Homeಕರ್ನಾಟಕಬೆಂಗಳೂರಿನಲ್ಲಿ ಭಾರೀ ಮಳೆಗೆ ಯೆಲ್ಲೋ ಅಲರ್ಟ್ ಘೋಷಣೆ: ಏನಿವು ಅಲರ್ಟ್‌ಗಳು?

ಬೆಂಗಳೂರಿನಲ್ಲಿ ಭಾರೀ ಮಳೆಗೆ ಯೆಲ್ಲೋ ಅಲರ್ಟ್ ಘೋಷಣೆ: ಏನಿವು ಅಲರ್ಟ್‌ಗಳು?

- Advertisement -
- Advertisement -

ಸೆಪ್ಟಂಬರ್ ತಿಂಗಳಿನಲ್ಲಿ ಭಾರೀ ಮಳೆಗೆ ನಲುಗಿದ್ದ ಬೆಂಗಳೂರಿಗೆ ಮತ್ತು ವರುಣನ ಆಗಮನವಾಗಿದೆ. ಈ ಕುರಿತು ಹವಾಮಾನ ಇಲಾಖೆ ಭಾನುವಾರವೇ ಯೆಲ್ಲೋ ಅಲರ್ಟ್ ಘೋಷಿಸಿದೆ. ಮಂಗಳವಾರ ಸಹ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಏನಿವು ಅಲರ್ಟ್‌ಗಳು?

ಮಳೆಗಾಲದಲ್ಲಿ ಅಥವಾ ಯಾವುದೇ ಅನಿರೀಕ್ಷಿತ ಚಂಡಮಾರುತಗಳು ಬೀಸುವ ಸಂದರ್ಭದಲ್ಲಿ ಜನಸಾಮಾನ್ಯರ ಸುರಕ್ಷತೆಯ ದೃಷ್ಟಿಯಿಂದ ಭಾರತೀಯ ಹವಾಮಾನ ಇಲಾಖೆಯು ಹಸಿರು, ಕಿತ್ತಳೆ, ಕೆಂಪು ಮತ್ತು ಹಳದಿ ಅಲರ್ಟ್‌ಗಳನ್ನು ಹೊರಡಿಸುತ್ತದೆ. ಅವುಗಳ ಅರ್ಥವೇನು? ಅವು ಏನನ್ನು ಸೂಚಿಸುತ್ತವೆ ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ

ನಮ್ಮ ದೇಶದಲ್ಲಿ ಭಾರತೀಯ ಹವಾಮಾನ ಇಲಾಖೆ (IMD)ಯು ಈ ಎಚ್ಚರಿಕೆಗಳನ್ನು ನೀಡುತ್ತದೆ ಮತ್ತು ವಿಭಿನ್ನ ಸಂದೇಶಗಳನ್ನು ವಿವರಿಸಲು 4 ವಿಭಿನ್ನ ಬಣ್ಣದ ಕೋಡ್‌ಗಳನ್ನು ಬಳಸುತ್ತದೆ. ಹಸಿರು, ಹಳದಿ, ಕಿತ್ತಳೆ ಮತ್ತು ಕೆಂಪು ಬಣ್ಣದ ಎಚ್ಚರಿಕೆಗಳನ್ನು ನೀಡುತ್ತದೆ.

1. ಹಸಿರು ಎಚ್ಚರಿಕೆ (ಗ್ರೀನ್ ಅಲರ್ಟ್)

ಗ್ರೀನ್ ಅಲರ್ಟ್ ಎಂದರೆ ಸಾಮಾನ್ಯವಾಗಿ ಹವಾಮಾನ ಪರಿಸ್ಥಿತಿಗಳು ಉತ್ತಮವಾಗಿವೆ ಎಂದರ್ಥ. ಬಹುತೇಕ ಸಮಯದಲ್ಲಿ ಈ ಅಲರ್ಟ್ ಜಾರಿಯಲ್ಲಿರುತ್ತದೆ. ಅಲ್ಲದೆ ಈ ಎಚ್ಚರಿಕೆಯ ಸಮಯದಲ್ಲಿ ಭಾರತೀಯ ಹವಾಮಾನ ಇಲಾಖೆಯು ನಾಗರೀಕರಿಗೆ ಯಾವುದೇ ಸಲಹೆಯನ್ನು ನೀಡುವುದಿಲ್ಲ.

2. ಹಳದಿ ಎಚ್ಚರಿಕೆ (ಯೆಲ್ಲೋ ಅಲರ್ಟ್)

ಹವಾಮಾನ ಇಲಾಖೆಯು ಜನರಿಗೆ ಎಚ್ಚರಿಕೆ ನೀಡಲು ಹಳದಿ ಅಲರ್ಟ್ ಅನ್ನು ನೀಡುತ್ತದೆ. 7.5 ರಿಂದ 15 ಮಿಮೀ ವರೆಗೆ ಭಾರೀ ಮಳೆಯಾಗಲಿದ್ದು, ಇದು ಮುಂದಿನ 1 ಅಥವಾ 2 ಗಂಟೆಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ ಎಂದಾಗ ಇದನ್ನು ಹೊರಡಿಸುತ್ತದೆ. ಅಂದರೆ ಇದು ಕೇವಲ ಮುಂದೊದಗಬಹುದಾದ ಅಪಾಯದ ಬಗ್ಗೆ ಎಚ್ಚರವಿರಲಿ ಎಂದರ್ಥ. ಹಳದಿ ಎಚ್ಚರಿಕೆಯ ಸಮಯದಲ್ಲಿ ಹವಾಮಾನವನ್ನು ನಿರಂತರವಾಗಿ ಮತ್ತು ನಿಕಟವಾಗಿ ಮೇಲ್ವಿಚಾರಣೆ ಮಾಡಲಾಗುತ್ತದೆ.

3. ಕಿತ್ತಳೆ ಎಚ್ಚರಿಕೆ (ಆರೆಂಜ್ ಅಲರ್ಟ್)

ಹವಾಮಾನವು ಹದಗೆಟ್ಟಾಗ, ಹಳದಿ ಎಚ್ಚರಿಕೆಯನ್ನು ಆರೆಂಜ್ ಅಲರ್ಟ್ ಆಗಿ ಬದಲಾಯಿಸಲಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳುತ್ತದೆ. “ಈ ಚಂಡಮಾರುತವು ಹವಾಮಾನ ಪರಿಸ್ಥಿತಿಗಳು ಹದಗೆಡಲು ಕಾರಣವಾಗಬಹುದು. ಇದು ರಸ್ತೆ ಮತ್ತು ವಾಯು ಸಾರಿಗೆಗೆ ಹಾನಿಯನ್ನುಂಟುಮಾಡುತ್ತದೆ ಮತ್ತು ಜೀವ ಮತ್ತು ಆಸ್ತಿ ನಷ್ಟವನ್ನು ಉಂಟುಮಾಡಬಹುದು” ಎಂಬುದನ್ನು ಆರೆಂಜ್ ಅಲರ್ಟ್ ವಿವರಿಸುತ್ತದೆ.

ಹೀಗಾಗಿ ಆರೆಂಜ್ ಅಲರ್ಟ್ ಘೋಷಿಸಿದ ಸಮಯದಲ್ಲಿ ಜನರು ತಮ್ಮ ಮನೆಗಳಲ್ಲಿಯೇ ಇರುವಂತೆ ಸೂಚಿಸಲಾಗುತ್ತದೆ. ಅಂತಹ ಪರಿಸ್ಥಿತಿಗಳಲ್ಲಿ ಗಾಳಿಯ ವೇಗ ಗಂಟೆಗೆ 65 ರಿಂದ 75 ಕಿಮೀ ಮತ್ತು 15 ರಿಂದ 33 ಮಿಮೀ ಮತ್ತು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಆರೆಂಜ್ ಅಲರ್ಟ್ ಘೋಷಿಸಿದಾಗ ಮಳೆ ಪೀಡಿತ ಪ್ರದೇಶದಲ್ಲಿ ಅಪಾಯಕಾರಿ ಪ್ರವಾಹದ ಸಾಧ್ಯತೆಯಿರುವುದರಿಂದ ಪೀಡಿತ ಪ್ರದೇಶದಿಂದ ಜನರನ್ನು ಸ್ಥಳಾಂತರಿಸಲು ಯೋಜನೆಯನ್ನು ಸಿದ್ಧಪಡಿಸಬೇಕು ಎಂದು ಸ್ಥಳೀಯ ಆಡಳಿತಗಳಿಗೆ ಸೂಚಿಸಲಾಗುತ್ತದೆ.

4. ಕೆಂಪು ಎಚ್ಚರಿಕೆ (ರೆಡ್ ಅಲರ್ಟ್)

ರೆಡ್ ಅಲರ್ಟ್ ಎಂದರೆ ಅಪಾಯಕಾರಿ ಪರಿಸ್ಥಿತಿ ಎಂದರ್ಥ. ಇದು ಅಂತಿಮ ಎಚ್ಚರಿಕೆಯಾಗಿದೆ. ಈ ಸಮಯದಲ್ಲಿ ಜನರು ಹೊರಗಡೆ ಹೋಗದಂತೆ ಸೂಚಿಸಲಾಗುತ್ತದೆ. ಚಂಡಮಾರುತವು ಗಂಟೆಗೆ 130 ಕಿಮೀ ಗಾಳಿಯ ವೇಗದ ತೀವ್ರತೆಯೊಂದಿಗೆ ಬೀಸಿದಾಗ ಮತ್ತು ತೀವ್ರ ಮಳೆ ಬಂದಾಗ ಭಾರತೀಯ ಹವಾಮಾನ ಇಲಾಖೆಯು ಕೆಂಪು ಎಚ್ಚರಿಕೆ ನೀಡುತ್ತದೆ. ಆ ಪ್ರದೇಶದ ಆಡಳಿತವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗುತ್ತದೆ.

ಹವಾಮಾನವು ಅಪಾಯಕಾರಿ ಮಟ್ಟಕ್ಕೆ ತಲುಪಿದಾಗ ಮತ್ತು ಭಾರೀ ಹಾನಿಯ ಅಪಾಯವಿದ್ದರೆ, ಆಗ ರೆಡ್ ಅಲರ್ಟ್ ನೀಡಲಾಗುವುದು ಎಂದು ಹವಾಮಾನ ಇಲಾಖೆ ಹೇಳಿದೆ. 30 ಮಿ.ಮೀ.ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಮತ್ತು ಕನಿಷ್ಠ 2 ಗಂಟೆಗಳ ಕಾಲ ಇದು ಮುಂದುವರಿಯುವ ಸಾಧ್ಯತೆ ಇದ್ದಾಗ ಮಾತ್ರ ಈ ರೀತಿಯ ಎಚ್ಚರಿಕೆಯನ್ನು ಘೋಷಿಸಲಾಗುತ್ತದೆ. ಹೆಚ್ಚಿನ ಸಂದರ್ಭಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದ ಅಪಾಯವು ಹಲವಾರು ಪಟ್ಟು ಹೆಚ್ಚಾಗುವುದರಿಂದ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸ್ಥಳಾಂತರಿಸಲಾಗುತ್ತದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರೀ ಮಳೆ ಸಾಧ್ಯತೆ, ರಾಜ್ಯದ ಎಂಟು ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್‌

ಈ ಎಚ್ಚರಿಕೆಗಳನ್ನು ಟಿವಿ, ರೆಡಿಯೋ ಸೇರಿದಂತೆ ಹಲವು ಮಾಧ್ಯಮಗಳ ಮೂಲಕ ಹವಾಮಾನ ಇಲಾಖೆ ಹೊರಡಿಸುತ್ತದೆ. ಇವುಗಳನ್ನು ಜನರು ಪಾಲಿಸುವುದು ಸುರಕ್ಷತೆಯ ದೃಷ್ಟಿಯಿಂದ ಒಳ್ಳೆಯದು. ಅಲ್ಲದೆ ಇದರಿಂದ ತೀವ್ರ ಮಳೆ ಸಂದರ್ಭದಲ್ಲಿ ಹೆಚ್ಚಿನ ಜೀವ ಹಾನಿಯಾಗದಂತೆ ತಡೆಯಲು ಸ್ಥಳೀಯ ಆಡಳಿತಗಳಿಗೆ ಸಹಕಾರಿಯಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...