Homeಮುಖಪುಟನೀವೀಗ ಕಾಶ್ಮೀರಿ ಸುಂದರಿಯರನ್ನು ಮದುವೆಯಾಗಬಹದು: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ನೀವೀಗ ಕಾಶ್ಮೀರಿ ಸುಂದರಿಯರನ್ನು ಮದುವೆಯಾಗಬಹದು: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

- Advertisement -
- Advertisement -

370 ನೇ ವಿಧಿ ರದ್ಧತಿ ಮೂಲಕ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕೊನೆಗಾಣಿಸಿರುವುದರಿಂದ ಇನ್ನು ಮುಂದೆ ನಮ್ಮ ಪಕ್ಷದ ಕಾರ್ಯಕರ್ತರು ಕಾಶ್ಮೀರದ ಸುಂದರ ಮಹಿಳೆಯರನ್ನು ಮದುವೆಯಾಗಬಹುದು. ಹೀಗೆಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ನಡೆಯ ಉಪಯೋಗಗಳನ್ನು ತಿಳಿಸಿರುವುದು ಯಾವುದೋ ಸಾಮಾನ್ಯ ಜನರಲ್ಲ, ಬದಲಿಗೆ ಉತ್ತರ ಪ್ರದೇಶದ ಬಿಜೆಪಿ ಶಾಸಕ ವಿಕ್ರಮ್ ಸೈನಿ..

ಕೇಂದ್ರದ ಈ ಕ್ರಮಗಳ ಯೋಗ್ಯತೆಯನ್ನು ವಿವರಿಸುವ ಶಾಸಕರೊಬ್ಬರು ಈ ಭಯಾನಕ ಅಂಶವನ್ನು ಹೊರಹಾಕಿದ್ದಾರೆ. ಮುಂದುವರೆದು ಅವರು ಸರ್ಕಾರದ ಕಾಶ್ಮೀರದ ನಿರ್ಧಾರದಿಂದ, ಬಿಜೆಪಿ ಕಾರ್ಯಕರ್ತರು ಈಗ ಅಲ್ಲಿಗೆ ಹೋಗಬಹುದು, ಜಮೀನುಗಳನ್ನು ಖರೀದಿಸಬಹುದು ಮತ್ತು ಮದುವೆಯಾಗಬಹುದು ಎಂದು ವಿಕ್ರಮ್ ಸೈನಿ ಮಂಗಳವಾರ ಮುಜಫರ್ ನಗರದಲ್ಲಿ ನಡೆದ ಸಮಾರಂಭದಲ್ಲಿ ಹೇಳಿದ್ದಾರೆ.

“ಇದರಿಂದ ನಮ್ಮ ಪಕ್ಷದ ಕಾರ್ಯಕರ್ತರು ತುಂಬಾ ಉತ್ಸುಕರಾಗಿದ್ದಾರೆ ಇನ್ನೂ ಮದುವೆಯಾಗದಿರುವವರು ಅಲ್ಲಿ ಮದುವೆಯಾಗಬಹುದು. ಈಗ ಯಾವುದೇ ಸಮಸ್ಯೆ ಇಲ್ಲ. ಈ ಹಿಂದೆ ಅಲ್ಲಿ ಮಹಿಳೆಯರ ಮೇಲೆ ಸಾಕಷ್ಟು ದೌರ್ಜನ್ಯಗಳು ನಡೆದಿವೆ. ಕಾಶ್ಮೀರದ ಮಹಿಳೆಯೊಬ್ಬರು ಉತ್ತರ ಪ್ರದೇಶದ ಪುರುಷನನ್ನು ಮದುವೆಯಾದರೆ, ಅವರ ಪೌರತ್ವ ರದ್ದುಪಡಿಸಲಾಗಿದೆ. ಭಾರತ ಮತ್ತು ಕಾಶ್ಮೀರಕ್ಕೆ ವಿಭಿನ್ನ ಪೌರತ್ವವಿತ್ತು” ಎಂದು ಶಾಸಕರು ಹೇಳಿದ್ದಾರೆ.

“ಮುಸ್ಲಿಂ ಕಾರ್ಯಕರ್ತರು ಸಹ ಸಂಭ್ರಮ ಆಚರಿಸಬೇಕು. ಅವರು ಸುಂದರ ಕಾಶ್ಮೀರಿ ಹುಡುಗಿಯರನ್ನು ಮದುವೆಯಾಗಬಹುದು. ಹಾಗಾಗಿ  ಹಿಂದೂಗಳಾಗಿರಲಿ ಅಥವಾ ಮುಸ್ಲಿಮರಾಗಿರಲಿ ಸಂಭ್ರಮ ಆಚರಿಸಬೇಕು. ಇದು ಇಡೀ ದೇಶ ಸಂಭ್ರಮಪಡಬೇಕಾದ ವಿಷಯ.” ಎಂದಿದ್ದಾರೆ.

ಈ ಸುದ್ದಿ ಎಲ್ಲೆಡೆ ವೈರಲ್ ಆದ ಕೂಡಲೇ ಪಕ್ಷದಿಂದಲೇ ಆಕ್ಷೇಪಣೆಗಳು ಕೇಳಿಬಂದಿವೆ. ನಂತರ ಅವರ ಈ ಹೇಳಿಕೆಯ ಬಗ್ಗೆ ಕೇಳಿದಾಗ, ಪಶ್ಚಾತ್ತಾಪಪಡದ ಶಾಸಕರು, ನಾನು ಹೇಳಿದ್ದರಲ್ಲಿ ಆಕ್ಷೇಪಾರ್ಹ ಏನೂ ಇಲ್ಲ ಎಂದು ಹೇಳಿದ್ದಾರೆ.

“ಈಗ ಯಾರಾದರೂ ಯಾವುದೇ ಸಮಸ್ಯೆಯಿಲ್ಲದೆ ಕಾಶ್ಮೀರಿ ಹುಡುಗಿಯನ್ನು ಮದುವೆಯಾಗಬಹುದು. ಎಂದು ನಾನು ಹೇಳಿದ್ದು ಅಷ್ಟೆ ಮತ್ತು ಇದು ಸತ್ಯ. ಇದು ಕಾಶ್ಮೀರದ ಜನರಿಗೆ ಸ್ವಾತಂತ್ರ್ಯ. ಅದಕ್ಕಾಗಿಯೇ ನಾವು ಈ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಈಗ ಕಾಶ್ಮೀರಿಗಳು ಸ್ವಾತಂತ್ರ್ಯವನ್ನು ಪಡೆದಿದ್ದಾರೆ. “ಮೋದಿಜಿ ನಮ್ಮ ಕನಸನ್ನು ಈಡೇರಿಸಿದ್ದಾರೆ” ಎಂದು ವಿಕ್ರಮ್ ಸೈನಿ ಪ್ರತಿಕ್ರಿಯಿಸಿದ್ದಾರೆ.

ಉತ್ತರ ಪ್ರದೇಶದ ಖತೌಲಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಸೈನಿ, ಈ ಹಿಂದೆಯೂ, ಭಾರತದಲ್ಲಿ ಅಸುರಕ್ಷಿತರೆಂದು ಭಾವಿಸಿದವರಿಗೆ “ಬಾಂಬ್” ಹಾಕುವ ಬೆದರಿಕೆ ಹಾಕುವ ಮೂಲಕ ಕುಖ್ಯಾತಿಯನ್ನು ಗಳಿಸಿದ್ದರು.

“ಈ ದೇಶದಲ್ಲಿ ಅಸುರಕ್ಷಿತರಾದವರು ದೇಶ ವಿರೋಧಿಗಳು, ಅವರು ಇಲ್ಲಿ ವಾಸಿಸಲು ಅರ್ಹರಲ್ಲ. ನನಗೆ ಒಂದು ಸಚಿವಾಲಯವನ್ನು ನೀಡಿ ಮತ್ತು ನಾನು ಅವರಿಗೆ ಬಾಂಬ್‌ಗಳನ್ನು ಕಟ್ಟಿ ಅವುಗಳನ್ನು ಸ್ಫೋಟಿಸುತ್ತೇನೆ” ಎಂದು ಜನವರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಹೇಳಿ ವಿವಾದಕ್ಕೀಡಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...