Homeಮುಖಪುಟ'ನಾನಲ್ಲ, ನೀವೇ ಅವರ ಟಾರ್ಗೆಟ್': ದೆಹಲಿ ಸಿಎಂ ಕೇಜ್ರಿವಾಲ್‌ಗೆ ಸಿಸೋಡಿಯಾ ಪತ್ರ

‘ನಾನಲ್ಲ, ನೀವೇ ಅವರ ಟಾರ್ಗೆಟ್’: ದೆಹಲಿ ಸಿಎಂ ಕೇಜ್ರಿವಾಲ್‌ಗೆ ಸಿಸೋಡಿಯಾ ಪತ್ರ

- Advertisement -
- Advertisement -

”8 ವರ್ಷಗಳ ಕಾಲ ಪ್ರಾಮಾಣಿಕವಾಗಿ ಕೆಲಸ ಮಾಡಿದ ನನ್ನ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಬಂದಿರುವುದು ದುರದೃಷ್ಟಕರ” ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಮನೀಶ್ ಸಿಸೋಡಿಯಾ ನೀಡಿರುವ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.

ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಭಾನುವಾರ ಬಂಧಿಸಿದೆ. ಸೋಮವಾರ ದೆಹಲಿ ನ್ಯಾಯಾಲಯ ಅವರನ್ನು ಮಾರ್ಚ್ 4ರವರೆಗೆ ಸಿಬಿಐ ಕಸ್ಟಡಿಗೆ ಒಪ್ಪಿಸಿದೆ. ಅದರ ಬೆನ್ನಲ್ಲೇ ಮಂಗಳವಾರ (ಫೆ28)ರಂದು ಸಿಸೋಡಿಯಾ ಅವರು ದೆಹಲಿ ಸರ್ಕಾರದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಸಿಸೋಡಿಯಾ ಮತ್ತು ಸಂಪುಟದಲ್ಲಿರುವ ಅವರ ಸಹೋದ್ಯೋಗಿ ಸತ್ಯೇಂದ್ರ ಜೈನ್ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಎಎಪಿಯ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ರಾಜೀನಾಮೆ ಪತ್ರಗಳನ್ನು ಅಂಗೀಕರಿಸಿದ್ದಾರೆ.

ಇದನ್ನೂ ಓದಿ: ಸಿಸೋಡಿಯಾ ಬಂಧನ: ಕೇಂದ್ರದ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಎಎಪಿ ಕರೆ

ಸಿಸೋಡಿಯಾ ತಮ್ಮ ರಾಜೀನಾಮೆ ಪತ್ರದಲ್ಲಿ, ”8 ವರ್ಷಗಳ ಕಾಲ ಪ್ರಾಮಾಣಿಕವಾಗಿ ಕೆಲಸ ಮಾಡಿದ ನನ್ನ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಬಂದಿರುವುದು ದುರದೃಷ್ಟಕರ. ನನ್ನ ವಿರುದ್ಧದ ಆರೋಪಗಳು ಸುಳ್ಳು ಮತ್ತು ಅರವಿಂದ್ ಕೇಜ್ರಿವಾಲ್ ಅವರ ಸತ್ಯದ ರಾಜಕಾರಣಕ್ಕೆ ಹೆದರುವ ಹೇಡಿಗಳು ಮತ್ತು ದುರ್ಬಲರು ನಮ್ಮ ವಿರುದ್ಧ ಪಿತೂರಿ ನಡೆಸಿದ್ದಾರೆ” ಎಂದು ಹೇಳಿದ್ದಾರೆ.

”ಅವರ ಗುರಿ ನಾನಲ್ಲ, ನೀವು (ಕೇಜ್ರಿವಾಲ್) ಏಕೆಂದರೆ, ಇಂದು ದೆಹಲಿಯ ಜನರು ಮತ್ತು ದೇಶದ ಇತರ ಜನರು ನಿಮ್ಮನ್ನು ದೇಶದ ದೂರದೃಷ್ಟಿಯುಳ್ಳ ನಾಯಕ ಎಂದು ನೋಡುತ್ತಿದ್ದಾರೆ” ಎಂದು ಸಿಸೋಡಿಯಾ ಹೇಳಿದ್ದಾರೆ

”ನನ್ನ ವಿರುದ್ಧ ಇನ್ನಷ್ಟು ಪ್ರಕರಣಗಳನ್ನು ದಾಖಲಿಸಲು ಸಿದ್ಧತೆ ನಡೆಸಲಾಗುತ್ತಿದೆ. ನಾನು ನಿಮ್ಮಿಂದ (ಕೇಜ್ರಿವಾಲ್) ದೂರವಾಗಿ ಪಕ್ಷ ತೊರೆಯಬೇಕು ಎಂದು ಪ್ರಯತ್ನಿಸಿದರು. ನಾನು ಅವರ ಮುಂದೆ ತಲೆಬಾಗದಿರುವುದಕ್ಕೆ ಇಂದು ಅವರು ನನ್ನನ್ನು ಬಂಧಿಸಿ ಜೈಲಿಗೆ ಹಾಕಿದ್ದಾರೆ” ಎಂದು ಕೇಜ್ರಿವಾಲ್‌ಗೆ ಸಿಸೋಡಿಯಾ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ನವೆಂಬರ್ 2021ರಲ್ಲಿ ಜಾರಿಗೆ ಬಂದ ದೆಹಲಿ ಸರ್ಕಾರದ ಹೊಸ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು ಬಂಧಿಸಲಾಗಿದೆ. ಹೊಸ ಅಬಕಾರಿ ನೀತಿಯಡಿಯಲ್ಲಿ 849 ಮದ್ಯದಂಗಡಿಗಳ ಪರವಾನಗಿಯನ್ನು ಖಾಸಗಿ ಸಂಸ್ಥೆಗಳಿಗೆ ಮುಕ್ತ ಬಿಡ್ಡಿಂಗ್ ಮೂಲಕ ನೀಡಲಾಯಿತು. ಈ ಹಿಂದೆ ನಾಲ್ಕು ಸರ್ಕಾರಿ ನಿಗಮಗಳು 475 ಮದ್ಯದಂಗಡಿಗಳನ್ನು ನಡೆಸುತ್ತಿದ್ದು, ಉಳಿದ 389 ಖಾಸಗಿ ಅಂಗಡಿಗಳಾಗಿದ್ದವು.

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು, ಈ ಹೊಸ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಸಿಬಿಐ ತನಿಖೆಗೆ ಶಿಫಾರಸು ಮಾಡಿದರು. ಆ ನಂತರ ಜುಲೈ 30ರಂದು ಎಎಪಿ ನೇತೃತ್ವದ ಸರ್ಕಾರವು ನೀತಿಯನ್ನು ಹಿಂತೆಗೆದುಕೊಂಡಿತು.

”ಸಿಸೋಡಿಯಾ ಅವರು ಪ್ರಕರಣದಿಂದ ನುಣುಚಿಕೊಳ್ಳುವ ಪ್ರಯತ್ನ ಮಾಡಿದರು ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳಿದ್ದರೂ ಅವರು ತನಿಖೆಗೆ ಸಹಕರಿಸಲಿಲ್ಲ ಹಾಗಾಗಿ ಅವರನ್ನು ಬಂಧಿಸಲಾಗಿದೆ” ಎಂದು ಸಿಬಿಐ ಹೇಳಿಕೊಂಡಿದೆ.

ಎಎಪಿ ನಾಯಕ ಸಿಸೋಡಿಯಾ ಅವರು ಮಂಗಳವಾರ ತಮ್ಮ ಬಂಧನವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಆದರೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರನ್ನೊಳಗೊಂಡ ಪೀಠವು ಸಿಸೋಡಿಯಾ ಅವರ ಮನವಿಯನ್ನು ಆಲಿಸಲು ನಿರಾಕರಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...