Homeಮುಖಪುಟ‘ಹೌದು ಮೈಲಾರ್ಡ್, ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರೆಲ್ಲಾ ಒಟ್ಟಾಗಿ ಸಂಚು ಹೂಡಿದರು’

‘ಹೌದು ಮೈಲಾರ್ಡ್, ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರೆಲ್ಲಾ ಒಟ್ಟಾಗಿ ಸಂಚು ಹೂಡಿದರು’

ಗೊಗೊಯ್ ವಿರುದ್ಧದ ಲೈಂಗಿಕ ಆರೋಪಗಳ ಹಿಂದಿನ ಪಿತೂರಿಯನ್ನು ತಳ್ಳಿಹಾಕುವಂತಿಲ್ಲ ಎಂಬ ಸುಪ್ರೀಂ ಕೋರ್ಟ್ ಸಮಿತಿಯ ವರದಿಗೆ ತೃಣಮೂಲ ಸಂಸದೆ ಮಹುವಾ ಮೊಯಿತ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಸುಪ್ರೀಂಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳ ಹಿಂದಿನ ಪಿತೂರಿಯನ್ನು ತಳ್ಳಿಹಾಕುವಂತಿಲ್ಲ ಎಂಬ ಸುಪ್ರೀಂ ಕೋರ್ಟ್ ಸಮಿತಿಯ ವರದಿಗೆ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಆಕ್ರೋಶ ವ್ಯಕ್ತಪಡಿಸಿದ್ದು, ‘ಹೌದು ಮೈಲಾರ್ಡ್, ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರೆಲ್ಲಾ ಒಟ್ಟಾಗಿ ಸಂಚು ಹೂಡಿದರು’ ಎಂದು ಹೇಳಿದ್ದಾರೆ.

ಮಾಜಿ ನ್ಯಾಯಮೂರ್ತಿ ಗೂಗೋಯ್ ವಿರುದ್ದದ ಲೈಂಗಿಕ ಆರೋಪದ ಬಗ್ಗೆ ಸುಪ್ರೀಂಕೋರ್ಟ್ ತೀರ್ಪಿಗೆ, ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಹುವಾ ಮೊಯಿತ್ರಾ, “ನ್ಯಾಯಮೂರ್ತಿ ಗೊಗೊಯ್ ವಿರುದ್ಧದ ಆರೋಪಗಳನ್ನು ತನಿಖೆ ಮಾಡಲು ಸಮಿತಿ ರಚಿಸಿಲ್ಲ, ಆದರೆ ನ್ಯಾಯಾಧೀಶರ ಮೇಲೆ ಮಾಡಲಾದ ದೊಡ್ಡ ಪಿತೂರಿಯ ಬಗ್ಗೆ ತನಿಖೆ ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. ಹೌದು ಮೈಲಾರ್ಡ್, ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರೆಲ್ಲಾ ಒಟ್ಟಾಗಿ ಸಂಚು ಹೂಡಿದರು” ಎಂದು ಟ್ವೀಟ್ ಮಾಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗೊಗೊಯ್ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ: ಪಿತೂರಿ ನಡೆದಿರಬಹುದು ಎಂದ ಸುಪ್ರೀಂ

 

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧ ಪಿತೂರಿ ನಡೆದಿದ್ದ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಇಂದು ಹೇಳಿದ್ದು, ಲೈಂಗಿಕ ಕಿರುಕುಳದ ಆರೋಪದ ನಂತರ ಆರಂಭಿಸಲಾಗಿದ್ದ ತನಿಖೆಯನ್ನು ಮುಕ್ತಾಯಗೊಳಿಸಿದೆ. ನ್ಯಾಯಮೂರ್ತಿ ಗೊಗೊಯ್ ಅವರ ಕಠಿಣ ನಿರ್ಧಾರಗಳ ಕಾರಣದಿಂದ ಇಂತಹ ಪಿತೂರಿ ಸಂಭವಿಸಿರಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ನ್ಯಾಯಮೂರ್ತಿ ಎ.ಕೆ. ಪಟ್ನಾಯಕ್ ಸಲ್ಲಿಸಿದ ವರದಿಯಲ್ಲಿ ಇದನ್ನು ಉಲ್ಲೇಖಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಎರಡು ವರ್ಷಗಳ ಹಿಂದೆ ದೂರು ದಾಖಲಾಗಿದ್ದರಿಂದ ಹೆಚ್ಚಿನ ತನಿಖೆ ನಡೆಸುವ ಸಾಧ್ಯತೆ ಇಲ್ಲ ಮತ್ತು ಆದ್ದರಿಂದ ಪ್ರಕರಣವನ್ನು ಮುಚ್ಚಲಾಗಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿತ್ತು.

ಇದನ್ನೂ ಓದಿ: ಪಂಜಾಬ್ ಚುನಾವಣೆ: ನನ್ನ ಕುಟುಂಬದವರ ಮತವೇ ನನಗೆ ಬಿದ್ದಿಲ್ಲ ಎಂದ ಬಿಜೆಪಿ ಅಭ್ಯರ್ಥಿ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ...

0
ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು...