Homeಚಳವಳಿʼಬಿಜೆಪಿ ಸೋಲಿಸಿ ಅಭಿಯಾನʼ: ಅಖಿಲ್‌ ಗೊಗೋಯ್ ಭೇಟಿಯಾದ ಯೋಗೇಂದ್ರ ಯಾದವ್

ʼಬಿಜೆಪಿ ಸೋಲಿಸಿ ಅಭಿಯಾನʼ: ಅಖಿಲ್‌ ಗೊಗೋಯ್ ಭೇಟಿಯಾದ ಯೋಗೇಂದ್ರ ಯಾದವ್

ಅಖಿಲ್‌ ಗೊಗೋಯ್ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಯೋಗೇಂದ್ರ ಯಾದವ್ ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ್ದಾರೆ

- Advertisement -
- Advertisement -

ಸ್ವರಾಜ್‌ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್‌ ಭಾನುವಾರ ಸಿಎಎ ವಿರೋಧಿ ಹೋರಾಟಗಾರ ಮತ್ತು ರೈಜೋರ್ ದಳ್ ಅಧ್ಯಕ್ಷ ಅಖಿಲ್‌ ಗೊಗೋಯ್ ಅವರನ್ನು ಭೇಟಿಯಾಗಿ ಅಸ್ಸಾಂನಲ್ಲಿರುವ ಆಡಳಿತಾರೂಢ ಬಿಜೆಪಿಯನ್ನು ಸೋಲಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

ಯೋಗೇಂದ್ರ ಯಾದವ್ ಮತ್ತು ಕಿಸಾನ್ ಸಂಘರ್ಷ ಸಮಿತಿ ನಾಯಕ ಸುನೀಲಂ ಅವರು ಆರ್‌ಟಿಐ ಕಾರ್ಯಕರ್ತ, ಸಿಎಎ ವಿರೋಧಿ ಹೋರಾಟಗಾರ, ಅಖಿಲ್‌ ಗೊಗೊಯ್ ಅವರನ್ನು ಗುವಾಹಟಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಭೇಟಿಯಾದರು.

ಅಖಿಲ್‌ ಗೋಗೋಯ್‌ ಸಿಎಎ ವಿರೋಧಿ ಹೋರಾಟದಲ್ಲಿ ಭಾಗಿಯಾಗಿ, ದೇಶದ್ರೋಹ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ. ಅಲ್ಲದೇ ಅವರು ಅಸ್ಸಾಂನಲ್ಲಿ ಅಕ್ಟೋಬರ್‌ 2, 2020ರಲ್ಲಿ ತಮ್ಮದೆ ರೈಜೋರ್‌ ದಳ್‌ ಪಕ್ಷವನ್ನು ಸ್ಥಾಪಿಸಿದ್ದಾರೆ.

ಇದನ್ನೂ ಓದಿ: ಅಸ್ಸಾಂನ ಸಿಬ್ಸಾಗರ್‌ನಿಂದ ಸ್ಪರ್ಧಿಸಲಿರುವ ಸಿಎಎ ವಿರೋಧಿ ಹೋರಾಟಗಾರ ಅಖಿಲ್ ಗೊಗೊಯ್

ವಿವಾದಿತ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳದ ಒಕ್ಕೂಟ ಸರ್ಕಾರದ ವಿರುದ್ಧ ಹೋರಾಟವನ್ನು ತೀವ್ರಗೊಳಿಸಿರುವ ರೈತ ನಾಯಕರು, ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರಚಾರ ನಡೆಸುವುದಾಗಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣೆ ನಡೆಯಲಿರುವ ಅಸ್ಸಾಂನಲ್ಲಿ ಭಾನುವಾರ ರೈತ ಮುಖಂಡ ಯೋಗೇಂದ್ರ ಯಾದವ್‌, ಅಖಿಲ್‌ ಗೊಗೋಯ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

“ಅಖಿಲ್ ಗೊಗೋಯ್ ಮೊದಲ ಎರಡು ಹಂತಗಳಲ್ಲಿ 86 ಸ್ಥಾನಗಳಲ್ಲಿ 19 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಬಿಜೆಪಿಯನ್ನು ಈ ಚುನಾವಣೆಯಲ್ಲಿ ಸೋಲುವಂತೆ ನೋಡಿಕೊಳ್ಳುವುದು ಅವರ ಗುರಿಯಾಗಿದೆ” ಎಂದು ಸ್ವರಾಜ್‌ ಇಂಡಿಯಾದ ಅಧ್ಯಕ್ಷ ಯೋಗೇಂದ್ರ ಯಾದವ್ ಹೇಳಿದ್ದಾರೆ.

“ಕೇಂದ್ರದ ಆಡಳಿತರೂಢ ಬಿಜೆಪಿ ರೈತರೊಂದಿಗೆ ನಡೆದುಕೊಂಡಿರುವ ರೀತಿಗೆ ಮತ್ತು ರೈತರ ಹಿತಾಸಕ್ತಿ, ಕಲ್ಯಾಣವನ್ನು ಕಡೆಗಣಿಸಿ ಅವರ ವಿರುದ್ಧದ ನಿರ್ಧಾರಗಳನ್ನು ತೆಗೆದುಕೊಂಡಿರುವುದಕ್ಕೆ ನಾವು ಬಿಜೆಪಿಯನ್ನು ಉಚ್ಛಾಟಿಸಬೇಕು ಎಂಬ ಒಂದು ಸಂದೇಶದೊಂದಿಗೆ ನಾವು ಬಂದಿದ್ದೇವೆ” ಎಂದು ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ಹೇಳಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಕೇಳಿದ್ದೇನೆ: ಪ್ರಮೋದ್ ಮುತಾಲಿಕ್

ʼಕಳೆದ ವರ್ಷ ಫೆಬ್ರವರಿಯಲ್ಲಿ ಗೊಗೋಯ್ ಅವರನ್ನು ಜೈಲಿನಲ್ಲಿ ಭೇಟಿಯಾಗಿದ್ದೆ. ಅಂದಿನಿಂದ ಅವರ ಆರೋಗ್ಯ ಸ್ಥಿತಿ ಗಣನೀಯವಾಗಿ ಹದಗೆಟ್ಟಿದೆ ಎಂದು ಯೋಗೇಂದ್ರ ಯಾದವ್ ಆತಂಕ ವ್ಯಕ್ತಪಡಿಸಿದ್ದಾರೆ.

“ಅವರು ಸಾಕಷ್ಟು ಮಾನಸಿಕ ಹಿಂಸೆಗೆ ಒಳಗಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಆದರೆ, ಸೈದ್ಧಾಂತಿಕ ಸ್ಪಷ್ಟತೆ, ಮಾನಸಿಕ ಸಂಕಲ್ಪ ಮತ್ತು ಅವರು ತೋರಿಸಿದ ಧೈರ್ಯವು ಎಲ್ಲರಿಗೂ ಒಂದು ಮಾದರಿಯಾಗಿದೆ” ಎಂದು ಯಾದವ್ ಹೇಳಿದ್ದಾರೆ.

ಇದು ಕ್ರಿಮಿನಲ್‌ ವಿಚಾರಣೆಯಲ್ಲ ಬದಲಿಗೆ ರಾಜಕೀಯ ವಿಚಾರಣೆ ಎಂದು ಆರೋಪಿಸಿರುವ ಯೋಗೇಂದ್ರ ಯಾದವ್‌, ಅಸ್ಸಾಂ ಚುನಾವಣೆಯ ಸಮಯದಲ್ಲಿ ಜನರೊಂದಿಗೆ ಬೆರೆಯಬಾರದು ಎಂದು ಗೊಗೋಯ್ ಅವರನ್ನು ಜೈಲಿಗೆ ಹಾಕಲಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಅಸ್ಸಾಂ ಹೋರಾಟಗಾರ ಅಖಿಲ್ ಗೊಗೋಯ್ ಚಿತ್ರ ಬಿಡಿಸಿದ ಕಲಾವಿದರ ಬಂಧನ!

“ಅವರು ಪ್ರತಿನಿಧಿಸುವ ಜನರ ಧ್ವನಿಯನ್ನು ಮೌನಗೊಳಿಸಲು ಅವರ ವಿರುದ್ಧ ಸುಳ್ಳು ಪ್ರಕರಣಗಳನ್ನು ಹಾಕಲಾಗಿದೆ ಎಂಬುದು ಸ್ಪಷ್ಟವಾಗಿದೆ, ಆದರೆ ಈಗ ಚುನಾವಣೆಗಳು ನಡೆಯುತ್ತಿರುವುದರಿಂದ ರಾಜ್ಯದ ಜನರು ನಿರ್ಧಾರ ತೆಗೆದುಕೊಳ್ಳಬೇಕು” ಎಂದಿದ್ದಾರೆ.

ಗೊಗೋಯ್ ಅವರು ರಾಜಕೀಯದ ಬಗ್ಗೆ ಚರ್ಚಿಸಲು ಹೋಗಲಿಲ್ಲ. ಆದರೆ, ರೈತ ಹೋರಾಟದ ಬಗ್ಗೆ, ಅದರ ಪ್ರಗತಿ ಬಗ್ಗೆ ತಿಳಿಯಲು ಹೆಚ್ಚು ಆಸಕ್ತಿ ಹೊಂದಿದ್ದರು. ಜೊತೆಗೆ ಬಿಜೆಪಿಯನ್ನು ಸೋಲಿಸುವ ಅಗತ್ಯದ ಬಗ್ಗೆ ಬಹಳ ಸ್ಪಷ್ಟವಾಗಿದ್ದರು ಎಂದು ಯೋಗೇಂದ್ರ ಯಾದವ್‌ ತಿಳಿಸಿದ್ದಾರೆ.

ಇದೇ ವೇಳೆ ಅಖಿಲ್‌ ಗೊಗೋಯ್ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಅವರು ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ್ದಾರೆ. ಸಿಬ್ಸಾಗರ್ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವ ಗೊಗೋಯ್ ಪರ ಪ್ರಚಾರಕ್ಕಾಗಿ ಸಿಬ್ಸಾಗರ್‌ಗೆ ಹೋಗುವುದಾಗಿ ಸುನೀಲಂ ಹೇಳಿದ್ದಾರೆ.

2019 ರ ಡಿಸೆಂಬರ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಅಖಿಲ್‌ ಗೊಗೊಯ್ ವಿರುದ್ಧ ಕಠಿಣ ಯುಎಪಿಎ ವಿರುದ್ಧ ಪ್ರಕರಣ ದಾಖಲಾಗಿದ್ದು, ಅಂದಿನಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಹೋರಾಟಗಾರ ಅಖಿಲ್‌ ಗೊಗೋಯ್ ಕೆಲವು ತಿಂಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಹೀಗಾಗಿ ಅವರನ್ನು ಗುವಾಹಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.

126 ಸದಸ್ಯರ ಅಸ್ಸಾಂ ವಿಧಾನಸಭೆಯ ಚುನಾವಣೆಗಳು ಮೂರು ಹಂತಗಳಲ್ಲಿ ನಡೆಯಲಿದೆ.


ಇದನ್ನೂ ಓದಿ: ‘ಭಾರತೀಯ ಸಂಪ್ರದಾಯಕ್ಕೆ ಸೆಕ್ಯುಲರಿಸಂ ಒಂದು ಬೆದರಿಕೆ’: ಯೋಗಿ ಆದಿತ್ಯನಾಥ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...