Homeಮುಖಪುಟಕಾರ್ಮಿಕರಿಗೆ ಊರಿಗೆ ತೆರಳಲು ಅವಕಾಶ ಕೊಟ್ಟಿದ್ದಕ್ಕೆ ಕೇಜ್ರಿವಾಲ್ ವಿರುದ್ಧ ಕೇಂದ್ರದ ಕಿಡಿ

ಕಾರ್ಮಿಕರಿಗೆ ಊರಿಗೆ ತೆರಳಲು ಅವಕಾಶ ಕೊಟ್ಟಿದ್ದಕ್ಕೆ ಕೇಜ್ರಿವಾಲ್ ವಿರುದ್ಧ ಕೇಂದ್ರದ ಕಿಡಿ

- Advertisement -
- Advertisement -

ಲಾಕ್‌ಡೌನ್ ಸಂಧರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ದೆಹಲಿಯಿಂದ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಹೊರಡಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಅರವಿಂದ್‌ ಕೇಜ್ರಿವಾಲ್ ನೇತೃತ್ವದ ದೆಹಲಿ ಸರಕಾರಕ್ಕೆ ಕೇಂದ್ರ ತೀಕ್ಷ್ಣ ಪತ್ರ ಕಳುಹಿಸಿದೆ.

ಶನಿವಾರದಂದು ದೆಹಲಿಯಿಂದ ಹತ್ತಾರು ಸಾವಿರ ಕಾರ್ಮಿಕರು ವಲಸೆ ಹೋಗುತ್ತಿರುವ ಕುರಿತು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ತೀಕ್ಷ್ಣವಾಗಿ ಪತ್ರ ಬರೆದಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ವಲಸೆ ಹೋಗುತ್ತಿರುವ ಹಿನ್ನಲೆಯಲ್ಲಿ ದೆಹಲಿಯೊಂದಿಗೆ ಗಡಿ ಹಂಚಿಕೊಂಡಿರುವ ರಾಜ್ಯಗಳು ತಮ್ಮ ಗಡಿಗಳನ್ನು ಮುಚ್ಚುವಂತೆ ಕೇಂದ್ರ ಸರಕಾರವನ್ನು ಕೋರಿಕೊಂಡಿವೆ. ಲಾಕ್‌ಡೌನ್ ಸಮಯದಲ್ಲಿ ವಲಸಿಗರು ಆರೋಗ್ಯಕ್ಕೆ ಅಪಾಯ ಒಡ್ಡಿಕೊಳ್ಳುವ ಬಗ್ಗೆ ಪ್ರಧಾನಿ ಹಾಗೂ ಗೃಹಮಂತ್ರಿ  ತೀವ್ರ ಕಳವಳ ವ್ಯಕ್ತಪಡಿಸಿದ ಬೆನ್ನಿಗೆ ಈ ಪತ್ರವನ್ನು ಕಳುಹಿಸಲಾಗಿದೆ.

ಗೃಹ ಸಚಿವ ಅಮಿತ್ ಶಾ ಅವರು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಅವರನ್ನು ಕರೆದು ಯಾವುದೇ ವಲಸೆಗಳಿಗೆ ಅವಕಾಶ ನೀಡಬಾರದು ಎಂಬ ಸ್ಪಷ್ಟ ಸೂಚನೆಗಳನ್ನು ನೀಡಿದ ನಂತರ ಭಾನುವಾರ ಸಂಜೆ ಈ ಪತ್ರವನ್ನು ಕಳುಹಿಸಲಾಗಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಿಎಂ ಮೋದಿ ಮತ್ತು ಗೃಹ ಸಚಿವ ಅಮಿತ್‌ ಷಾ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರೊಂದಿಗೆ ಈ ಕುರಿತು ಈ ಹಿಂದೆ ಮಾತನಾಡಿದ್ದರು ಎಂದು ತಿಳಿದುಬಂದಿದೆ.

ವಲಸಿಗರನ್ನು ಯುಪಿ ಗಡಿಯವರೆಗೆ ತಲುಪಿಸಲು ಡಿಟಿಸಿ ಬಸ್ಸುಗಳನ್ನು ಬಳಸಲು ಅನುಮತಿಸಿದ ದೆಹಲಿ ಸರ್ಕಾರದ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ದೆಹಲಿ ಮುಖ್ಯ ಕಾರ್ಯದರ್ಶಿಗೆ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ಲಾಕ್ ಡೌನ್ ಜಾರಿಗೊಳಿಸುವಲ್ಲಿನ ವಿಫಲತೆಗಳಿಗಾಗಿ ಅಮಾನತುಗೊಳಿಸಬೇಕೆಂದು ಹೇಳಿದ್ದಾರೆ.

ದೆಹಲಿಯಿಂದ ನಿರ್ಗಮಿಸಿದ ಎಲ್ಲಾ ವಲಸಿಗರನ್ನು ಹದಿನಾಲ್ಕು ದಿನಗಳ ಕಾಲ ಸಂಪರ್ಕ ತಡೆಯಲ್ಲಿರಿಸುವಂತೆ ರಾಜ್ಯಸರಕಾರಗಳಿಗೆ ಕೇಂದ್ರ ಆದೇಶ ನೀಡಲು ಒತ್ತಾಯಿಸಲಾಗಿದೆ.

“ಲಾಕ್‌ಡೌನ್ ಅನ್ನು ಕಾರ್ಯಗತಗೊಳಿಸಲು ದೆಹಲಿ ಸರ್ಕಾರವು ಅಗತ್ಯವಿರುವ ಎಲ್ಲಾ ಅಧಿಕಾರಗಳನ್ನು ಹೊಂದಿದೆ” ಎಂದು ಅಧಿಕಾರಿ ಹೇಳಿದ್ದಾರೆ. ಕೇಜ್ರಿವಾಲ್ ಸರ್ಕಾರದ ಅಧಿಕಾರಗಳ ಬಗ್ಗೆ ಸ್ಪಷ್ಟವಾದ ಉಲ್ಲೇಖವು ರಾಷ್ಟ್ರೀಯ ರಾಜಧಾನಿಯಲ್ಲಿ ವ್ಯವಹಾರಗಳನ್ನು ನಡೆಸಲು ಹಾಗೂ ಅಧಿಕಾರ ವಿತರಣೆಯ ಬಗ್ಗೆ ಕೇಂದ್ರ ಮತ್ತು ದೆಹಲಿ ಸರ್ಕಾರದ ನಡುವೆ ದೀರ್ಘಕಾಲದವರೆಗೆ ನಡೆದ ಸಂಘರ್ಷವನ್ನು ಇದು ಸೂಚಿಸುತ್ತದೆ.

ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ದೆಹಲಿ ಸರ್ಕಾರವನ್ನು ವಲಸೆ ಕಾರ್ಮಿಕರನ್ನು ಮಾನವೀಯ ರೀತಿಯಲ್ಲಿ ಮನವೊಲಿಸುವಂತೆ ಕೇಳಿಕೊಂಡಿದ್ದಾರೆ ಅಥವಾ ಸರ್ಕಾರವು ನಡೆಸುವ ಆಶ್ರಯ ಮನೆಗಳಿಗೆ ತೆರಳಲು ಅಥವಾ ಅಲ್ಲಿಗೆ ಹೋಗಲು ಎಲ್ಲಾ ಮೂಲಭೂತ ಸೌಲಭ್ಯಗಳನ್ನು ರಾಜ್ಯವು ಒದಗಿಸುವಂತೆ ಕೇಳಿಕೊಂಡಿದ್ದಾರೆ.

ಲಾಕ್‌ಡೌನ್ ಮತ್ತು ಕೆಲಸದ ದಿನಗಳ ನಷ್ಟದ ಕಾರಣದಿಂದಾಗಿ ಉದ್ಯೋಗದಾತರು ಕಾರ್ಮಿಕರಿಗೆ ತಮ್ಮ ಬಾಕಿಗಳನ್ನು ಯಾವುದೇ ಕಡಿತವಿಲ್ಲದೆ ಪಾವತಿಸಿದ್ದಾರೆನ್ನುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರದ ಸೂಚನೆಗಳನ್ನು ಬೈಜಾಲ್ ಪುನರುಚ್ಚರಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...