Homeಕರ್ನಾಟಕಬಳ್ಳಾರಿ: ಜಿಂದಾಲ್ ಆವರಣದಲ್ಲಿ ಸಾವಿರ ಆಕ್ಸಿಜನ್ ಬೆಡ್‌ಗಳ ಆಸ್ಪತ್ರೆ ಉದ್ಘಾಟನೆ

ಬಳ್ಳಾರಿ: ಜಿಂದಾಲ್ ಆವರಣದಲ್ಲಿ ಸಾವಿರ ಆಕ್ಸಿಜನ್ ಬೆಡ್‌ಗಳ ಆಸ್ಪತ್ರೆ ಉದ್ಘಾಟನೆ

- Advertisement -
- Advertisement -

ಬಳ್ಳಾರಿಯ ಜಿಂದಾಲ್ ಆವರಣದಲ್ಲಿ ಒಂದು ಸಾವಿರ ಆಕ್ಸಿಜನೇಟೆಡ್ ಬೆಡ್‌ಗಳ ಕೋವಿಡ್ ಕೇರ್‌ ಫೀಲ್ಡ್ ಆಸ್ಪತ್ರೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವರ್ಚುವಲ್ ಕಾರ್ಯಕ್ರಮದ ಮೂಲಕ ಉದ್ಘಾಟಿಸಿದ್ದಾರೆ.

ಕಳೆದ ವರ್ಷ ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದಾಗ ಚಿಕಿತ್ಸೆ ಮತ್ತು ರೋಗಿಗಳ ಐಸೋಲೇಶನ್‌ಗಾಗಿ 1,100 ಹಾಸಿಗೆಗಳನ್ನು ಹೊಂದಿರುವ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಅನ್ನು ತುಮಕೂರು ರಸ್ತೆಯ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ತೆರೆದಿತ್ತು. ಇದಕ್ಕಾಗಿ ರಾಜ್ಯ ಸರ್ಕಾರ ಕೋಟ್ಯಂತರ ರೂ ಖರ್ಚು ಮಾಡಿ ಭಾರೀ ಪ್ರಚಾರ ಗಿಟ್ಟಿಸಿತ್ತು.

ಆದರೆ, ಕೇವಲ ಒಂದೂವರೆ ತಿಂಗಳ ಬಳಿಕ ಈ ಸೆಂಟರ್‌ ಅನ್ನು ಮುಚ್ಚಲಾಗಿತ್ತು. ಕೊರೊನಾ ಎರಡನೇ ಅಲೆಯಲ್ಲಿ ಈ ಕೇಂದ್ರವಿದ್ದಿದ್ದರೇ ಹಾಸಿಗೆಗಾಗಿ ಜನ ಪರದಾಡುವ ಸ್ಥಿತಿ ಬರುತ್ತಿರಲಿಲ್ಲ ಎಂದು ಹಲವು ಸಂಘ ಸಂಸ್ಥೆಗಳು ಸರ್ಕಾರವನ್ನು ಟೀಕಿಸಿದ್ದವು.

ಇದನ್ನೂ ಓದಿ: ಪ್ರಚಾರ ಬಯಸದೆ ಸದ್ದಿಲ್ಲದೆ ಜನಸೇವೆಯಲ್ಲಿ ತೊಡಗಿದ ಬಿಎಂಸಿ-92 ವೈದ್ಯರ ತಂಡ

ಬಳ್ಳಾರಿಯ ಜೆ.ಎಸ್.ಡಬ್ಲ್ಯೂ ಸಂಸ್ಥೆ ವತಿಯಿಂದ ಸ್ಥಾಪಿಸಲಾಗಿರುವ 1 ಸಾವಿರ ಆಕ್ಸಿಜನೇಟೆಡ್ ಹಾಸಿಗೆಗಳ ‘ಕೋವಿಡ್ ಕೇರ್ ಫೀಲ್ಡ್ ಆಸ್ಪತ್ರೆ’ಯನ್ನು ಜಿಂದಾಲ್ ಆವರಣದಲ್ಲಿ ಆರಂಭಿಸಲಾಗಿದೆ.

ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್‌, ಆರೋಗ್ಯ ಸಚಿವ ಸುಧಾಕರ್‌, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌, ಜೆ.ಎಸ್.ಡಬ್ಲ್ಯೂ ಅಧ್ಯಕ್ಷ ಸಜ್ಜನ್ ಜಿಂದಾಲ್, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಮತ್ತಿತರರು ಭಾಗವಹಿಸಿದ್ದರು.

ಈ ತಾತ್ಕಾಲಿಕ ಆಸ್ಪತ್ರೆಯಲ್ಲಿ ಗುರುವಾರದಿಂದ 272 ಬೆಡ್‌ಗಳು ಚಿಕಿತ್ಸೆ ದೊರೆಯಲಿದ್ದು, ಸದ್ಯದಲ್ಲೇ 700 ಹಾಸಿಗೆಗಳು ಕೊರೊನಾ ರೋಗಿಗಳ ಉಪಯೋಗಕ್ಕೆ ಮುಕ್ತವಾಗಲಿದೆ. ಇನ್ನು ಈ ಆಸ್ಪತ್ರೆಯಲ್ಲಿ ಸೇವೆಯನ್ನು ಸಲ್ಲಿಸಲು ಬಳ್ಳಾರಿಯ ಬೆಸ್ಟ್ ನರ್ಸಿಂಗ್ ಆಸ್ಪತ್ರೆಯಲ್ಲಿ ವಿದ್ಯಾಭ್ಯಾಸ ಮಾಡಿದ್ದ ಗುಜರಾತ್‌ನ ನರ್ಸ್‌ಗಳು ರೈಲಿನ ಮೂಲಕ ಬಂದಿದ್ದಾರೆ.

ಇತ್ತಿಚೆಗೆ ರಾಜ್ಯ ಸರ್ಕಾರ ಜಿಂದಾಲ್‌ ಕಂಪನಿಗೆ 3677 ಎಕರೆ ಭೂಮಿ ಮಾರಾಟ ಮಾಡಿದೆ.


ಇದನ್ನೂ ಓದಿ: ಬೆಡ್‌ಗಾಗಿ ಸೋಂಕಿತರ ಪರದಾಟ: ಬೆಂಗಳೂರಿನ 10,100 ಬೆಡ್‌ಗಳ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಏನಾಯಿತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...