Homeಮುಖಪುಟಮಕ್ಕಳನ್ನು ಹೆರುವುದು ನೀವು, ಸರ್ಕಾರ ವೆಚ್ಚ ಭರಿಸಬೇಕಾ?: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ಮಕ್ಕಳನ್ನು ಹೆರುವುದು ನೀವು, ಸರ್ಕಾರ ವೆಚ್ಚ ಭರಿಸಬೇಕಾ?: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರ ಕಳೆದ ನವರಾತ್ರಿಯಿಂದ ಮಹಿಳೆಯರಿಗಾಗಿ ಮಿಷನ್ ಶಕ್ತಿ ಅಭಿಯಾನವನ್ನು ನಡೆಸುತ್ತಿದೆ. ಮಹಿಳಾ ಸಬಲೀಕರಣಕ್ಕೆ ಸಹಾಯಕವಾಗಲಿದೆ ಎಂದು ಹೇಳುತ್ತ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಆದರೆ ಇತ್ತ ಆಡಳಿತರೂಢ ಬಿಜೆಪಿ ಶಾಸಕ ರಮೇಶ್ ದಿವಾಕರ್, ಮಹಿಳೆಯರ ಬಗ್ಗೆ ನಾಲಿಗೆ ಹರಿಯಬಿಟ್ಟಿದ್ದುಮ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಶಾಲಾ ಶುಲ್ಕ ಮನ್ನಾ ಮಾಡಿ ಎಂದು ಮನವಿ ಮಾಡಲು ಹೋಗಿದ್ದ ಮಹಿಳೆಯರ ಬಗ್ಗೆ ಬಿಜೆಪಿ ಶಾಸಕ ರಮೇಶ್ ದಿವಾಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಕೆಲವು ಮಹಿಳೆಯರು ತಮ್ಮ ಮಕ್ಕಳ ಶುಲ್ಕವನ್ನು ಮನ್ನಾ ಮಾಡಲು ಶಾಸಕರ ಬಳಿಗೆ ಹೋಗಿದ್ದರು. ಆಗ “ನೀವು ಮಕ್ಕಳನ್ನು ಹೆರುತ್ತೀರಿ… ನಿಮ್ಮ ಮಕ್ಕಳ ಶುಲ್ಕವನ್ನು ಸರ್ಕಾರ ಭರಿಸಬೇಕೆ” ಎಂದು ಕೀಳುಮಟ್ಟದಲ್ಲಿ ಮಾತನಾಡಿದ್ದಾರೆ.

ಉತ್ತರ ಪ್ರದೇಶದ ಔರೈಯ ಎಂಬಲ್ಲಿ ಮಹಿಳೆಯರು ತಮ್ಮ ಮಕ್ಕಳ ಶಿಕ್ಷಣದ ಶುಲ್ಕ ಮನ್ನಾ ಮಾಡುವಂತೆ ತಮ್ಮ ಮನವಿಯನ್ನು ಬಿಜೆಪಿ ಶಾಸಕ ರಮೇಶ್ ದಿವಾಕರ್ ಅವರ ಮುಂದಿಡುತ್ತಾರೆ. ಈ ಸಂದರ್ಭದಲ್ಲಿ ತಮ್ಮ ಎಲ್ಲೆ ಮೀರಿ ಶಾಸಕರು ಮಹಿಳೆಯರ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: “ಮಗಳು ಬೇರೊಬ್ಬರ ಸ್ವತ್ತು, ಕಳುಹಿಸಿ ಕೊಡಲಾಗುವುದು”: ವಿವಾದಾತ್ಮಕ ಟ್ವೀಟ್‌ಗೆ ಸ್ಪಷ್ಟನೆ ನೀಡಿದ ಸಚಿವ

ಶಾಸಕರು ಮತ್ತು ಮಹಿಳೆಯರ ನಡುವಿನ ಮಾತುಕತೆಯನ್ನು ಕೆಲವರು ವಿಡಿಯೋ ಚಿತ್ರಿಕರಣ ಮಾಡಿಕೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ವೈರಲ್ ಆದ ನಂತರ ಶಾಸಕರ ಹೇಳಿಕೆ ಜನರ ಗಮನಕ್ಕೆ ಬಂದಿದೆ. ಶಾಸಕ ರಮೇಶ್ ದಿವಾಕರ್‌ ವರ್ತನೆಗೆ ಜನರು ಆಕ್ರೋಶ ಹೊರಹಾಕಿದ್ದಾರೆ.

ಇಷ್ಟಕ್ಕೆ ಸುಮ್ಮನಾಗದ ಶಾಸಕ ರಮೇಶ್ ದಿವಾಕರ್‌ ಮಹಿಳೆಯರಿಗೆ ಬಿಟ್ಟಿ ಸಲಹೆಗಳನ್ನು ನೀಡಿದ್ದಾರೆ. ಮಕ್ಕಳನ್ನು ಖಾಸಗಿ ಶಾಲೆಗಳಿಂದ ಬಿಡಿಸಿ ಸರ್ಕಾರಿ ಶಾಲೆಗಳಿಗೆ ಕಳುಹಿಸಲು ತಿಳಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ ದೊರೆಯುತ್ತದೆ ಅಲ್ಲಿಗೆ ಕಳುಹಿಸಿ ಎಂದಿದ್ದಾರೆ.

ಮಹಿಳೆಯರು ಕೂಡ ನಾವು ನಿಮಗೆ ಮತ ನೀಡಿ ಆಯ್ಕೆ ಮಾಡಿದ್ದೇವೆ. ನಿಮ್ಮ ಮಾತುಗಳು ಸರಿಯಾಗಿಲ್ಲ ಎಂದು ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸರ್ಕಾರಿ ಶಾಲೆಗಳನ್ನು ಮೊದಲು ಚೆನ್ನಾಗಿ ಮಾಡಿ, ನಂತರ ನಮಗೆ ಸಲಹೆ ನೀಡಿ ಎಂದು ಆಗ್ರಹಿಸಿದ್ದಾರೆ. ಸದ್ಯಕ್ಕೆ ಈ ಬಗ್ಗೆ ಶಾಸಕರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಅವರ ಈ ವಿಡಿಯೋ ವೈರಲ್ ಆಗುತ್ತಿದೆ.

ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳ ಬಗ್ಗೆ ಕಳೆದ ಡಿಸೆಂಬರ್‌ ತಿಂಗಳಲ್ಲಿ ಆಮ್ ಆದ್ಮಿ ಪಾರ್ಟಿ  #SelfieWithSarkaariSchool ಅಭಿಯಾನ ಆರಂಭಿಸಿ, ಉತ್ತರ ಪ್ರದೇಶದ ಶಾಲೆಗಳ ಚಿತ್ರಣವನ್ನು ಬಯಲಿಗೆಳೆದಿತ್ತು. ಉತ್ತರ ಪ್ರದೇಶದ ಪಾಳುಬಿದ್ದ ಶಾಲೆಗಳು, ದನದ ಕೊಟ್ಟಿಗೆಗಳಾಗಿರುವ ಶಾಲೆಗಳು, ಸ್ವಚ್ಛತೆ ಮಾಯವಾಗಿರುವ, ಸುಣ್ಣ-ಬಣ್ಣ ಕಾಣದೇ ಅದೇಷ್ಟೋ ವರ್ಷಗಳಾಗಿರುವ ಶಾಲೆಗಳ ಚಿತ್ರಗಳನ್ನು ಈ ಅಭಿಯಾನದಲ್ಲಿ ಹಂಚಿಕೊಳ್ಳಲಾಗಿತ್ತು.


ಇದನ್ನೂ ಓದಿ: ಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...