Homeಅಂತರಾಷ್ಟ್ರೀಯಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

- Advertisement -
- Advertisement -

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ ಕೊನೆಯ ಕರಾವಳಿ ಪ್ರದೇಶಗಳನ್ನು ವಶಪಡಿಸಿಕೊಳ್ಳುವ ಮೂಲಕ ಈ ಮಹತ್ವದ ಮುನ್ನಡೆಯನ್ನು ಸಾಧಿಸಿವೆ ಎಂದು ವರದಿಗಳು ಹೇಳಿವೆ.

ಈ ಬೆಳವಣಿಗೆಯಿಂದಾಗಿ ಜಾಗತಿಕ ಹಡಗು ಸಾರಿಗೆಯ ಅತ್ಯಂತ ಪ್ರಮುಖ ಜಲಮಾರ್ಗವಾಗಿರುವ ‘ಬಾಬ್ ಅಲ್-ಮಂದೇಬ್’ ಜಲಸಂಧಿಯ ಮೇಲೆ ಹೌತಿಗಳು ಸಂಪೂರ್ಣ ಹಿಡಿತ ಸಾಧಿಸಿದಂತಾಗಿದೆ, ಇದು ಅಂತಾರಾಷ್ಟ್ರೀಯ ವ್ಯಾಪಾರ ಮತ್ತು ಪ್ರಾದೇಶಿಕ ಭದ್ರತೆಯ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆ ಇದೆ.

ಶುಕ್ರವಾರ (ಸೆ.11) ಮುಂಜಾನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಪಡೆದ ಯೆಮನ್ ಸರ್ಕಾರದ ಪಡೆಗಳ ವಿರುದ್ಧ ತೀವ್ರವಾಗಿ ಮುನ್ನುಗ್ಗಿದ ಈ ಬಂಡುಕೋರರ ಗುಂಪು, ಕರಾವಳಿಯಲ್ಲಿದ್ದ ಕೊನೆಯ ಪಟ್ಟಣಗಳನ್ನು ವಶಪಡಿಸಿಕೊಂಡಿದೆ. ಅಷ್ಟೇ ಅಲ್ಲದೆ, ಅವರು ‘ಬಾಬ್ ಅಲ್-ಮಂದೇಬ್’ ಜಲಸಂಧಿಯಲ್ಲಿರುವ ದ್ವೀಪಗಳ ಕಡೆಗೂ ನುಗ್ಗಿದ್ದಾರೆ ಎಂದು ಸರ್ಕಾರದ ಮೂಲಗಳು ಮತ್ತು ಪ್ರತ್ಯಕ್ಷದರ್ಶಿಗಳನ್ನು ಉಲ್ಲೇಖಿಸಿ aljazeera.com ವರದಿ ಮಾಡಿದೆ.

ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದಿಂದ ಜಾಗತಿಕ ಇಂಧನ ಸಾಗಣೆಯ ಸರಿಸುಮಾರು ಐದನೇ ಒಂದು ಭಾಗದಷ್ಟು ಹಡಗುಗಳು ಹಾದು ಹೋಗುತ್ತಿದ್ದ ‘ಹಾರ್ಮುಝ್ ಜಲಸಂಧಿ’ಯಲ್ಲಿ ಅಡಚಣೆಯಾದಾಗ, ಈ ಜಲಮಾರ್ಗವು ಪರ್ಯಾಯ ಮಾರ್ಗವಾಗಿ ಮಾರ್ಪಟ್ಟಿತ್ತು.

ಹೌತಿ ಬಂಡುಕೋರರು ಗುರುವಾರ (ಸೆ.10) ಮುಂಜಾನೆ ಯೆಮನ್‌ನ ಕರಾವಳಿ ಪಟ್ಟಣವಾದ ಮೊಖಾವನ್ನು ತಲುಪಿದ್ದರು. ನಂತರ ಹತ್ತಿರದ ದ್ವೀಪಗಳನ್ನು ವಶಪಡಿಸಿಕೊಳ್ಳಲು ಸಮುದ್ರದ ಕಡೆಗೆ ಮುನ್ನುಗ್ಗಿದ್ದಾರೆ ಎಂದು ತೈಜ್ ನಗರದಿಂದ aljazeera.comನ ಮಹಾ ಅಲಿ ವರದಿ ಮಾಡಿದ್ದಾರೆ.

ಹೌತಿಗಳು ಬಾಬ್ ಅಲ್-ಮಂದೇಬ್ ಕರಾವಳಿಯಲ್ಲಿರುವ ಧುಬಾಬ್ ಪಟ್ಟಣವನ್ನು ತಲುಪಿದ್ದಾರೆ ಎಂದು ಯೆಮನ್ ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ಶುಕ್ರವಾರ (ಸೆ.11) ರಾಯಿಟರ್ಸ್ ವರದಿ ಮಾಡಿತ್ತು.

ಸರ್ಕಾರಿ ಪಡೆಗಳು ಹಿಂತೆಗೆದುಕೊಂಡ ನಂತರ, ಹೌತಿಗಳನ್ನು ಹೊತ್ತ ಬೋಟ್‌ಗಳು ಬಾಬ್ ಅಲ್-ಮಂದೇಬ್ ಜಲಸಂಧಿಯ ಮಧ್ಯಭಾಗದಲ್ಲಿರುವ ಮಯ್ಯೂನ್ ದ್ವೀಪವನ್ನು ತಲುಪಿವೆ ಎಂದು ಸರ್ಕಾರಿ ಅಧಿಕಾರಿಗಳು ದೃಢಪಡಿಸಿರುವುದಾಗಿ ವರದಿಯಾಗಿದೆ.

ಹೌತಿಗಳು ಬಾಬ್ ಅಲ್-ಮಂದೇಬ್ ಪ್ರದೇಶವನ್ನು ಸಂಪೂರ್ಣವಾಗಿ ತಮ್ಮ ಹತೋಟಿಗೆ ತೆಗೆದುಕೊಂಡಿದ್ದಾರೆ ಎಂದು ಮೂಲವೊಂದು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

ಸನಾ ಮೂಲದ ಯೆಮನ್ ಪ್ರೆಸ್ ಏಜೆನ್ಸಿಯು ಫೀಲ್ಡ್ ಸೋರ್ಸ್ ಉಲ್ಲೇಖಿಸಿ, ಹೌತಿ ಪಡೆಗಳು ಜಲಸಂಧಿಯ ಮೇಲೆ ಕಣ್ಣಿಡಬಹುದಾದ ಆಯಕಟ್ಟಿನ ಜಾಗದಲ್ಲಿರುವ ‘ಅಲ್-ಒಮರಿ’ ಸೇನಾ ಶಿಬಿರವನ್ನು ವಶಪಡಿಸಿಕೊಂಡಿವೆ ಎಂದು ತಿಳಿಸಿದೆ.

ಹೌತಿಗಳ ಮಿಲಿಟರಿ ವಕ್ತಾರ ಬ್ರಿಗೇಡಿಯರ್-ಜನರಲ್ ಯಾಹ್ಯಾ ಸಾರೀ ಅವರು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಹೇಳಿಕೆಯ ಪ್ರಕಾರ, ಈ ಕಾರ್ಯಾಚರಣೆಯು ಒಟ್ಟು 5,400 ಚದರ ಕಿಲೋಮೀಟರ್ (2,100 ಚದರ ಮೈಲಿ) ವಿಸ್ತೀರ್ಣವನ್ನು ಹೊಂದಿರುವ ಆರು ಜಿಲ್ಲೆಗಳಿಂದ ಸೌದಿ ಬೆಂಬಲಿತ ಪಡೆಗಳನ್ನು ಹೊರಹಾಕಲು ಕಾರಣವಾಗಿದೆ. ಅಷ್ಟೇ ಅಲ್ಲದೆ, 38 ಬ್ರಿಗೇಡ್‌ಗಳನ್ನು ಒಳಗೊಂಡಿದ್ದ ಏಳು ಮಿಲಿಟರಿ ಬ್ರಿಗೇಡ್‌ಗಳ ಮೇಲೆ ದಾಳಿ ನಡೆಸಲಾಗಿದ್ದು, ನೂರಾರು ಸೈನಿಕರು ಸಾವನ್ನಪ್ಪಿದ್ದಾರೆ, ಸೆರೆಹಿಡಿಯಲ್ಪಟ್ಟಿದ್ದಾರೆ ಅಥವಾ ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸನಾದಿಂದ ವರದಿ ಮಾಡಿರುವ aljazeera.comನ ನಬಿಲ್ ಅಲ್-ಯೂಸೆಫಿ ಅವರು, ಬಾಬ್ ಅಲ್-ಮಂದೇಬ್ ಮೇಲಿನ ನಿಯಂತ್ರಣವನ್ನು ದೃಢೀಕರಿಸುವ ಯಾವುದೇ ಅಧಿಕೃತ ಪ್ರಕಟಣೆಯನ್ನು ಹೌತಿ ಪಡೆ ಇದುವರೆಗೆ ಹೊರಡಿಸಿಲ್ಲ ಎಂದು ಹೇಳಿದ್ದಾರೆ.

ಬಾಬ್ ಅಲ್-ಮಂದೇಬ್ ಕೆಂಪು ಸಮುದ್ರದ (ರೆಡ್ ಸೀ) ದಕ್ಷಿಣದ ಪ್ರವೇಶ ದ್ವಾರವಾಗಿದೆ ಮತ್ತು ಸೌದಿ ತೈಲ ಟರ್ಮಿನಲ್‌ಗಳನ್ನು ತಲುಪುವ ಮಾರ್ಗವಾಗಿದೆ. ಇದು ಹಾರ್ಮುಝ್ ಜಲಸಂಧಿಯನ್ನು ತಪ್ಪಿಸಿ ಯುರೋಪ್‌ಗೆ ಕಚ್ಚಾ ತೈಲವನ್ನು ಸಾಗಿಸಲು ಪರ್ಯಾಯ ಮಾರ್ಗವನ್ನು ಒದಗಿಸುತ್ತದೆ. ಈ ಹಿಂದೆ ಹೌತಿಗಳು ಇದೇ ಜಲಮಾರ್ಗದಲ್ಲಿ ಹಡಗುಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಸರಣಿ ದಾಳಿಗಳ ಸಂದರ್ಭದಲ್ಲಿ, ಕೆಂಪು ಸಮುದ್ರದಲ್ಲಿ ಹಡಗುಗಳ ಸಂಚಾರವು ಗಣನೀಯವಾಗಿ ಕಡಿಮೆಯಾಗಿತ್ತು.






ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...