Homeಮುಖಪುಟದೇಶಕ್ಕೆ ಕಾಲಿಟ್ಟ ಯೆಲ್ಲೋ ಫಂಗಸ್: ದೆಹಲಿಯಲ್ಲಿ ಮೊದಲ ಪ್ರಕರಣ ಪತ್ತೆ

ದೇಶಕ್ಕೆ ಕಾಲಿಟ್ಟ ಯೆಲ್ಲೋ ಫಂಗಸ್: ದೆಹಲಿಯಲ್ಲಿ ಮೊದಲ ಪ್ರಕರಣ ಪತ್ತೆ

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಿಂದ ನಲುಗಿರುವ ದೇಶದಲ್ಲಿ ಬ್ಲಾಕ್ ಫಂಗಸ್, ವೈಟ್ ಫಂಗಸ್ ಸೋಂಕು ಹಬ್ಬುತ್ತಿದೆ. ಇದರ ನಡುವೆಯೇ ಯೆಲ್ಲೋ ಫಂಗಸ್​ (Yellow Fungus) ಸಹ ಕಂಡು ಬಂದಿದ್ದು ದೇಶದಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ.

ಈಗಾಗಲೇ ಎಲ್ಲಾ ರಾಜ್ಯಗಳಲ್ಲೂ ಬ್ಲಾಕ್ ಫಂಗಸ್ ಸೋಂಕನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಲಾಗಿದೆ. ಬ್ಲಾಕ್​ ಫಂಗಸ್ ಪ್ರಕರಣಗಳು​ ಎಲ್ಲಾ ರಾಜ್ಯಗಳಲ್ಲೂ ದಾಖಲಾಗಿದ್ದು, ಅನೇಕರು ಮೃತಪಟ್ಟಿದ್ದಾರೆ. ಕರ್ನಾಟಕದಲ್ಲೂ 300 ಜನ ಈ ಸೋಂಕಿಗೆ ತುತ್ತಾಗಿದ್ದಾರೆ ಎಂದು ಸ್ವತಃ ಆರೋಗ್ಯ ಸಚಿವ ಸುಧಾಕರ್​ ಸ್ಪಷ್ಟಪಡಿಸಿದ್ದಾರೆ.

ದೇಶದಲ್ಲೇ ದೆಹಲಿಯ ಘಾಜಿಯಬಾದ್‌ನಲ್ಲಿ ಮೊದಲ ಯೆಲ್ಲೋ ಫಂಗಸ್ ಪ್ರಕರಣ ಪತ್ತೆಯಾಗಿದೆ. ಈವರೆಗಿನ ಕಪ್ಪು, ಬಿಳಿ ಫಂಗಸ್‌ಗಿಂತ ಈ ಯೆಲ್ಲೋ ಫಂಗಸ್ ಮತ್ತಷ್ಟು ಮಾರಕವಾಗಿರಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಜನಾಕ್ರೋಶದ ಸ್ಫೋಟ: ರಾಜ್ಯಾದ್ಯಂತ ಮನೆಗಳಲ್ಲಿಯೇ ಭುಗಿಲೆದ್ದ ಪ್ರತಿಭಟನೆಗಳು

ಈ ವೈರಸ್​ ಬಾಧಿತರಲ್ಲಿ ಆಲಸ್ಯ, ತೂಕ ಇಳಿಕೆ, ಹಸಿವೇ ಆಗದಿರುವುದು ಅಥವಾ ಕಡಿಮೆ ಹಸಿವಾಗುವುದು, ಕೀವು ಸೋರುವುದು ಸೇರಿದಂತೆ ಹಲವಾರು ಲಕ್ಷಣಗಳು ಕಂಡು ಬರುತ್ತದೆ ಎಂದು ತಿಳಿದು ಬಂದಿದೆ. ಯೆಲ್ಲೋ ಫಂಗಸ್ ಸೋಂಕಿನ ರೋಗ ಲಕ್ಷಣ ಕಂಡು ಬಂದ ತಕ್ಷಣ ರೋಗಿಗಳು ವೈದ್ಯರನ್ನು ಕಾಣುವುದು ಉತ್ತಮ ಎಂದು ಎಚ್ಚರಿಸಲಾಗಿದೆ.

ನೈರ್ಮಲ್ಯ ಕೊರತೆಯಿಂದ ಈ ಫಂಗಸ್ ಹರಡುವ ಸಾಧ್ಯತೆ ಇದೆ. ಕಣ್ಣು ಸೇರಿ ದೇಹದ ಎಲ್ಲಾ ಭಾಗಗಳಿಗೂ ಡ್ಯಾಮೇಜ್ ಮಾಡಬಲ್ಲದು ಎನ್ನಲಾಗಿದೆ. ಇಎನ್‌ಟಿ ಶಸ್ತ್ರಚಿಕಿತ್ಸಕ ಡಾ. ಬ್ರಿಜ್ ಪಾಲ್ ತ್ಯಾಗಿ ಅವರಿಂದ ಈ ಮಾಹಿತಿ ಹೊರಬಿದ್ದಿದ್ದು, ಡಾ. ತ್ಯಾಗಿ, ಈಗ ದೆಹಲಿಯಲ್ಲಿ ಹಳದಿ ಫಂಗಸ್ ರೋಗಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಯೆಲ್ಲೋ ಫಂಗಸ್​ಗೆ ಔಷಧ ಇದೆಯೇ? ಇದಕ್ಕೆ ಯಾವ ಚಿಕಿತ್ಸೆ ನೀಡಬೇಕು? ಈ ವೈರಸ್​ ವಿರುದ್ಧದ ಹೋರಾಟಕ್ಕೆ ತಯಾರಿ ಹೇಗೆ ಮಾಡಬೇಕು? ಎಂಬ ಅಂಶಗಳು ಮತ್ತಷ್ಟು ಅಧ್ಯಯನದಿಂದ ಹೊರ ಬೀಳಬೇಕಿದೆ. ಆದರೆ, ಕೊರೊನಾ ಸಂಕಷ್ಟದಲ್ಲಿರುವ ದೇಶದಲ್ಲಿ ಬ್ಲಾಕ್, ವೈಟ್, ಹಳದಿ ಫಂಗಸ್‌ಗಳು ಆತಂಕ ಸೃಷ್ಟಿ ಮಾಡಿರುವುದು ಸುಳ್ಳಲ್ಲ.


ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...