Homeಮುಖಪುಟಯೋಗದ ಮೂಲ ನೇಪಾಳ, ಭಾರತವಲ್ಲ ಎಂದ ಕೆ.ಪಿ.ಶರ್ಮಾ ಒಲಿ

ಯೋಗದ ಮೂಲ ನೇಪಾಳ, ಭಾರತವಲ್ಲ ಎಂದ ಕೆ.ಪಿ.ಶರ್ಮಾ ಒಲಿ

- Advertisement -
- Advertisement -

ಯೋಗದ ಮೂಲ ನೇಪಾಳದಲ್ಲಿದೆ. ಜಗತ್ತಿನಲ್ಲಿ ಯೋಗ ಆರಂಭವಾದಾಗ ಭಾರತವು ಇರಲಿಲ್ಲ ಎಂದು ನೇಪಾಳದ ಉಸ್ತುವಾರಿ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಸೋಮವಾರ ಹೇಳಿದ್ದಾರೆ.

ಕಳೆದ ವರ್ಷದ ಜುಲೈನಲ್ಲಿ ಶ್ರೀರಾಮನ ಜನ್ಮಸ್ಥಳವಾದ ಅಯೋಧ್ಯೆ ನೇಪಾಳದಲ್ಲಿದೆ. ಭಗವಾನ್ ಶ್ರೀರಾಮ  ನೇಪಾಳಿ ಎಂದು ಹೇಳಿ ವಿವಾದಕ್ಕೆ ಒಳಗಾಗಿದ್ದ ಕೆ.ಪಿ.ಶರ್ಮಾ ಒಲಿ, ಈಗ ಯೋಗದ ಕುರಿತ ಹೇಳಿಕೆಯಿಂದ ಮತ್ತೆ ಸುದ್ದಿಯಲ್ಲಿದ್ದಾರೆ.

“ಯೋಗವು ನೇಪಾಳದಲ್ಲಿ ಹುಟ್ಟಿಕೊಂಡಿತು, ಭಾರತದಲ್ಲಿ ಅಲ್ಲ. ಯೋಗ ಅಸ್ತಿತ್ವಕ್ಕೆ ಬಂದ ಸಮಯದಲ್ಲಿ ಭಾರತದ ಅಸ್ತಿತ್ವವಿರಲಿಲ್ಲ. ಅದನ್ನು ಬಣಗಳಾಗಿ ವಿಂಗಡಿಸಲಾಗಿತ್ತು” ಎಂದು ಉಸ್ತುವಾರಿ ಪ್ರಧಾನಿ ಒಲಿ ಹೇಳಿದರು.

ಅಂತರರಾಷ್ಟ್ರೀಯ ಯೋಗ ದಿನದಂದು ತಮ್ಮ ನಿವಾಸ ಬಾಲುವತಾರ್‌ನಲ್ಲಿ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಒಲಿ, ಭಾರತೀಯ ತಜ್ಞರು ಯೋಗದ ಬಗ್ಗೆ ಸತ್ಯವನ್ನು ಮರೆಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

“ಈಗ ಇರುವ ಭಾರತವು ಹಿಂದೆ ಇರಲಿಲ್ಲ. ಆ ಸಮಯದಲ್ಲಿ ಭಾರತವನ್ನು ವಿವಿಧ ಬಣಗಳಾಗಿ ವಿಂಗಡಿಸಲಾಗಿತ್ತು. ಆ ಸಮಯದಲ್ಲಿ ಭಾರತವು ಖಂಡ ಅಥವಾ ಉಪಖಂಡದಂತೆಯೇ ಇತ್ತು” ಎಂದು ಹೇಳಿದ್ದಾರೆ.

2014 ರ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಘೋಷಣೆಯಾದ ನಂತರ, 2015 ರಿಂದ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ತಮ್ಮ ಯುಎನ್ ಭಾಷಣದಲ್ಲಿ ಜೂನ್ 21 ರ ದಿನಾಂಕವನ್ನು ಅಂತರರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸಲು ಸೂಚಿಸಿದ್ದರು.


ಇದನ್ನೂ ಓದಿ: ಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣಾ ಬಾಂಡ್‌ ಹಗರಣ: ಸುಪ್ರೀಂ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ತನಿಖೆಗೆ ಮನವಿ

0
ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪ್ರೇರಿತ ಹಣಕಾಸು ವ್ಯವಹಾರದಲ್ಲಿ ತೊಡಗಿಸಿಕೊಂಡಿರುವ ಶಂಕಿತ ಹಗರಣದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ ಎಂದು...