಲ್ಲ. ಅವರ ಮೈತ್ರಿಗೆ ನಾನು ವಿರೋಧಿಯಲ್ಲ. ಅವರಿಗೆ ಆಲ್ ದಿ ಬೆಸ್ಟ್ ಎಂದು ಹೇಳಿದ್ದಾರೆ.

ಸಚಿವ ಎಂ.ಬಿ.ಪಾಟೀಲ್ ಈ ಕುರಿತು ಪ್ರತಿಕ್ರಿಯಿಸಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್​ಗೆ ಅನುಕೂಲವಾಗಲಿದೆ. ಬಿಜೆಪಿ ಮತ್ತು ಜೆಡಿಎಸ್ ಏನಾದರೂ ಮಾಡಿಕೊಳ್ಳಲಿ. ಅದು ನಮಗೆ ಸಂಬಂಧಪಟ್ಟ ವಿಷಯ ಅಲ್ಲ. ಸೆಕ್ಯುಲರ್ ಎನ್ನುವ ಹೆಸರು ಇಟ್ಟುಕೊಂಡಿರುವ ಜೆಡಿಎಸ್ ಬಣ್ಣವೂ ಬಯಲಾಗಲಿದೆ. ನಾವು ಏಕಾಂಗಿಯಾಗಿ ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳನ್ನಾದರೂ ಗೆಲ್ಲಲಿದ್ದೇವೆ ಎಂದು ಹೇಳಿದ್ದಾರೆ.

ಚುನಾವಣೆ ಮುಗಿದು ಐದಾರು ತಿಂಗಳಾದರೂ ಬಿಜೆಪಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಆಗಿಲ್ಲ. ಜನರಿಂದ ತಿರಸ್ಕೃತವಾಗಿರುವ ಆ ಪಕ್ಷ ಈಗಾಗಲೇ ಮುಳುಗಿ ಹೋಗಿರುವ ಹಡಗು. ಸಂಪೂರ್ಣ ಹತಾಶ ಸ್ಥಿತಿ ತಲುಪಿರುವ ಪಕ್ಷಕ್ಕೆ ಯಾವ ಭವಿಷ್ಯವೂ ಇಲ್ಲ. ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಖಾಲಿಯಾಗುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಎಂ.ಬಿ.ಪಾಟೀಲ್‌ ಅವರು ಹೇಳಿದ್ದಾರೆ.

ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಈ ಕುರಿತು ಪ್ರತಿಕ್ರಿಯಿಸಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್​ಗೆ ಯಾವುದೇ ಪರಿಣಾಮ ಬೀರುವುದಿಲ್ಲ.  ಅವರ ಮೈತ್ರಿಯಿಂದ ಯಾವುದು ಜಾತ್ಯಾತೀತ, ಯಾವುದು ಜಾತಿವಾದಿ ಪಕ್ಷ ಅನ್ನೋದು ಜನರಿಗೆ ಗೊತ್ತಾಗುತ್ತೆ ಎಂದು ಹೇಳಿದ್ದಾರೆ.

ಬಿಜೆಪಿ- ಜೆಡಿಎಸ್‌ ಮೈತ್ರಿ ಬಗ್ಗೆ ಯಡಿಯೂರಪ್ಪ ಘೋಷಿಸಿದರೂ, ಬಿಜೆಪಿ ಜೊತೆ ಮೈತ್ರಿ ವಿಚಾರದಲ್ಲಿ ಇನ್ನೂ ಸಮಯ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದು, ಮೈತ್ರಿ ಬಗ್ಗೆ ಹೆಚ್ಚು ಮಾತನಾಡಲು ನಿರಾಕರಿಸಿದ್ದಾರೆ.

ಆದರೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಕುಮಾರಸ್ವಾಮಿ ಹಾಗೂ ದೇವೇಗೌಡರು ಚರ್ಚೆ ನಡೆಸಿದ್ದು ನಾಳೆ ಪಕ್ಷದ ಮುಖಂಡರು, ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.

ಕೆಲವು ಜೆಡಿಎಸ್ ಮುಖಂಡರು ಮೈತ್ರಿ ಬಗ್ಗೆ ಮೌನವನ್ನು ತಾಳಿದ್ದು, ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು ನನಗೆ ಮೈತ್ರಿ ಬಗ್ಗೆ ಏನು ಗೊತ್ತಿಲ್ಲ ಎಂದು ಹೇಳಿದ್ದಾರೆ.

ಪಕ್ಷದ ಅಧ್ಯಕ್ಷ ಸಿ ಎಂ ಇಬ್ರಾಹಿಂ, ಮೈತ್ರಿ ವಿಚಾರದ ಬಗ್ಗೆ ರಾಷ್ಟ್ರೀಯ ನಾಯಕ ಹೆಚ್ ಡಿ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ತೀರ್ಮಾನ ಮಾಡುತ್ತಾರೆ. ಸದ್ಯ ಬಿಜೆಪಿ ನಾಯಕರು ಅಭಿಪ್ರಾಯ ಹೇಳುತ್ತಿದ್ದಾರೆ. ಈ ಬಗ್ಗೆ ನಮ್ಮ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ ಮಾತನಾಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮೋದಿ-ಬೈಡನ್‌ ದ್ವಿಪಕ್ಷೀಯ ಸಭೆ: ಮಾಧ್ಯಮಗಳಿಗೆ ಪ್ರಶ್ನೆ ಕೇಳಲು ಅವಕಾಶ ನಿರಾಕರಣೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...