Homeಮುಖಪುಟಭಾರತದ ಯಾವುದೇ ಭಾಗವನ್ನು 'ಪಾಕಿಸ್ತಾನ' ಎಂದು ಕರೆಯುವಂತಿಲ್ಲ : ಸುಪ್ರೀಂ ಕೋರ್ಟ್

ಭಾರತದ ಯಾವುದೇ ಭಾಗವನ್ನು ‘ಪಾಕಿಸ್ತಾನ’ ಎಂದು ಕರೆಯುವಂತಿಲ್ಲ : ಸುಪ್ರೀಂ ಕೋರ್ಟ್

ಹೈಕೋರ್ಟ್ ನ್ಯಾಯಮೂರ್ತಿಯ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

“ನೀವು ಭಾರತದ ಯಾವುದೇ ಭಾಗವನ್ನು ‘ಪಾಕಿಸ್ತಾನ’ ಎಂದು ಕರೆಯಲು ಸಾಧ್ಯವಿಲ್ಲ. ಅದು ರಾಷ್ಟ್ರದ ಪ್ರಾದೇಶಿಕ ಸಮಗ್ರತೆಗೆ ಮೂಲಭೂತವಾಗಿ ವಿರುದ್ಧವಾಗಿದೆ” ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಡಿವೈ ಚಂದ್ರಚೂಡ್ ಅವರು ಇಂದು (ಸೆ.25) ಹೇಳಿದ್ದಾರೆ.

ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಸಂಬಂಧಪಟ್ಟಂತೆ ಸಿಜೆಐ ಪ್ರತಿಕ್ರಿಯಿಸಿದ್ದಾರೆ.

“ನ್ಯಾಯಾಧೀಶರು ಯಾವುದೇ ಸಮುದಾಯದ ಕುರಿತು ಪೂರ್ವಾಗ್ರಹಪೀಡಿತ ಮತ್ತು ಸ್ತ್ರೀದ್ವೇಷದ ಹೇಳಿಕೆಗಳನ್ನು ನೀಡಬಾರದು” ಎಂದೂ ಸಿಜೆಐ ತಾಕೀತು ಮಾಡಿದ್ದಾರೆ.

ಹೈಕೋರ್ಟ್‌ನ ನ್ಯಾಯಮೂರ್ತಿ ಶ್ರೀಶಾನಂದ ಅವರು ಇತ್ತೀಚೆಗೆ ಪ್ರಕರಣವೊಂದರ ವಿಚಾರಣೆ ವೇಳೆ ಬೆಂಗಳೂರಿನ ಮುಸ್ಲಿಂ ಬಾಹುಳ್ಯದ ಪ್ರದೇಶ ಗೋರಿಪಾಳ್ಯವನ್ನು ‘ಪಾಕಿಸ್ತಾನ’ ಎಂದಿರುವುದು ಮತ್ತು ಮಹಿಳಾ ವಕೀಲರೊಬ್ಬರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿರುವುದು ಆಕ್ರೋಶಕ್ಕೆ ಕಾರಣವಾಗಿತ್ತು.

ಹೈಕೋರ್ಟ್ ನ್ಯಾಯಮೂರ್ತಿಯ ಹೇಳಿಕೆಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿಆರ್ ಗವಾಯಿ, ಸೂರ್ಯಕಾಂತ್ ಮತ್ತು ಹೃಷಿಕೇಶ್ ರಾಯ್ ಅವರನ್ನೊಳಗೊಂಡ ಐವರು ನ್ಯಾಯಾಧೀಶರ ಪೀಠ ಸ್ವಯಂಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿದೆ.

ತನ್ನ ಹೇಳಿಕೆಗೆ ಹೈಕೋರ್ಟ್ ನ್ಯಾಯಮೂರ್ತಿ ವಿಷಾದ ವ್ಯಕ್ತಪಡಿಸಿರುವ ಹಿನ್ನೆಲೆ, ಪ್ರಕರಣ ಮುಂದುವರೆಸದಿರಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಇಂದು ವಿಚಾರಣೆ ವೇಳೆ ನ್ಯಾಯಾಧೀಶರುಗಳ ವರ್ತನೆಯ ಕುರಿತು ಹಲವಾರು ಮಹತ್ವದ ಅವಲೋಕನಗಳು ನಡೆದಿದೆ. ಎಲೆಕ್ಟ್ರಾನಿಕ್ ಮಾಧ್ಯಮಗಳು ವ್ಯಾಪಕವಾಗಿರುವ ಈ ಯುಗದಲ್ಲಿ ನ್ಯಾಯಾಧೀಶರು ಸಂಯಮ ಪಾಲಿಸಬೇಕು ಎಂದು ನ್ಯಾಯಾಲಯ ಹೇಳಿದೆ ಎಂದು ವರದಿಯಾಗಿದೆ.

ನ್ಯಾಯಮೂರ್ತಿ ಶ್ರೀಶಾನಂದ ಅವರು ನೀಡಿರುವ ಹೇಳಿಕೆಗಳು ವಿಷಯಕ್ಕೆ ಸಂಬಂಧಿಸಿದಲ್ಲ ಎಂದು ಕರ್ನಾಟಕ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಅವರ ವರದಿಯಿಂದ ನ್ಯಾಯಾಲಯವು ಗಮನಿಸಿದೆ. ನ್ಯಾಯಮೂರ್ತಿಯ ಲಿಂಗ ಮತ್ತು ಸಮುದಾಯದ ವಿರುದ್ಧದ ಹೇಳಿಕೆಗೆ ಅಸಮ್ಮತಿ ಸೂಚಿಸಿದೆ.

ಇದನ್ನೂ ಓದಿ : ‘ನನ್ನ ಮಾತುಗಳನ್ನು ಹಿಂತೆಗೆದುಕೊಳ್ಳುತ್ತೇನೆ..’; ಬಿಜೆಪಿ ವಾಗ್ದಂಡನೆ ಬಳಿಕ ಯೂ-ಟರ್ನ್‌ ಹೊಡೆದ ಬಿಜೆಪಿ ಸಂಸದೆ ಕಂಗನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...