Homeಮುಖಪುಟಕಣ್ಣೆದುರಿಗೆ ತಂದೆಯನ್ನು ಕೊಂದವರ ಹೆಸರನ್ನೇ ಮಕ್ಕಳಿಗಿರಿಸಿದ ದೇವೇಂದ್ರ ಯಾದವ್

ಕಣ್ಣೆದುರಿಗೆ ತಂದೆಯನ್ನು ಕೊಂದವರ ಹೆಸರನ್ನೇ ಮಕ್ಕಳಿಗಿರಿಸಿದ ದೇವೇಂದ್ರ ಯಾದವ್

- Advertisement -
- Advertisement -

1936 ರ ಸಮಯ. ಈಗಿನ ಹರಿಯಾಣಾದ ಹಿಸಾರ್ ಎನ್ನುವ ಪಟ್ಟಣದಲ್ಲಿ ರಾಮ್ ಸಿಂಗ್ ಒಂದು ಶಾಲೆಯ ಶಿಕ್ಷಕರಾಗಿದ್ದರು. ಸ್ವಾತಂತ್ರಪೂರ್ವದ ಸಮಯ. ಅಲ್ಲಲ್ಲಿ ಕೋಮು ದಳ್ಳುರಿಗಳು ನಡೆಯುತ್ತಿದ್ದವು. ರಾಮ್‍ಸಿಂಗ್ ಅವರು ಶಿಕ್ಷಕರಾಗಿದ್ದ ಶಾಲೆಗೆ ಕೋಮು ಗಲಭೆಯನ್ನೆಬ್ಬಿಸುತ್ತ ಮುಸಲ್ಮಾನರ ಗುಂಪೊಂದು ಬಂದು ಅಲ್ಲಿದ್ದ ಮಕ್ಕಳನ್ನು ತಮ್ಮ ವಶಕ್ಕೆ ನೀಡಬೇಕೆಂದು ಆದೇಶಿಸಿದರು. ಮಕ್ಕಳನ್ನು ಮುಟ್ಟೂಕಿಂತ ಮುಂಚೆ ಮೊದಲು ನನ್ನನ್ನು ನೋಡಿಕೊಳ್ಳಿ ಎಂದು ತಮ್ಮ ಕರ್ತವ್ಯ ಪಾಲಿಸಿದರು ರಾಮ್‍ಸಿಂಗ್. ಆಗ ಅವರ ಕುತ್ತಿಗೆಯನ್ನು ಕುಡಗೋಲಿನಿಂದ ಸೀಳಿದರು ಆ ಗಲಭೆಕೋರರು. ಈ ಘಟನೆಯನ್ನು ನೋಡುತ್ತ ನಿಂತವರಲ್ಲಿ  ಏಳು ವರ್ಷದ ಒಬ್ಬ ಬಾಲಕ ದೇವೇಂದ್ರ ಸಿಂಗ್, ಕೊಲೆಗೀಡಾದ ಶಿಕ್ಷಕ ರಾಮ್‍ಸಿಂಗ್ ಅವರ ಪುತ್ರ.

ತನ್ನ ಕಣ್ಣೆದುರಿಗೆ ಆದ ತನ್ನ ತಂದೆಯ ಕೊಲೆಯಿಂದ ಆ ಬಾಲಕನ ಮೇಲೆ ಏನೆಲ್ಲ ಪರಿಣಾಮ ಬೀರಿತೋ ಏನೋ. ತನ್ನ ತಂದೆಯನ್ನು ತನ್ನ ಕಣ್ಣೆದುರಿಗೇ ಕೊಂದ ಮುಸಲ್ಮಾನರನ್ನು ದ್ವೇಷಿಸಲು ಅವರಿಗೆ ಸಾಕಷ್ಟು ಕಾರಣಗಳಿದ್ದವು. ಆದರೆ ಆ ಬಾಲಕ ಬೆಳೆಯುತ್ತಿರುವ ಸಮಯ ಸ್ವಾತಂತ್ರ ಸಂಗ್ರಾಮದ ಸಮಯ. ಗಾಂಧೀಜಿಯವರ ಸತ್ಯಾಗ್ರಹಗಳ, ಹಿಂದು ಮುಸ್ಲಿಂ ಏಕತೆಗಾಗಿ ಜೀವ ತೇಯುತ್ತಿದ್ದ ಸಮಯ. ‘ನಾನೊಬ್ಬ ಹಿಂದು ಆಗಲಿ, ಮುಸಲ್ಮಾನನಾಗಲಿ ಆಗುವುದಿಲ್ಲ, ನಾನು ಆಗುವುದು ಒಬ್ಬ ಮನುಷ್ಯ’ ಎನ್ನುವ ಮಾತುಗಳನ್ನು ಕೇಳಿದ ದೇವೇಂದ್ರ ಸಿಂಗ್, ತಮ್ಮ ಜೀವನದಲ್ಲಿ ದ್ವೇಷವು ಪರಿಣಾಮ ಬೀರಲು ಅವಕಾಶ ನೀಡಲಿಲ್ಲ.

ಮುಂದೆ ಬೆಳೆದು ಅರ್ಥಶಾಸ್ತ್ರದ ಪ್ರಾಧ್ಯಾಪಕರಾದ ದೇವೇಂದ್ರ ಸಿಂಗ್, ತಮ್ಮ ಮಕ್ಕಳಿಗೆ ಮುಸ್ಲಿಂ ಹೆಸರುಗಳನ್ನು ನೀಡಲು ನಿರ್ಧರಿಸಿದರು. ತನ್ನ ತಂದೆಯನ್ನು ತನ್ನೆದುರಿಗೆ ಕೊಂದ ಸಮುದಾಯದವರ ಹೆಸರನ್ನು ನೀಡಲು ನಿರ್ಧರಿಸಿದರು. ಮೊದಲ ಮಗುವಿಗೆ ನಜ್ಮಾ ಎಂದು ಹೆಸರಿಡುವಾಗ ಅವರ ಹೆಂಡತಿ, ‘ಮಗಳಿಗೆ ಬೇಡ, ಮುಂದೆ ಗಂಡು ಮಗುವಾದಾಗ ಈ ಪ್ರಯೋಗವನ್ನು ಮಾಡುವ, ಹೆಣ್ಣು ಮಗಳ ಮೇಲೆ ಬೇಡ, ಮುಂದೆ ಮದುವೆಗೆ ಸಮಸ್ಯೆಯಾಗುತ್ತೆ’ ಎಂದರು. ಹಾಗಾಗಿ ಆ ಹೆಣ್ಣು ಮಗುವಿಗೆ ನೀಲಂ ಎಂದು ನಾಮಕರಣ ಮಾಡಲಾಯಿತು. ನಂತರ ಗಂಡು ಮಗುವಾದಾಗ ಸಲೀಂ ಎನ್ನುವ ಹೆಸರನ್ನಿಟ್ಟರು.

ರಾಜಸ್ಥಾನದ ಒಂದು ಹಳ್ಳಿಯಲ್ಲಿ ಶಾಲೆಗೆ ಹೋಗುತ್ತಿದ್ದ ಆ ಬಾಲಕನ ಶಾಲೆಯಲ್ಲಿ ಯಾವ ಮುಸಲ್ಮಾನ ಮಕ್ಕಳೂ ಇರಲಿಲ್ಲ. ಹಾಗಾಗಿ ಎಲ್ಲ ಮಕ್ಕಳಿಗೂ ಇವನ ಬಗ್ಗೆ ಕುತೂಹಲ. ‘ನೀನ್ಯಾರು, ನಿನ್ನನ್ನು ದತ್ತು ತೆಗೆದುಕೊಂಡಿದ್ದಾರಾ? ಮುಸಲ್ಮಾನರು ಹೇಗಿರುತ್ತಾರೆ?’ ಎಂದೆಲ್ಲಾ ಪೀಡಿಸಲಾರಂಭಿಸಿದರು. ತಂದೆ ದೇವೇಂದ್ರ ಜಾತ್ಯತೀತತೆಯ ಬಗ್ಗೆ ಆ ಪುಟ್ಟ ಮಗು ಸಲೀಂನಿಗೆ ಏನೆಲ್ಲಾ ಹೇಳಿದರೂ ಅವನಿಗೆ ತಲೆಬುಡ ಅರ್ಥವಾಗಲಿಲ್ಲ. ಒಂದು ದಿನ ಮನೆಗೆ ಬಂದು, ‘ಇಲ್ಲ ನನ್ನ ಹೆಸರನ್ನು ಬದಲಾಯಿಸಿ, ಇಲ್ಲವಾದರೆ ಇನ್ನು ಮುಂದೆ ನಾನು ಶಾಲೆಗೆ ಹೋಗೂದಿಲ್ಲ’ ಎಂದು ಘೋಷಿಸಿದರು. ಆಗ ಸಲೀಂ ಅಂತ ಇದ್ದ ಹೆಸರು ಯೋಗೇಂದ್ರ ಯಾದವ್ ಎಂದಾಯಿತು.

ಈ ಘಟನೆಯ ಬಗ್ಗೆ ಯಾಕೆ ಹೇಳಬೇಕಾಯಿತು?

2014 ರಲ್ಲಿ ಯೋಗೇಂದ್ರ ಯಾದವ ಅವರು, ಹರಿಯಾಣದ ಗುರುಗ್ರಾಮದಲ್ಲಿ ಚುನಾವಣೆಗೆ ನಿಂತಾಗ ಬಿಜೆಪಿಯವರು ಒಂದು ಪತ್ರಿಕಾಗೋಷ್ಠಿ ನಡೆಸಿದರು. ಅಲ್ಲಿ ಯೋಗೇಂದ್ರ ಯಾದವ ಅವರು ತಮ್ಮ ನಿಜವಾದ ಹೆಸರು ಸಲೀಂ ಎಂದು ಹೇಳಿಕೊಂಡು, ಅದರ ಆಧಾರದ ಮೇಲೆ ಮತಯಾಚಿಸುತ್ತಿದ್ದಾರೆ ಎಂದು ಆರೋಪಿಸಿದರು. ಆಗ ಯೋಗೇಂದ್ರ ಯಾದವ ಅವರು, ತಾವು ಹಾಗೆ ಮಾಡಿದ ಒಂದೇ ಒಂದು ಸಾಕ್ಷ್ಯವನ್ನು ಒದಗಿಸಿ ತಾನು ರಾಜಕೀಯದಿಂದ ನಿವೃತ್ತನಾಗುವೆ ಎಂದು ಘೋಷಿಸಿದರು ಮತ್ತು ಆ ಮಾತನ್ನು ಪುನರುಚ್ಛಿಸುತ್ತಲೇ ಇದ್ದಾರೆ. ಮೊನ್ನೆ ಇಂಡಿಯಾ ಟುಡೇಯ ಸಂವಾದವೊಂದರಲ್ಲಿ ಜಾತ್ಯತೀತತೆಯ ಬಗ್ಗೆ ಮಾತನಾಡಿದಾಗ ಬಿಜೆಪಿಯ ಅಮಿತ್ ಮಾಳವಿಯ ಅವರು ಯೋಗೇಂದ್ರ ಯಾದವ ಅವರಿಗೆ ಇದರ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ, ಚುನಾವಣೆಯ ಸಮಯದಲ್ಲಿ ತಮ್ಮ ಮುಸ್ಲಿಂ ಹೆಸರಿನ ಆಧಾರದ ಮೇಲೆ ರಾಜಕೀಯ ಮಾಡಿದ್ದಾರೆ ಎಂದು ಹೇಳಿದಾಗ, ಯೋಗೇಂದ್ರ ಯಾದವ ಅವರಿಗೆ ಈ ಎಲ್ಲ ಕಥೆಯನ್ನು ಮತ್ತೊಮ್ಮೆ ಹೇಳಬೇಕಾಯಿತು.

ಅಮಿತ್ ಮಾಳವೀಯ ನಂತಹ ವ್ಯಕ್ತಿಗೆ ಇಂತಹ ಸೂಕ್ಷ್ಮಗಳನ್ನು ಅರ್ಥಮಾಡಿಕೊಳ್ಳುವ ಸಾಮಥ್ರ್ಯ ಇಲ್ಲ ಎಂದು ಹೇಳಿ, ತಾವು ತಮ್ಮ ಮುಸ್ಲಿಂ ಹೆಸರಲ್ಲಿ ಮತಯಾಚನೆ ಮಾಡಿದ ಆರೋಪ ನಿಜವಾಗಿದ್ದಲ್ಲಿ, ಸಾಕ್ಷ್ಯ ಒದಗಿಸಿ ಇಲ್ಲವಾದರೆ ಸುಮ್ಮನಿರಿ (‘ಶಟ್ ಅಪ್’) ಎಂದು ಗುಡುಗಿದರು. ಬಿಜೆಪಿಯವರು ಸಾಕ್ಷ್ಯವನ್ನು ಒದಗಿಸುವ ಯಾವುದೇ ಪ್ರಯತ್ನ ಮಾಡಿಲ್ಲ. ಇನ್ನು ಮುಂದೆಯೂ ಇಂತಹ ಆರೋಪವನ್ನು ಮಾಡುವದಿಲ್ಲ ಎಂದು ಹೇಳಲಾಗುವುದಿಲ್ಲ. ಆದರೆ ಅವರು ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಅವರ ಮತ್ತು ತಂದೆಯ ಮೇಲೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ. ನೀವೂ ಆ ವಿಡಿಯೋ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...