Homeಮುಖಪುಟ'ನೆಲದ ಕಾನೂನಿಗೆ ಬದ್ಧರಾಗಿರಬೇಕು ಅಥವಾ ಪರಿಣಾಮ ಎದುರಿಸಲು ಸಿದ್ಧರಾಗಿರಬೇಕು..'; ಬಿಜೆಪಿಗೆ ಪ್ರಿಯಾಂಕ್‌ ತಿರುಗೇಟು

‘ನೆಲದ ಕಾನೂನಿಗೆ ಬದ್ಧರಾಗಿರಬೇಕು ಅಥವಾ ಪರಿಣಾಮ ಎದುರಿಸಲು ಸಿದ್ಧರಾಗಿರಬೇಕು..’; ಬಿಜೆಪಿಗೆ ಪ್ರಿಯಾಂಕ್‌ ತಿರುಗೇಟು

- Advertisement -
- Advertisement -

ಸರ್ಕಾರಿ ಆವರಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಚಟುವಟಿಕೆಗಳನ್ನು ನಿಷೇಧಿಸುವಂತೆ ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ನಂತರ ರಜ್ಯ ರಾಜಕಾರಣದಲ್ಲಿ ವಾಗ್ವಾದ ಭುಗಿಲೆದ್ದಿದೆ.

ಮುಖ್ಯಮಂತ್ರಿಗಳಿಗೆ ಪ್ರಿಯಾಂಕ್‌ ಬರದಿರುವ =ಪತ್ರದಲ್ಲಿ, ಸರ್ಕಾರಿ ಶಾಲೆಗಳು, ಆಟದ ಮೈದಾನಗಳು, ದೇವಾಲಯಗಳಲ್ಲಿ ಶಾಖೆಗಳು ಮತ್ತು ಕೂಟಗಳನ್ನು ನಡೆಸುವ ಮೂಲಕ ಆರ್‌ಎಸ್‌ಎಸ್ ಮಕ್ಕಳು ಮತ್ತು ಯುವಕರಲ್ಲಿ ವಿಭಜಕ ವಿಚಾರಗಳನ್ನು ಹರಡುತ್ತಿದೆ ಎಂದು ಆರೋಪಿಸಿದ್ದಾರೆ. ಅಂತಹ ಕಾರ್ಯಕ್ರಮಗಳನ್ನು ಸಂವಿಧಾನಬಾಹಿರ ಮತ್ತು ರಾಷ್ಟ್ರೀಯ ಏಕತೆಯ ಮನೋಭಾವಕ್ಕೆ ವಿರುದ್ಧವೆಂದು ಕರೆದು ಅವುಗಳ ಮೇಲೆ ಸಂಪೂರ್ಣ ನಿಷೇಧ ಹೇರುವಂತೆ ಅವರು ಮುಖ್ಯಮಂತ್ರಿಯನ್ನು ಒತ್ತಾಯಿಸಿದರು.

ಇದಾದ ಸ್ವಲ್ಪ ಸಮಯದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ಬಿಜೆಪಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಗೃಹ ಸಚಿವರಾಗಿದ್ದಾಗ 2002 ರಲ್ಲಿ ಬೆಂಗಳೂರಿನ ನಾಗವಾರದಲ್ಲಿ ನಡೆದ ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಹಳೆಯ ಛಾಯಾಚಿತ್ರವನ್ನು ಹಂಚಿಕೊಂಡಿದೆ.

“ಪ್ರಿಯಾಂಕ್‌ ಖರ್ಗೆ ಅವರೇ ಇಲ್ಲಿ ನೋಡಿ, ನಿಮ್ಮ ತಂದೆ ವೈಯಕ್ತಿಕವಾಗಿ ಶಿಬಿರಕ್ಕೆ ಭೇಟಿ ನೀಡಿದರು, ಆರ್‌ಎಸ್‌ಎಸ್‌ನ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಮೆಚ್ಚಿದರು ಮತ್ತು ಪೂರ್ಣ ಸಹಕಾರವನ್ನು ನೀಡಿದರು. ಹೈಕಮಾಂಡ್ ಅನ್ನು ಮೆಚ್ಚಿಸಲು ನೀವು ಇಂದು ಇಂತಹ ಕೃತ್ಯ ಮಾಡುತ್ತಿದ್ದೀರಾ” ಪ್ರಶ್ನಿಸಿದೆ.

ಬಿಜೆಪಿ ಪೋಸ್ಟ್‌ಗೆ ತಿರುಗೇಟು ನೀಡಿರುವ ಪ್ರಿಯಾಂಕ್ ಖರ್ಗೆ, ಬಿಜೆಪಿಯ ಹೇಳಿಕೆಗಳನ್ನು ಸುಳ್ಳು ಪ್ರಚಾರ ಎಂದು ಕರೆದಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಅಧಿಕಾರಿಗಳು ಮತ್ತು ಸಮುದಾಯ ಪ್ರತಿನಿಧಿಗಳೊಂದಿಗೆ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ ನಂತರ ಆರ್‌ಎಸ್‌ಎಸ್‌ ಕಾರ್ಯಕ್ರಮ ಸ್ಥಳಕ್ಕೆ ಭೇಟಿ ನೀಡಿದ್ದರು ಎಂದು ಅವರು ಸ್ಪಷ್ಟಪಡಿಸಿದರು.

“ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರದಂತೆ ನಿಮ್ಮ ಜನರಿಗೆ ಎಚ್ಚರಿಕೆ ನೀಡಲು ಅವರು ಆಗಿನ ಪೊಲೀಸ್ ಆಯುಕ್ತ ಸಾಂಗ್ಲಿಯಾನ ಅವರೊಂದಿಗೆ ಅಲ್ಲಿಗೆ ಹೋಗಿದ್ದರು, ಸಂಘಟಕರು ನೆಲದ ಕಾನೂನಿಗೆ ಬದ್ಧರಾಗಿರಬೇಕು ಅಥವಾ ಪರಿಣಾಮಗಳನ್ನು ಎದುರಿಸಲು ಸಿದ್ಧರಾಗಿರಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು” ಎಂದು ಪ್ರಿಯಾಂಕ್ ಬರೆದಿದ್ದಾರೆ.

ಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಷೇಧಿಸುವಂತೆ ಸಿಎಂಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...