Homeಮುಖಪುಟಟರ್ಕಿಯಿಂದ ಭಾರತಕ್ಕೆ ತೆರಳುತ್ತಿದ್ದ ಹಡಗನ್ನು ಅಪಹರಿಸಿದ ಯಮನ್‌ನ ಬಂಡುಕೋರರು

ಟರ್ಕಿಯಿಂದ ಭಾರತಕ್ಕೆ ತೆರಳುತ್ತಿದ್ದ ಹಡಗನ್ನು ಅಪಹರಿಸಿದ ಯಮನ್‌ನ ಬಂಡುಕೋರರು

- Advertisement -
- Advertisement -

ಟರ್ಕಿಯಿಂದ ಭಾರತಕ್ಕೆ ತೆರಳುತ್ತಿದ್ದ ಸರಕು ಹಡಗನ್ನು ಭಾನುವಾರ ಯಮನ್‌ನ ಹೌತಿ ಬಂಡುಕೋರರು ಕೆಂಪು ಸಮುದ್ರದಲ್ಲಿ ಅಪಹರಿಸಿದ್ದಾರೆ. ಹಡಗಿನ 25 ಸಿಬ್ಬಂದಿಯನ್ನು ಒತ್ತೆಯಾಳಾಗಿ ಇರಿಸಿಕೊಳ್ಳಲಾಗಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಇಸ್ರೇಲ್‌ನೊಂದಿಗಿನ ಭಾರತ ಸಂಪರ್ಕ ಹೊಂದಿದೆ ಎನ್ನುವ ಕಾರಣಕ್ಕೆ ಇರಾನ್ ಬೆಂಬಲಿತ ಹೌತಿ ಬಂಡುಕೋರರು ಹಡಗನ್ನು ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಗಾಜಾದ ಮೇಲೆ ಇಸ್ರೇಲ್‌ ನಡೆಸುತ್ತಿರುವ ದಾಳಿಯನ್ನು ನಿಲ್ಲಿಸುವವರೆಗೂ ಅಂತರರಾಷ್ಟ್ರೀಯ ನೀರಿನಲ್ಲಿ ಇಸ್ರೇಲಿಗಳಿಗೆ ಸಂಪರ್ಕ ಹೊಂದಿದ ಅಥವಾ ಒಡೆತನದ ಹಡಗುಗಳನ್ನು ಗುರಿಯಾಗಿಸುವುದನ್ನು ಮುಂದುವರಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಹೌತಿಗಳ ಮುಖ್ಯ ಸಮಾಲೋಚಕ ಮತ್ತು ವಕ್ತಾರ ಮೊಹಮ್ಮದ್ ಅಬ್ದುಲ್-ಸಲಾಮ್, ”ಇಸ್ರೇಲಿ ಹಡಗುಗಳನ್ನು ಅಪಹರಿಸುವ ಮೂಲಕ ಯಮನ್ ಸಶಸ್ತ್ರ ಪಡೆಗಳ ಗಂಭೀರತೆಯನ್ನು ಸಾಬೀತುಪಡಿಸುವ ಪ್ರಾಯೋಗಿಕ ಹೆಜ್ಜೆಯನ್ನು ಇಟ್ಟಿವೆ.. ಇದು ಆರಂಭ” ಎಂದು ಹೇಳಿದ್ದಾರೆ.

ಇಸ್ರೇಲಿ ರಕ್ಷಣಾ ಪಡೆ ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ”ದಕ್ಷಿಣ ಕೆಂಪು ಸಮುದ್ರದಲ್ಲಿ ಯಮನ್ ಬಳಿ ಹೌತಿಗಳು ಸರಕು ಹಡಗನ್ನು ಅಪಹರಿಸಿದ್ದು ಜಾಗತಿಕ ಪರಿಣಾಮದ ಅತ್ಯಂತ ಗಂಭೀರ ಘಟನೆಯಾಗಿದೆ.
ಹಡಗು ಭಾರತಕ್ಕೆ ಹೋಗುವ ಮಾರ್ಗದಲ್ಲಿ ಟರ್ಕಿಯಿಂದ ಹೊರಟಿತು, ಇಸ್ರೇಲಿಗಳು ಸೇರಿದಂತೆ ವಿವಿಧ ರಾಷ್ಟ್ರಗಳ ನಾಗರಿಕರು ಹಡಗಿನಲ್ಲಿ ಇದ್ದರು. ಇದು ಇಸ್ರೇಲಿ ಹಡಗು ಅಲ್ಲ” ಎಂದು ಹೇಳಿಕೊಂಡಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ”ಅಂತರಾಷ್ಟ್ರೀಯ ಹಡಗಿನ ಮೇಲೆ ಇರಾನ್ ದಾಳಿಯನ್ನು ಇಸ್ರೇಲ್ ತೀವ್ರವಾಗಿ ಖಂಡಿಸುತ್ತದೆ” ಎಂದು ಹೇಳಿದೆ.

”ಬ್ರಿಟಿಷ್ ಕಂಪನಿಯ ಒಡೆತನದ ಮತ್ತು ಜಪಾನಿನ ಸಂಸ್ಥೆಯಿಂದ ನಿರ್ವಹಿಸಲ್ಪಡುವ ಹಡಗನ್ನು ಇರಾನ್ ಮಾರ್ಗದರ್ಶನದೊಂದಿಗೆ ಯೆಮೆನೈಟ್ ಹೌತಿ ಮಿಲಿಟಿಯಾ ಹೈಜಾಕ್ ಮಾಡಿದೆ” ಎಂದು ಹೇಳಿದೆ.

ಗಾಜಾದ ಮೇಲೆ ಇಸ್ರೇಲ್‌ ನಡೆಸುತ್ತಿರುವ ಯುದ್ಧ ಏಳನೇ ವಾರಕ್ಕೆ ಕಾಲಿಟ್ಟಿರುವ ಸಂದರ್ಭದಲ್ಲಿ ಈ ಅಪಹರಣ ಸಂಭವಿಸಿದೆ. ಇಲ್ಲಿಯವರೆಗೆ, ಇಸ್ರೇಲಿ ಪಡೆಗಳ ನಿರಂತರ ವಾಯು ಮತ್ತು ನೆಲದ ದಾಳಿಯಲ್ಲಿ 13,000 ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯಾದವರು ಸಾವಿಗೀಡಾಗಿದ್ದಾರೆ ಎಂದು ಅಲ್ ಜಜೀರಾ ವರದಿ ಮಾಡಿದೆ.

ಇದನ್ನೂ ಓದಿ: ಯಮನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾದ ಭಾರತೀಯ ನರ್ಸ್‌ನ್ನು ರಕ್ಷಿಸಲು ತಾಯಿಯ ಪರದಾಟ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್: ಎನ್‌ಡಿಎ ಮೈತ್ರಿ ಪಕ್ಷದ ನಾಯಕ ರಾಜೀನಾಮೆ

0
ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬಿಜೆಪಿಯ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಅವರ ಪುತ್ರನಿಗೆ ಟಿಕೆಟ್ ನೀಡಿದ ಬೆನ್ನಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿ ಎನ್‌ಡಿಎ ಮೈತ್ರಿ ಪಕ್ಷ ಆರ್‌ಎಲ್‌ಡಿಯ ರಾಷ್ಟ್ರೀಯ ವಕ್ತಾರ ರೋಹಿತ್...