Homeಮುಖಪುಟಯೋಗಿ ಆದಿತ್ಯನಾಥ್ ಸರ್ಕಾರ ಕ್ರಿಮಿನಲ್‌ಗಳೊಂದಿಗೆ ಜೈಲ್‌-ಜೈಲ್ ಆಟವಾಡುತ್ತಿದೆ: ನರೇಂದ್ರ ಮೋದಿ

ಯೋಗಿ ಆದಿತ್ಯನಾಥ್ ಸರ್ಕಾರ ಕ್ರಿಮಿನಲ್‌ಗಳೊಂದಿಗೆ ಜೈಲ್‌-ಜೈಲ್ ಆಟವಾಡುತ್ತಿದೆ: ನರೇಂದ್ರ ಮೋದಿ

- Advertisement -
- Advertisement -

“ಉತ್ತರ ಪ್ರದೇಶದಲ್ಲಿ ಈ ಹಿಂದೆ ಅಪರಾಧಿಗಳು ಮತ್ತು ಮಾಫಿಯಾದವರು ಆಟವಾಡುತ್ತಿದ್ದರು. ಆದರೆ ಈಗ ಯೋಗಿ ಆದಿತ್ಯನಾಥ್ ಸರ್ಕಾರ ಅವರೊಂದಿಗೆ ’ಜೈಲ್‌-ಜೈಲ್‌’ ಆಟವಾಡುತ್ತಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ಹಿಂದಿನ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೀರತ್‌ನ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಿದ್ದರು.

‘ಹಿಂದಿನ ಸರ್ಕಾರದ ಅವಧಿಯಲ್ಲಿ ಕ್ರಿಮಿನಲ್‌ಗಳು, ಮಾಫಿಯಾ ಆಟವಾಡುತ್ತಿತ್ತು. ಈ ಹಿಂದೆ ಅಕ್ರಮವಾಗಿ ಭೂಮಿಯನ್ನು ಕಸಿದುಕೊಳ್ಳಲಾಗುತ್ತಿತ್ತು. ಹೆಣ್ಣುಮಕ್ಕಳ ಬಗ್ಗೆ ಕೆಟ್ಟ ಟೀಕೆಗಳನ್ನು ಮಾಡುವ ಪೋಲಿಗಳು ಬಹಿರಂಗವಾಗಿ ತಿರುಗಾಡುತ್ತಿದ್ದರು. ಹಿಂದಿನ ಸರ್ಕಾರವು ಕ್ರಿಮಿನಲ್‌ಗಳು ಮತ್ತು ಮಾಫಿಯಾಗಳ ಆಟಗಳಲ್ಲಿ ಹೇಗೆ ತೊಡಗಿಸಿಕೊಂಡಿದೆ ಎಂಬುದನ್ನು ಮೀರತ್‌ನ ಜನ ಎಂದಿಗೂ ಮರೆಯಲು ಸಾಧ್ಯವಿಲ್ಲ’ ಎಂದಿದ್ದಾರೆ.

“ಆದರೆ, ಈಗ ಯೋಗಿ ಆದಿತ್ಯನಾಥ್ ಸರ್ಕಾರವು ಅಂತಹ ಅಪರಾಧಿಗಳೊಂದಿಗೆ ‘ಜೈಲ್-ಜೈಲ್’ ಆಟವಾಡುತ್ತಿದೆ, ಐದು ವರ್ಷಗಳ ಹಿಂದೆ, ಮೀರತ್‌ನ ಹೆಣ್ಣುಮಕ್ಕಳು ಸಂಜೆಯ ನಂತರ ತಮ್ಮ ಮನೆಯಿಂದ ಹೊರಬರಲು ಭಯಪಡುತ್ತಿದ್ದರು, ಇಂದು ಮೀರತ್‌ನ ಹೆಣ್ಣುಮಕ್ಕಳು ಇಡೀ ದೇಶವೇ ಹೆಮ್ಮೆ ಪಡುವಂತೆ ಪ್ರಶಸ್ತಿಗಳನ್ನು ತರುತ್ತಿದ್ದಾರೆ” ಎಂದು ಮೋದಿ ಹೇಳಿದ್ದಾರೆ.


ಇದನ್ನೂ ಓದಿ: 12 ಕೋಟಿ ಮೌಲ್ಯದ ಕಾರು ಖರೀದಿ: ಮೋದಿ ತಮ್ಮನ್ನು ತಾವು ಫಕೀರ ಎಂದು ಕರೆದುಕೊಳ್ಳಬಾರದು – ಸಂಜಯ್ ರಾವುತ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ...

0
ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ...