Homeಮುಖಪುಟಇಬ್ಬರು ಉಪ ಮುಖ್ಯಮಂತ್ರಿಗಳು: 2ನೇ ಬಾರಿಗೆ ಯುಪಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಯೋಗಿ...

ಇಬ್ಬರು ಉಪ ಮುಖ್ಯಮಂತ್ರಿಗಳು: 2ನೇ ಬಾರಿಗೆ ಯುಪಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಯೋಗಿ ಆದಿತ್ಯನಾಥ್

37 ವರ್ಷಗಳ ನಂತರ ಸತತ ಎರಡನೇ ಬಾರಿಗೆ ಯುಪಿ ಸಿಎಂ ಆಗಿ ಯೋಗಿ ಆದಿತ್ಯನಾಥ್ ದಾಖಲೆ ಬರೆದಿದ್ದಾರೆ.

- Advertisement -
- Advertisement -

ಸತತ ಎರಡನೆ ಬಾರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾಗಿ ಯೋದಿ ಆದಿತ್ಯನಾಥ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇಬ್ಬರು ಉಪಮುಖ್ಯಮಂತ್ರಿಗಳು ಮತ್ತು 52 ಸಚಿವರು ಸಹ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಚುನಾವಣೆಯಲ್ಲಿ ಪರಾಭವಗೊಂಡರೂ ಕೇಶವ್ ಪ್ರಸಾದ್ ಮೌರ್ಯರವರಿಗೆ ಉಪಮುಖ್ಯಮಂತ್ರಿ ಸ್ಥಾನ ದಕ್ಕಿದೆ. 2017ರಲ್ಲಿ ಬಿಎಸ್‌ಪಿ ತೊರೆದು ಬಿಜೆಪಿ ಸೇರಿದ ಮತ್ತು ಈ ಮುಂದಿನ ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಕಾನೂನು ಸಚಿವರಾಗಿದ್ದ ಬ್ರಾಹ್ಮಣ ಸಮುದಾಯದ ಬ್ರಜೇಶ್ ಪಾಠಕ್‌ ಮತ್ತೊಮ್ಮ ಉಪಮುಖ್ಯಮಂತ್ರಿಯಾಗಿದ್ದಾರೆ.

ಕಳೆದ 37 ವರ್ಷಗಳಿಂದ ಯಾವುದೇ ಮುಖ್ಯಮಂತ್ರಿ ಸತತ ಎರಡನೇ ಬಾರಿಗೆ ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿಯಾಗಲು ಸಾಧ್ಯವಾಗಿರಲಿಲ್ಲ. ಆ ದಾಖಲೆ ಮುರಿದು ಯೋಗಿ ಆದಿತ್ಯನಾಥ್ ಎರಡನೇ ಭಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಪಕ್ಷವು 255 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅಭೂತಪೂರ್ವ ಬಹುಮತ ಸಾಧಿಸಿದೆ.

ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹಲವಾರು ಕೇಂದ್ರ ಸಚಿವರು, ಬಿಜೆಪಿ ಆಡಳಿತದ ಹಲವಾರು ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು. ಆದಿತ್ಯನಾಥ್ ಅವರಿಗೆ ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರು ಪ್ರಮಾಣ ವಚನ ಬೋಧಿಸಿದರು.


ಇದನ್ನೂ ಓದಿ: ಪದಚ್ಯುತಿಯ ಹೊಸ್ತಿಲಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...