ಉತ್ತರ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ಮೊಘಲ್ ಮ್ಯೂಸಿಯಂಗೆ ಮರಾಠರ ಹೆಗ್ಗುರುತಾದ ಛತ್ರಪತಿ ಶಿವಾಜಿ ಮಹಾರಾಜರ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ಹೇಳಿದ್ದಾರೆ.
ನಗರದ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸುವ ಸಭೆಯಲ್ಲಿ, ’ ಮೊಘಲರು ನಮ್ಮ ನಾಯಕರಾಗಲು ಹೇಗೆ ಸಾಧ್ಯ” ಎಂದು ಪ್ರಶ್ನಿಸಿದರು. ಗುಲಾಮಿ ಮನಸ್ಥಿತಿಯನ್ನು ಸೃಷ್ಟಿಸುವ ಯಾವುದನ್ನಾದರೂ ಬಿಜೆಪಿ ಸರ್ಕಾರವು ತೆಗೆದುಹಾಕುತ್ತದೆ ಎಂದು ಆದಿತ್ಯನಾಥ್ ಘೋಷಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.
ತಮ್ಮ ಮೂರು ವರ್ಷಗಳ ಆಳ್ವಿಕೆಯಲ್ಲಿ ಅಲಹಾಬಾದ್ (ಈಗ ಪ್ರಯಾಗ್ರಾಜ್) ಸೇರಿದಂತೆ ಹಲವಾರು ಸ್ಥಳಗಳಿಗೆ ಯೋಗಿ ಆದಿತ್ಯನಾಥ್ ಮರುನಾಮಕರಣ ಮಾಡಿದ್ದಾರೆ.
ಇದನ್ನೂ ಓದಿ: ಉತ್ತರ ಪ್ರದೇಶದ ಅತ್ಯಾಚಾರ, ಕೊಲೆ, ಕಿರುಕುಳ ಪ್ರಕರಣಗಳಿಗೆ ಇನ್ನೊಂದು ಸೇರ್ಪಡೆ; ವೈದ್ಯಕೀಯ ವಿದ್ಯಾರ್ಥಿನಿ ಶವ ಪತ್ತೆ
ಯೋಗಿ ಆದಿತ್ಯನಾಥ್, “ಆಗ್ರಾದಲ್ಲಿ ನಿರ್ಮಾಣ ಹಂತದಲ್ಲಿರುವ ವಸ್ತುಸಂಗ್ರಹಾಲಯಕ್ಕೆ ಛತ್ರಪತಿ ಶಿವಾಜಿ ಮಹಾರಾಜ್ ಅವರ ಹೆಸರಿಡಲಾಗುವುದು. ನಿಮ್ಮ ಹೊಸ ಉತ್ತರ ಪ್ರದೇಶದಲ್ಲಿ ಗುಲಾಮಗಿರಿ ಮನಸ್ಥಿತಿಯ ಚಿಹ್ನೆಗಳಿಗೆ ಸ್ಥಳವಿಲ್ಲ. ಶಿವಾಜಿ ಮಹಾರಾಜ್ ನಮ್ಮ ನಾಯಕ. ಜೈ ಹಿಂದ್, ಜೈ ಭಾರತ್!” ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
आगरा में निर्माणाधीन म्यूजियम को छत्रपति शिवाजी महाराज के नाम से जाना जाएगा।
आपके नए उत्तर प्रदेश में गुलामी की मानसिकता के प्रतीक चिन्हों का कोई स्थान नहीं।
हम सबके नायक शिवाजी महाराज हैं।
जय हिन्द, जय भारत।
— Yogi Adityanath (@myogiadityanath) September 14, 2020
ಮೊಘಲ್ ಮ್ಯೂಸಿಯಂ ಯೋಜನೆಗೆ ಅಖಿಲೇಶ್ ಯಾದವ್ ಅವರ ಹಿಂದಿನ ಸಮಾಜವಾದಿ ಪಕ್ಷದ ಸರ್ಕಾರವು 2015 ರಲ್ಲಿ ಅನುಮೋದನೆ ನೀಡಿತ್ತು. ದೆಹಲಿಯಿಂದ 210 ಕಿ.ಮೀ ದೂರದಲ್ಲಿ ಮೊಘಲ್ ಚಕ್ರವರ್ತಿ ಶಹಜಹಾನ್ ನಿರ್ಮಿಸಿದ ತಾಜ್ ಮಹಲ್ ಬಳಿ, ಆರು ಎಕರೆ ಜಾಗದಲ್ಲಿ ಈ ಮ್ಯೂಸಿಯಂ ನಿರ್ಮಾಣವಾಗಲಿದೆ. ಮೊಘಲರ ಸಂಸ್ಕೃತಿ, ಕಲಾಕೃತಿಗಳು, ವರ್ಣಚಿತ್ರಗಳು, ಪಾಕಪದ್ಧತಿ, ವೇಷಭೂಷಣಗಳು, ಮೊಘಲ್ ಯುಗದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡು ಹಾಗೂ ಪ್ರದರ್ಶನ ಕಲೆಗಳ ಮೇಲೆ ಮ್ಯೂಸಿಯಂ ಕೇಂದ್ರೀಕೃತವಾಗಲಿದೆ.
ಇದನ್ನೂ ಓದಿ: ಉತ್ತರ ಪ್ರದೇಶದ ಕೊರೊನಾ ರೋಗಿಯ ವೀಡಿಯೋ: ಆತನ ಸಾವಿನ ನಂತರ ವೈರಲ್!
ಮೊಘಲ್ ರಾಜವಂಶವು 1526-1540 ಮತ್ತು 1555-1857 ರಿಂದ ಭಾರತವನ್ನು ಆಳಿದೆ. ತಾಜ್ ಮಹಲ್ ಮತ್ತು ಕೆಂಪು ಕೋಟೆ ಸೇರಿದಂತೆ ಆಗ್ರಾ ಮತ್ತು ದೆಹಲಿಯಲ್ಲಿ ಹಲವಾರು ಸ್ಮಾರಕಗಳನ್ನು ನಿರ್ಮಿಸಿದ ಕೀರ್ತಿಗೆ ಇದು ಪಾತ್ರವಾಗಿದೆ.
“ಆಡಳಿತ ಮತ್ತು ಅಭಿವೃದ್ಧಿಯತ್ತ ಗಮನ ಹರಿಸದೆ ಇತಿಹಾಸದೊಂದಿಗೆ ಆಟವಾಡುತ್ತಿದೆ” ಎಂದು ಪ್ರತಿಪಕ್ಷ ಕಾಂಗ್ರೆಸ್ ಆಗಾಗ್ಗೆ ಯೋಗಿ ಆದಿತ್ಯನಾಥ್ ಸರ್ಕಾರದ ಮೇಲೆ ದಾಳಿ ನಡೆಸುತ್ತಿದೆ.
ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!


