Homeಮುಖಪುಟಯೆಸ್ ಬ್ಯಾಂಕ್ ನಿಷೇಧ ಬುಧವಾರ ತೆರವು: ಆರ್ಬಿಐ

ಯೆಸ್ ಬ್ಯಾಂಕ್ ನಿಷೇಧ ಬುಧವಾರ ತೆರವು: ಆರ್ಬಿಐ

- Advertisement -
- Advertisement -

ಬುಧವಾರ ಸಂಜೆ 6 ಗಂಟೆಗೆ ಯೆಸ್ ಬ್ಯಾಂಕ್ ಮೇಲಿನ ನಿಷೇಧವನ್ನು ತೆಗೆದುಹಾಕಲಾಗುವುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ. ಯೆಸ್ ಬ್ಯಾಂಕನ್ನು ಮೇಲೆತ್ತಲು ಆರ್‌ಬಿಐ ಮತ್ತು ಸರ್ಕಾರವು ತ್ವರಿತ ಹಾಗೂ ಬಲವಾದ ಕ್ರಮ ಕೈಗೊಂಡಿದೆ ಎಂದು ಒತ್ತಿ ಹೇಳಿದ್ದಾರೆ.

“ಯೆಸ್ ಬ್ಯಾಂಕ್‌ ಠೇವಣಿದಾರರ ಹಣವು ಸಂಪೂರ್ಣವಾಗಿ ಸುರಕ್ಷಿತವಾಗಿದೆ, ಯಾವುದೇ ಚಿಂತೆಯ ಅಗತ್ಯವಿಲ್ಲ” ಎಂದು ಶಕ್ತಿಕಾಂತ ದಾಸ್ ಹೇಳಿದ್ದಾರೆ. ಅಲ್ಲದೆ ಮಾರ್ಚ್ 26 ರಂದು ಯೆಸ್ ಬ್ಯಾಂಕನ್ನು ಹೊಸ ಮಂಡಳಿ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಯೆಸ್ ಬ್ಯಾಂಕ್ ಅನ್ನು ನಿಷೇಧಕ್ಕೆ ಒಳಪಡಿಸಿತ್ತು. ಅಲ್ಲದೆ ಬ್ಯಾಂಕನ್ನು ತನ್ನ ನಿಯಂತ್ರಣಕ್ಕೆ ಒಳಪಡಿಸಿ ಎಪ್ರಿಲ್ 3 ರವರೆಗೆ ಬ್ಯಾಂಕಿನಿಂದ ಹಿಂಪಡೆಯಲು 50,000 ರೂ.ಗಳ ಮಿತಿಯನ್ನು ವಿಧಿಸಿತ್ತು. ಇದರಿಂದಾಗಿ ಯೆಸ್ ಬ್ಯಾಂಕ್ ಗ್ರಾಹಕರು ಇಂಟರ್ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಪಾವತಿ ಮಾಡಲು ಹಾಗೂ ಎಟಿಎಂಗಳಿಂದ ಹಣ ಪಡೆಯಲು ಪರದಾಡುವಂತಾಗಿತ್ತು.

“ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಯೆಸ್ ಬ್ಯಾಂಕಿನಲ್ಲಿ ಶೇ 49 ರಷ್ಟು ಷೇರುಗಳನ್ನು ಹೂಡಿಕೆ ಮಾಡುತ್ತದೆ ಮತ್ತು ಇತರ ಹೂಡಿಕೆದಾರರನ್ನು ಸಹ ಆಹ್ವಾನಿಸಲಾಗುತ್ತದೆ” ಎಂದು ಕೇಂದ್ರ ಸಚಿವ ಸಂಪುಟದ ಸಭೆಯ ನಂತರ ನಿರ್ಮಲಾ ಸೀತಾರಾಮನ್ ಹೇಳಿದ್ದರು.

ಒಪ್ಪಂದದ ಭಾಗವಾಗಿ ಯೆಸ್ ಬ್ಯಾಂಕಿನಲ್ಲಿರುವ ಎಲ್ಲಾ ಉದ್ಯೋಗಿಗಳನ್ನು ಉಳಿಸಿಕೊಳ್ಳಲಾಗುತ್ತದೆ ಎನ್ನಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...