- Advertisement -
- Advertisement -
ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದ ಸಮೀಪ ತರಕಾರಿ ತುಂಬಿದ್ದ ಲಾರಿ ಪಲ್ಟಿಯಾದ ಕಾರಣ 9 ಜನರು ಮೃತಪಟ್ಟ ಘಟನೆ ಬುಧವಾರ (ಜ.22) ನಸುಕಿನ ಜಾವ ನಡೆದಿದೆ.
ಕುಮಟಾದಲ್ಲಿ ನಡೆಯುವ ವಾರದ ಸಂತೆಗೆ ಹಾವೇರಿ ಜಿಲ್ಲೆಯ ಸವಣೂರಿನಿಂದ ಯಲ್ಲಾಪುರ ಮಾರ್ಗವಾಗಿ ತರಕಾರಿ ಸಾಗಿಸುವ ವೇಳೆ ದುರ್ಘಟನೆ ನಡೆದಿದೆ. ಮೃತರೆಲ್ಲರೂ ತರಕಾರಿ ವ್ಯಾಪಾರಿಗಳು ಎಂದು ವರದಿಯಾಗಿದೆ.
ಲಾರಿಯಲ್ಲಿ ತರಕಾರಿ ದಾಸ್ತಾನಿನ ಜೊತೆಗೆ ಸುಮಾರು 25ಕ್ಕೂ ಹೆಚ್ಚು ವ್ಯಾಪಾರಿಗಳು ಪ್ರಯಾಣಿಸುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಕ್ಕದ ಕಂದಕಕ್ಕೆ ಉರುಳಿದ ಪರಿಣಾಮ 9 ಮಂದಿ ಮೃತಪಟ್ಟಿದ್ದು ಸುಮಾರು 10 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ದೊರೆತಿದೆ.
ಬೆಳಗಾವಿ | ಏಳು ವರ್ಷದ ಬಾಲಕನನ್ನು ₹4 ಲಕ್ಷಕ್ಕೆ ಮಾರಿದ್ದ ನಾಲ್ವರ ಬಂಧನ


