Homeಮುಖಪುಟ"ನೀವು ಆರ್‌ಎಸ್‌ಎಸ್ ಸಂಬಂಧಿತ ಕಾರ್ಯಕ್ರಮಗಳಲ್ಲಿ 4 ಬಾರಿ ಭಾಗವಹಿಸಿದ್ದೀರಿ" : ನ್ಯಾಯಮೂರ್ತಿ ಶರ್ಮಾ ಪೀಠದ ಮುಂದೆ...

“ನೀವು ಆರ್‌ಎಸ್‌ಎಸ್ ಸಂಬಂಧಿತ ಕಾರ್ಯಕ್ರಮಗಳಲ್ಲಿ 4 ಬಾರಿ ಭಾಗವಹಿಸಿದ್ದೀರಿ” : ನ್ಯಾಯಮೂರ್ತಿ ಶರ್ಮಾ ಪೀಠದ ಮುಂದೆ ಕೇಜ್ರಿವಾಲ್ ಗಂಭೀರ ವಾದ

- Advertisement -
- Advertisement -

ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ (ಏ.13) ದೆಹಲಿ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಆರ್‌ಎಸ್‌ಎಸ್ ಸಂಯೋಜಿತ ವಕೀಲರ ಸಂಘಟನೆಯಾದ ‘ಅಧಿವಕ್ತ ಪರಿಷತ್’ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾಲ್ಕು ಬಾರಿ ಭಾಗವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವೇಳೆ ಅವರು ತಾವು ಬಿಜೆಪಿ-ಆರ್‌ಎಸ್‌ಎಸ್ ಸಿದ್ಧಾಂತಕ್ಕೆ ವಿರುದ್ಧವಾಗಿದ್ದೇನೆ ಎಂದು ತಿಳಿಸಿದ್ದು, ದೆಹಲಿ ಮದ್ಯ ನೀತಿ ಪ್ರಕರಣವನ್ನು ‘ರಾಜಕೀಯ ಪ್ರೇರಿತ’ ಎಂದು ಕರೆದಿದ್ದಾರೆ.

ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಸಿಬಿಐ ಅರ್ಜಿ ವಿಚಾರಣೆಯಿಂದ ನ್ಯಾಯಮೂರ್ತಿ ಶರ್ಮಾ ಅವರು ಹಿಂದೆ ಸರಿಯಬೇಕು ಎಂದು ಕೇಜ್ರಿವಾಲ್ ಕೋರಿದ್ದಾರೆ. ಅವರ ಮುಂದೆ ನಡೆಯುವ ವಿಚಾರಣೆಯು ನಿಷ್ಪಕ್ಷಪಾತವಾಗಿ ಮತ್ತು ತಟಸ್ಥವಾಗಿರುವುದಿಲ್ಲ ಎಂಬ ಗಂಭೀರವಾದ ಹಾಗೂ ಸಮಂಜಸವಾದ ಆತಂಕ ತನಗಿದೆ ಎಂದು ಹೇಳಿದ್ದಾರೆ.

“ನನ್ನ ಬಳಿ ಅಧಿವಕ್ತ ಪರಿಷತ್ ಎಂಬ ವಕೀಲರ ಸಂಘಟನೆಯ ಮಾಹಿತಿ ಇದೆ. ಇದು ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಸಿದ್ಧಾಂತವನ್ನು ಪಾಲಿಸುವ ಸಂಸ್ಥೆಯಾಗಿದೆ. ಘನ ನ್ಯಾಯಾಲಯವು (ನ್ಯಾಯಮೂರ್ತಿ ಶರ್ಮಾ) ಅದರ ಕಾರ್ಯಕ್ರಮಗಳಲ್ಲಿ ನಾಲ್ಕು ಬಾರಿ ಭಾಗವಹಿಸಿದೆ. ಅವರು ಅನುಸರಿಸುವ ಸಿದ್ಧಾಂತವನ್ನು ನಾವು ಬಲವಾಗಿ ಮತ್ತು ಬಹಿರಂಗವಾಗಿ ವಿರೋಧಿಸುತ್ತೇವೆ. ಈ ಪ್ರಕರಣವು ರಾಜಕೀಯ ಪ್ರೇರಿತವಾಗಿದೆ” ಎಂದು ನ್ಯಾಯಾಲಯದ ಮುಂದೆ ಖುದ್ದು ಹಾಜರಾಗಿ ಕೇಜ್ರಿವಾಲ್ ವಾದ ಮಂಡಿಸಿದ್ದಾರೆ.

ರಾಜಕೀಯ ಪಕ್ಷಪಾತದ ಆರೋಪ ಮಾಡಿದ ಕೇಜ್ರಿವಾಲ್, ನ್ಯಾಯಾಂಗದ ಗ್ರಹಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ನಿರ್ದಿಷ್ಟ ಸಿದ್ಧಾಂತಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ತನ್ನ ಪ್ರಕರಣದ ನಿಷ್ಪಕ್ಷಪಾತದ ಮೇಲೆ ಪರಿಣಾಮ ಬೀರಬಹುದೇ ಎಂದು ಅವರು ಪ್ರಶ್ನಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ಅವಲೋಕನಗಳನ್ನು ಉಲ್ಲೇಖಿಸಿದ ಅವರು, “ಕಾರ್ಯನಿರತ ಪ್ರಜಾಪ್ರಭುತ್ವದಲ್ಲಿ ಗ್ರಹಿಕೆ ಮುಖ್ಯವಾಗುತ್ತದೆ” ಎಂಬ ಹೇಳಿಕೆಯನ್ನು ಸ್ಮರಿಸಿದ್ದಾರೆ. ಅಲ್ಲದೆ, ಈ ಹಿಂದೆ ಸಿಬಿಐ ಅನ್ನು ‘ಪಂಜರದ ಗಿಣಿ’ ಎಂದು ಬಣ್ಣಿಸಿದ್ದನ್ನು ನೆನಪಿಸಿದ ಅವರು, ತನಿಖಾ ಸಂಸ್ಥೆಗಳು ಸ್ವಾತಂತ್ರ್ಯವನ್ನು ಕಾಯ್ದುಕೊಳ್ಳಬೇಕು ಮತ್ತು ಪಕ್ಷಪಾತದ ಗ್ರಹಿಕೆಗಳನ್ನು ಹೋಗಲಾಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಮುಂದುವರಿದು, ಸಿಬಿಐ ‘ರಾಜಕೀಯ ಪಕ್ಷಪಾತಕ್ಕೆ ಒಳಪಟ್ಟಿದೆ’ ಎಂದು ನ್ಯಾಯಾಲಯವೇ ಈ ಹಿಂದೆ ಅಭಿಪ್ರಾಯಪಟ್ಟಿದೆ ಎಂದು ತಿಳಿಸಿದ್ದಾರೆ.

ನನಗೆ ನ್ಯಾಯ ಸಿಗಬಹುದೇ?

ಕೇಜ್ರಿವಾಲ್ ಅವರು ವಾದಿಸುತ್ತಾ, ಒಬ್ಬ ನ್ಯಾಯಾಧೀಶರು ನಿರ್ದಿಷ್ಟ ಸಿದ್ಧಾಂತಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರೆ, ವಿರೋಧ ಸಿದ್ಧಾಂತದ ಆರೋಪಿಗೆ ನ್ಯಾಯ ಸಿಗದಿರುವ ಬಗ್ಗೆ ಸಮಂಜಸವಾದ ಭಯವಿರಬಹುದು ಎಂದು ತಿಳಿಸಿದ್ದಾರೆ. “ನಾನು ವಿರುದ್ಧ ಸಿದ್ಧಾಂತದವನಾಗಿದ್ದರೆ, ನನಗೆ ನ್ಯಾಯ ಸಿಗುತ್ತದೆಯೇ?” ಎಂದು ಅವರು ಪ್ರಶ್ನಿಸಿದ್ದಾರೆ.

ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಪ್ರಕರಣಗಳ ವಿಚಾರಣೆಯಲ್ಲಿ ಸೆಲೆಕ್ಟಿವ್ ತುರ್ತುಸ್ಥಿತಿಯನ್ನು ತೋರಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಕೇಂದ್ರದ ರಾಜಕೀಯ ವಿರೋಧಿಗಳನ್ನು ಒಳಗೊಂಡ ಪ್ರಕರಣಗಳನ್ನು ಮಾತ್ರ ವೇಗವಾಗಿ ಕೈಗೆತ್ತಿಕೊಳ್ಳಲಾಗುತ್ತಿದೆ ಮತ್ತು ವಿಚಾರಣೆಗಳಲ್ಲಿ ಅನಗತ್ಯ ಆತುರ ತೋರಲಾಗುತ್ತಿದೆ ಎಂದು ಅವರು ದೂರಿದ್ದಾರೆ.

ದೆಹಲಿ ಮದ್ಯ ನೀತಿ ಪ್ರಕರಣದ ಕುರಿತು ವಾದಿಸಿದ ಕೇಜ್ರಿವಾಲ್, ಹೈಕೋರ್ಟ್ ಹೆಚ್ಚಾಗಿ ಇಡಿ ಮತ್ತು ಸಿಬಿಐ ವಾದಗಳನ್ನು ಅನುಮೋದಿಸಿದೆ ಎಂದು ಪ್ರತಿಪಾದಿಸಿದ್ದಾರೆ. “ಒಂದು ಪ್ರಕರಣವನ್ನು ಹೊರತುಪಡಿಸಿ, ಇಡಿ ಮತ್ತು ಸಿಬಿಐನ ಪ್ರತಿಯೊಂದು ಕೋರಿಕೆಯೂ ತೀರ್ಪಾಗಿ ಮಾರ್ಪಟ್ಟಿದೆ” ಎಂದು ಅವರು ಹೇಳಿದ್ದಾರೆ.

“ನಾನು ಇಂದು ಇಲ್ಲಿ ಆರೋಪಿಯಾಗಿ ನಿಂತಿಲ್ಲ. ನಾನು ಈಗಾಗಲೇ ಬಿಡುಗಡೆ ಹೊಂದಿದ್ದೇನೆ” ಎಂದು ಕೇಜ್ರಿವಾಲ್ ಒತ್ತಿ ಹೇಳಿದ್ದಾರೆ.

ಮಾರ್ಚ್ 9ರ ಆದೇಶ ಸೇರಿದಂತೆ ನ್ಯಾಯಾಲಯದ ಹಿಂದಿನ ಕಲಾಪಗಳನ್ನು ಉಲ್ಲೇಖಿಸಿದ ಅವರು, ಕೇವಲ ಸಿಬಿಐ ಉಪಸ್ಥಿತಿಯಲ್ಲಿ ನಡೆದ ಸಂಕ್ಷಿಪ್ತ ವಿಚಾರಣೆಯ ನಂತರ ಆ ಆದೇಶವನ್ನು ಹೊರಡಿಸಲಾಗಿದೆ ಎಂದು ಆರೋಪಿಸಿದ್ದಾರೆ. “ಯಾರನ್ನೂ ವಿಚಾರಿಸದೆ, ಯಾರ ಉತ್ತರವನ್ನೂ ಪಡೆಯದೆ ಏಕಪಕ್ಷೀಯವಾಗಿ ಆದೇಶ ನೀಡಲಾಗಿದೆ. ಈ ನ್ಯಾಯಾಲಯವು ಮೇಲ್ನೋಟಕ್ಕೆ ಆ ಆದೇಶವು ದೋಷಪೂರಿತವಾಗಿದೆ ಎಂದು ತಿಳಿಸಿದೆ” ಎಂದಿದ್ದಾರೆ. ವಿಚಾರಣಾ ನ್ಯಾಯಾಲಯವು ಸಾವಿರಾರು ಪುಟಗಳನ್ನು ಪರಿಶೀಲಿಸಿತ್ತು, ಆದರೆ ಅಲ್ಪಾವಧಿಯ ವಿಚಾರಣೆಯ ನಂತರ ಅದರ ಆದೇಶವನ್ನು ರದ್ದುಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಫೆಬ್ರವರಿ 27ರಂದು, ವಿಚಾರಣಾ ನ್ಯಾಯಾಲಯವು ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್, ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಸಿಸೋಡಿಯಾ ಮತ್ತು ಇತರ 21 ಜನರಿಗೆ ಕ್ಲೀನ್ ಚಿಟ್ ನೀಡಿದೆ. ಈ ಸಂದರ್ಭದಲ್ಲಿ ಸಿಬಿಐ ಅನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಲಯವು, ಈ ಪ್ರಕರಣವು ನ್ಯಾಯಾಂಗ ಪರಿಶೀಲನೆಯಲ್ಲಿ ಉಳಿಯಲು ಸಂಪೂರ್ಣವಾಗಿ ಅಸಮರ್ಥವಾಗಿದೆ ಮತ್ತು ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ ಎಂದು ಹೇಳಿದೆ.

ಆರೋಪಿಗಳ ಖುಲಾಸೆ ವಿರುದ್ದ ಸಿಬಿಐ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ. ಸಿಬಿಐ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶರ್ಮಾ ಅವರು ಮಾರ್ಚ್ 9ರಂದು ಎಲ್ಲಾ 23 ಜನರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ದೋಷಾರೋಪಣೆ ಪಟ್ಟಿ ಸಿದ್ಧಪಡಿಸುವ ಹಂತದಲ್ಲಿ ವಿಚಾರಣಾ ನ್ಯಾಯಾಲಯವು ನೀಡಿದ ಕೆಲವು ಅವಲೋಕನಗಳು ಮತ್ತು ಸಂಶೋಧನೆಗಳು ಮೇಲ್ನೋಟಕ್ಕೆ ದೋಷಪೂರಿತವಾಗಿ ಕಂಡುಬರುತ್ತಿವೆ ಮತ್ತು ಅವುಗಳ ಮರುಪರಿಶೀಲನೆಯ ಅಗತ್ಯವಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.

ಕೋರ್ಟ್ ಆದೇಶ ನೋಡಿ ನನ್ನ ಮನಸ್ಸಿಗೆ ನೋವಾಯಿತು-ಕೇಜ್ರಿವಾಲ್

ವಿಚಾರಣೆಯ ಸಮಯದಲ್ಲಿ ಕೇಜ್ರಿವಾಲ್ ಅವರು ಮಾರ್ಚ್ 9ರ ಆದೇಶವು ಪಕ್ಷಪಾತದ ಬಗ್ಗೆ ಗಂಭೀರ ಆತಂಕಗಳನ್ನು ಉಂಟುಮಾಡಿದೆ ಎಂದು ಹೇಳಿದ್ದಾರೆ. “ಕೋರ್ಟ್ ಆದೇಶ ನೋಡಿ ನನ್ನ ಮನಸ್ಸಿಗೆ ನೋವಾಯಿತು, ಪಕ್ಷಪಾತದ ಬಗ್ಗೆ ನನಗೆ ಗಂಭೀರವಾದ ಆತಂಕವಿತ್ತು. ಆದ್ದರಿಂದ, ನಾನು ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದೆ” ಎಂದು ಅವರು ತಿಳಿಸಿದ್ದಾರೆ. ತಮ್ಮ ಮನವಿಯನ್ನು ತಿರಸ್ಕರಿಸಿದ ನಂತರ ಅವರು ನ್ಯಾಯಾಲಯವನ್ನು ಸಂಪರ್ಕಿಸಿರುವುದಾಗಿ ಹೇಳಿದ್ದಾರೆ.

ಕಾನೂನು ತತ್ವಗಳನ್ನು ಉಲ್ಲೇಖಿಸಿದ ಅವರು, ಪಕ್ಷಪಾತದ ಕೇವಲ ಒಂದು ಆತಂಕವಿದ್ದರೂ ಸಹ ನ್ಯಾಯಾಧೀಶರು ವಿಚಾರಣೆಯಿಂದ ಹಿಂದೆ ಸರಿಯಲು ಅದು ಸಾಕಾಗುತ್ತದೆ ಎಂದು ಹೇಳಿದ್ದಾರೆ. “ಒಂದು ಪಕ್ಷದ ಮನಸ್ಸಿನಲ್ಲಿ ಪಕ್ಷಪಾತದ ಆತಂಕವಿದ್ದರೆ, ಆಗ ವಿಚಾರಣೆಯಿಂದ ಹಿಂದೆ ಸರಿಯಲು (recusal) ಅವಕಾಶವಿರುತ್ತದೆ. ನನ್ನ ಮನಸ್ಸಿನಲ್ಲಿರುವ ಆತಂಕವು ನನಗೂ ಮತ್ತು ನ್ಯಾಯಾಲಯಕ್ಕೂ ನಡುವಿನ ವಿಷಯವಾಗಿದೆ. ಇದರಲ್ಲಿ ಸಿಬಿಐ ಅನ್ನು ಒಂದು ಪಕ್ಷವನ್ನಾಗಿ ಮಾಡಬಾರದು” ಎಂದಿದ್ದಾರೆ.

ಹಿಂದಿನ ಸಂಬಂಧಿತ ಪ್ರಕರಣಗಳನ್ನು ಉಲ್ಲೇಖಿಸಿದ ಅವರು, ಜಾಮೀನು ಅರ್ಜಿಗಳು ಸೇರಿದಂತೆ ಸಹ-ಆರೋಪಿಗಳಿಗೆ ಸಂಬಂಧಿಸಿದ ಹಲವಾರು ವಿಷಯಗಳ ವಿಚಾರಣೆ ಈಗಾಗಲೇ ನಡೆದಿದೆ ಎಂದು ತಿಳಿಸಿದ್ದಾರೆ. “ಆ ವಿಷಯಗಳಲ್ಲಿ ಈ ನ್ಯಾಯಾಲಯವು ಮಾಡಿದ ಅವಲೋಕನಗಳು ತೀರ್ಪುಗಳಿಗೆ ಸಮಾನವಾಗಿವೆ” ಎಂದು ಹೇಳಿದ್ದಾರೆ.

ಕೆಲವು ಸಂದರ್ಭಗಳಲ್ಲಿ ಕೇವಲ ಕೆಲವೇ ವಿಚಾರಣೆಗಳಲ್ಲಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ಆರೋಪಿಸಿದ್ದಾರೆ. “ಅನೇಕ ಅಂಶಗಳ ಬಗ್ಗೆ ಈ ನ್ಯಾಯಾಲಯವು ಕೇವಲ ಎರಡು ವಿಚಾರಣೆಗಳಲ್ಲಿ ಅಂತಿಮ ತೀರ್ಪು ನೀಡಿದಂತೆ ತೋರುತ್ತಿದೆ” ಎಂದಿದ್ದಾರೆ.

ಸಿಸೋಡಿಯಾ ಅವರ ಪ್ರಕರಣದ ಕುರಿತು ವಾದಿಸಿದ ಅವರು, ಭ್ರಷ್ಟಾಚಾರದ ಕುರಿತಾದ ತೀರ್ಮಾನಗಳು ಅಕಾಲಿಕವಾಗಿವೆ ಎಂದು ಹೇಳಿದ್ದಾರೆ. “ನಾವು ಕೇವಲ ಭ್ರಷ್ಟರು ಎಂದು ಘೋಷಿಸಲ್ಪಟ್ಟಿಲ್ಲ, ಬದಲಾಗಿ ಅತ್ಯಂತ ಭ್ರಷ್ಟರು ಎಂದು ಘೋಷಿಸಲ್ಪಟ್ಟಂತೆ ಭಾಸವಾಯಿತು” ಎಂದಿದ್ದಾರೆ. ಸುಪ್ರೀಂ ಕೋರ್ಟ್ ನಂತರ ಕೆಲವು ಅವಲೋಕನಗಳನ್ನು ಪಕ್ಕಕ್ಕಿಟ್ಟಿದೆ ಎಂದು ಅವರು ಸೇರಿಸಿದ್ದಾರೆ. ಇದು ಹಿಂದಿನ ಅವಲೋಕನಗಳಲ್ಲಿನ ಅಸಂಗತತೆಯನ್ನು ತೋರಿಸುತ್ತದೆ ಎಂದು ಪ್ರತಿಪಾದಿಸಿದ್ದಾರೆ.

ಸಿಬಿಐ ಪ್ರಕರಣವು ಮುಖ್ಯವಾಗಿ ಅಪ್ರೂವರ್‌ಗಳ (ತಪ್ಪೊಪ್ಪಿಗೆದಾರರ) ಹೇಳಿಕೆಗಳ ಮೇಲೆ ನಿಂತಿದೆ ಎಂದು ಕೇಜ್ರಿವಾಲ್ ವಾದಿಸಿದ್ದಾರೆ. ಅಂತಹ ಹೇಳಿಕೆಗಳನ್ನು ಪ್ರಶ್ನಿಸುವುದು ವಿಚಾರಣಾ ನ್ಯಾಯಾಲಯದ ಆದೇಶವನ್ನು ದುರ್ಬಲಗೊಳಿಸಿದಂತೆ ಎಂದು ಅವರು ಪ್ರತಿಪಾದಿಸಿದ್ದಾರೆ.

ತಮ್ಮ ವಾದಗಳನ್ನು ಪೂರ್ಣಗೊಳಿಸಿದ ನಂತರ ಕೇಜ್ರಿವಾಲ್ ಅವರು ಅಲ್ಲಿಂದ ತೆರಳಲು ನ್ಯಾಯಾಲಯದ ಅನುಮತಿ ಕೋರಿದ್ದಾರೆ. ಅವರ ವಾದಗಳನ್ನು ಮೆಚ್ಚಿದ ನ್ಯಾಯಾಧೀಶರು, “ನೀವು ತುಂಬಾ ಚೆನ್ನಾಗಿ ವಾದ ಮಂಡಿಸಿದ್ದೀರಿ. ನೀವು ವಕೀಲರೂ ಆಗಬಹುದು” ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ನಗುಮೊಗದಿಂದ ಪ್ರತಿಕ್ರಿಯಿಸಿದ ಕೇಜ್ರಿವಾಲ್, “ಧನ್ಯವಾದಗಳು ಮೇಡಂ. ನಾನು ಈಗ ಮಾಡುತ್ತಿರುವ ಕೆಲಸದ ಬಗ್ಗೆ ನನಗೆ ಸಂತೋಷವಿದೆ” ಎಂದಿದ್ದಾರೆ.

ಏಪ್ರಿಲ್ 6 ರಂದು ನಡೆದ ವಿಚಾರಣೆಯ ಸಂದರ್ಭದಲ್ಲಿ, ಸಿಬಿಐ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಕೇಜ್ರಿವಾಲ್ ಅವರ ಈ ಅರ್ಜಿಯನ್ನು ಬಲವಾಗಿ ವಿರೋಧಿಸಿದ್ದರು ಮತ್ತು ಇದು ಆಧಾರರಹಿತವಾಗಿದೆ ಎಂದಿದ್ದರು. ಅಲ್ಲದೆ, ಸಿಬಿಐ ಈ ಅರ್ಜಿಯ ವಿರುದ್ಧ ಅಧಿಕೃತ ಪ್ರತಿಕ್ರಿಯೆಯನ್ನು ಸಲ್ಲಿಸಿದೆ.




ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...