Homeಮುಖಪುಟಜುಬೇರ್ ವಿರುದ್ಧ ಯತಿ ನರಸಿಂಹಾನಂದ ದೂರು: ಹೇಳಿಕೆ ದಾಖಲಿಸಿದ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ

ಜುಬೇರ್ ವಿರುದ್ಧ ಯತಿ ನರಸಿಂಹಾನಂದ ದೂರು: ಹೇಳಿಕೆ ದಾಖಲಿಸಿದ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ

- Advertisement -
- Advertisement -

ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ವಿರುದ್ಧ ಯತಿ ನರಸಿಂಹಾನಂದ ಸರಸ್ವತಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಉದಿತಾ ತ್ಯಾಗಿ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ  ಸೋಮವಾರ ಜುಬೇರ್ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜುಬೈರ್ ಅವರು ಉದ್ರೇಕಕಾರಿ ಟ್ವೀಟ್ ಮೂಲಕ ಮುಸ್ಲಿಮರನ್ನು ಕೆರಳಿಸಿದ್ದಾರೆ ಎಂದು ತ್ಯಾಗಿ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ, ಇದು ಅಕ್ಟೋಬರ್ 3 ರಂದು ದಸ್ನಾ ದೇವಿ ದೇವಸ್ಥಾನದ ಮೇಲೆ ದಾಳಿಗೆ ಕಾರಣವಾಗಿತ್ತು. ತ್ಯಾಗಿ ಅವರು ಕೊಲ್ಲುವ ಉದ್ದೇಶದಿಂದ ಮುಸ್ಲಿಮರ ಗುಂಪೊಂದು ಈ ದಾಳಿಯನ್ನು ನಡೆಸಿತು ಎಂದು ದೂರು ದಾಖಲಿಸಿದ್ದರು ಎಂದು ಕವಿನಗರ ಎಸಿಪಿ ಅಭಿಷೇಕ್ ಶ್ರೀವಾಸ್ತವ ಹೇಳಿದರು.

ಸೆಕ್ಷನ್ 196 (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 228 (ಸುಳ್ಳು ಪುರಾವೆಗಳನ್ನು ಸೃಷ್ಟಿಸುವುದು), 299 (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು),  ಭಾರತೀಯ ದಂಡ ಸಂಹಿತೆಯ (IPC) 356(3) (ಮಾನನಷ್ಟ), ಮತ್ತು 351(2) (ಕ್ರಿಮಿನಲ್ ಬೆದರಿಕೆ)ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಜುಬೇರ್ ಅವರು ತನ್ನ ವೈರಲ್ ಪೋಸ್ಟ್‌ನಲ್ಲಿ ಸೆಪ್ಟೆಂಬರ್ 29 ರಂದು ಗಾಜಿಯಾಬಾದ್‌ನ ಹಿಂದಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯತಿ ನರಸಿಂಹಾನಂದ ಅವರು ಮಾಡಿದ ಭಾಷಣದ ಕ್ಲಿಪ್ಪಿಂಗ್ ಅನ್ನು ಹಂಚಿಕೊಂಡಿದ್ದರು. ಅದರಲ್ಲಿ ಅವರು ಪ್ರವಾದಿ ಮುಹಮ್ಮದ್ ಬಗ್ಗೆ ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾರೆ ಎಂದು ಹೇಳಲಾಗಿತ್ತು.

ಈ ಸಂಬಂಧ ಜುಬೇರ್ ಅಲಹಾಬಾದ್ ಹೈಕೋರ್ಟ್‌ನಿಂದ ಬಂಧನದಿಂದ ತಡೆಯಾಜ್ಞೆ ಪಡೆದುಕೊಂಡಿದ್ದರು.  ಆದಾಗ್ಯೂ, ಅವರು ತನಿಖೆಯಲ್ಲಿ ಗಾಜಿಯಾಬಾದ್ ಪೊಲೀಸರೊಂದಿಗೆ ಸಹಕರಿಸುವಂತೆ ನ್ಯಾಯಾಲಯ  ಸೂಚಿಸಿತ್ತು.

ಡಿಸೆಂಬರ್ 20 ರಂದು ಅಲಹಾಬಾದ್ ಹೈಕೋರ್ಟ್ ಜುಬೈರ್ ಅವರ ಬಂಧನದ ತಡೆಯನ್ನು ಜನವರಿ 6, 2025 ರವರೆಗೆ ವಿಸ್ತರಿಸಿತು.  ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುತ್ತದೆ ಎಂದು ಈ ಎಫ್‌ಐಆರ್‌  ಆರೋಪಿಸಿದೆ. ಜುಬೈರ್ ಅವರ ಅಂತಾರಾಷ್ಟ್ರೀಯ ಪ್ರಯಾಣಕ್ಕೂ ನ್ಯಾಯಾಲಯವ ನಿರ್ಬಂಧ ವಿಧಿಸಿದೆ.

ನ್ಯಾಯಾಲಯದ ಆದೇಶದ ಮೇರೆಗೆ ಸೋಮವಾರ ಕವಿನಗರ ಠಾಣೆಗೆ ಭೇಟಿ ನೀಡಿದ ಜುಬೇರ್ ತಮ್ಮ ಹೇಳಿಕೆಯನ್ನು ದಾಖಲಿಸಿ, ಪೊಲೀಸರ ಹಲವು ಪ್ರಶ್ನೆಗಳಿಗೆ ಉತ್ತರಿಸಿದರು. ಅವರು ಸುಮಾರು ನಾಲ್ಕು ಗಂಟೆಗಳ ಕಾಲ ಠಾಣೆಯಲ್ಲಿ ಕಳೆದರು ಎಂದು ಎಸಿಪಿ ಶ್ರೀವಾಸ್ತವ ಖಚಿತಪಡಿಸಿದ್ದಾರೆ.

‘ಕೇರಳ ಮಿನಿ ಪಾಕಿಸ್ತಾನ’ ಎಂದ ಮಹಾರಾಷ್ಟ್ರದ ಸಚಿವ : ರಾಜೀನಾಮೆಗೆ ಕಾಂಗ್ರೆಸ್ ಪಟ್ಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...