HomeUncategorizedಛತ್ತಿಸ್‌ಘಡದ ರೈತರಿಗೆ 2,500 ರೂ. ಬಿಹಾರದವರಿಗೆ 700 ರೂ. ಏಕೆ ಈ ಅನ್ಯಾಯ?: ರಾಹುಲ್ ಗಾಂಧಿ

ಛತ್ತಿಸ್‌ಘಡದ ರೈತರಿಗೆ 2,500 ರೂ. ಬಿಹಾರದವರಿಗೆ 700 ರೂ. ಏಕೆ ಈ ಅನ್ಯಾಯ?: ರಾಹುಲ್ ಗಾಂಧಿ

ಛತ್ತೀಸ್‌ಘಡದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದೆ. ಅಲ್ಲಿನ ರೈತರು ಅಷ್ಟು ಬೆಲೆ ಪಡೆಯುವಾಗ, ಬಿಹಾರದ ರೈತರಾದ ನೀವು ಇಷ್ಟು ಕಡಿಮೆ ಬೆಲೆ ಪಡೆಯಲು ಯಾವ ತಪ್ಪು ಮಾಡಿದ್ದೀರಿ..?

- Advertisement -
- Advertisement -

“ಛತ್ತಿಸ್‌ಘಡದಲ್ಲಿ ರೈತರು ಒಂದು ಕ್ವಿಂಟಲ್‌ ಭತ್ತಕ್ಕೆ 2,500 ರೂಪಾಯಿ ಪಡೆಯುತ್ತಿದ್ದಾರೆ. ಆದರೆ ಬಿಹಾರದ ರೈತರಿಗೆ ಕೇವಲ 700 ರೂಪಾಯಿ ಮಾತ್ರ ಸಿಗುತ್ತದೆ. ಯಾಕೆ..? ನಿಮ್ಮ ಬಳಿ ನೀರು, ವಿದ್ಯುತ್ ಮತ್ತು ಹೊಲ ಎಲ್ಲಾ ಸೌಲಭ್ಯಗಳು ಇವೆಯೇ..? ಕನಿಷ್ಟ ಬೆಂಬಲ ಬೆಲೆ ಬಿಡಿ, ಹೋಗಲಿ ನಿಮಗೆ ಒಂದು ಕ್ವಿಂಟಾಲ್ ಭತ್ತಕ್ಕೆ ಒಂದು ಸಾವಿರವಾದರೂ ಸಿಗುತ್ತಿದೆಯೇ..?” ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಬಿಹಾರ ಚುನಾವಣೆಯ ಮೂರನೇ ಹಂತದ ಚುನಾವಣಾ ಪ್ರಚಾರದಲ್ಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಮತ್ತು ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಹಾರದ ಮತದಾರರು ನಿತೀಶ್ ಜಿ ಮತ್ತು ಮೋದಿಯವರಿಗೆ ಮತ ನೀಡಿ ತಪ್ಪು ಮಾಡಿದ್ದಿರಿ. ಈಗ ಸರಿಪಡಿಸಿಕೊಳ್ಳಲು ಇರುವ ಅವಕಾಶ ಈ ಚುನಾವಣೆ ಎಂದಿದ್ದಾರೆ.

ಬಿಹಾರದ ಕತಿಹಾರ್‌ನಲ್ಲಿ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಪಕ್ಕದ ಕಾಂಗ್ರೆಸ್ ಆಡಳಿತದ ಛತ್ತೀಸ್‌ಘಡವನ್ನು ಉದಾಹರಣೆಯಾಗಿ ನೀಡುವ ಮೂಲಕ ಬಿಹಾರದ ರೈತರಿಗೆ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದಿದ್ದಾರೆ.

“ಛತ್ತೀಸ್‌ಘಡದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದೆ. ಅಲ್ಲಿನ ರೈತರು ಅಷ್ಟು ಬೆಲೆ ಪಡೆಯುವಾಗ, ಬಿಹಾರದ ರೈತರಾದ ನೀವು ಇಷ್ಟು ಕಡಿಮೆ ಬೆಲೆ ಪಡೆಯಲು ಯಾವ ತಪ್ಪು ಮಾಡಿದ್ದೀರಿ..?  ಎಂದು ಪ್ರಶ್ನಿಸಿದ ರಾಹುಲ್, “ನೀವು ನಿತೀಶ್ ಜಿ ಮತ್ತು ಮೋದಿ ಜಿ ಅವರಿಗೆ ಮತ ಹಾಕಿದ್ದೀರಿ. ಅದೇ ನಿಮ್ಮ ತಪ್ಪು. ಈಗ ತಪ್ಪನ್ನು ಸರಿಪಡಿಸುವ ಸಮಯ ಬಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುಳ್ಳು ಹೇಳುವುದರಲ್ಲಿ ಪ್ರಧಾನಿಗೆ ಪೈಪೋಟಿ ನೀಡಲಾರೆವು; ರಾಹುಲ್ ಗಾಂಧಿ

ಇದಕ್ಕೂ ಮೊದಲು ಎರಡನೇ ಹಂತದ ಮತದಾನಕ್ಕೆ ಮುನ್ನಾ ಬೆಳಗ್ಗೆಯೇ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ, ‘ತಪ್ಪದೇ ಎಲ್ಲರೂ ಮತದಾನ ಮಾಡಿ. ಇದರಿಂದ ರಾಜ್ಯದಲ್ಲಿ ನಿಮ್ಮ ಆಯ್ಕೆಯ ಸರ್ಕಾರ ರಚನೆಯಾಗಲಿದೆ’ ಎಂದು ಬಿಹಾರದ ಮತದಾರರಲ್ಲಿ ಮನವಿ ಮಾಡಿದ್ದರು.

ಜೊತೆಗೆ ಇಂದು ನಾನು ಬಿಹಾರದ ಕೋಡಾ ಮತ್ತು ಕಿಷನ್‌ಗಂಜ್‌ನಲ್ಲಿ, ನಿರುದ್ಯೋಗ ಸಮಸ್ಯೆ, ಕೃಷಿಕರ ಸಮಸ್ಯೆಗಳು ಮತ್ತು ದುರ್ಬಲ ಆರ್ಥಿಕತೆ ಕುರಿತು ಮಾತನಾಡಲಿದ್ದೇನೆ’ ಎಂದೂ ಅವರು ತಿಳಿಸಿದ್ದರು. ತಮ್ಮ ರ್‍ಯಾಲಿಗಳಲ್ಲಿ ಈ ವಿಷಯಗಳನ್ನೇ ಚರ್ಚಿಸಿದ್ದಾರೆ.

ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ಪಕ್ಷಗಳ ನೇತೃತ್ವದ ಎನ್‌ಡಿಎಗೆ ಆರ್‌ಜೆಡಿಯ ಮುಖ್ಯಸ್ಥ ತೇಜಸ್ವಿ ಯಾದವ್ ಮತ್ತು ಕಾಂಗ್ರೆಸ್ ಜೊತೆಗೆ ಎಲ್‌ಜೆಪಿ ನಾಯಕ ಚಿರಾಗ್ ಪಾಸ್ವಾನ್ ಪ್ರಮುಖ ಪ್ರತಿಸ್ಪರ್ಧಿಯಾಗಿದ್ದಾರೆ. ಸದ್ಯ ಬಿಹಾರದಲ್ಲಿ 2 ಹಂತದ ಮತದಾನ ಪ್ರಕ್ರಿಯೆ ನಡೆದಿದ್ದು, ಕೊನೆಯ ಹಂತದ ಮತದಾನ ನವೆಂಬರ್ 7  ರಂದು ನಡೆಲಿದೆ. ನವೆಂಬರ್ 10 ರಂದು ಫಲಿತಾಂಶ ಹೊರಬೀಳಲಿದೆ.


ಇದನ್ನೂ ಓದಿ: ಕೇರಳ: ರಾಹುಲ್ ಗಾಂಧಿ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾಯಾಂಗದ ವಿರುದ್ಧ ಟೀಕೆ ಆರೋಪ: ಸಿಜೆಪಿ ವಕ್ತಾರ ಸೌರವ್ ದಾಸ್ ವಿರುದ್ಧ ತನಿಖೆಗೆ ಮದ್ರಾಸ್ ಹೈಕೋರ್ಟ್‌ನಲ್ಲಿ ಪಿಐಎಲ್

ಚೆನ್ನೈ: ಭಾರತದ ನ್ಯಾಯಾಂಗ, ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್‌ನ ಇತರ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್...

ಕರ್ನಾಟಕ ಎಸ್‌ಐಆರ್: 192 ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳು ಡಿಲೀಟ್; 2028ಕ್ಕೆ ಯಾರಿಗೆ ಅಧಿಕಾರ?

ಜನಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ವಿರೋಧ, ಆತಂಕ ಹಾಗೂ ಆರೋಪಗಳ ಹೊರತಾಗಿಯೂ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಗಿದಿದೆ. 2026ರ ಅಕ್ಟೋಬರ್ 27ರಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಅಂತಿಮ ಮತದಾರರ...

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಶಶಿಕುಮಾರ್‌ಗೆ ಕೊಕ್; ಚೇತನ್ ಸಿಂಗ್ ರಾಥೋಡ್‌ಗೆ ತನಿಖೆಯ ಹೊಣೆ

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಎಸ್‌ಐಟಿ ಮುಖ್ಯಸ್ಥರಾಗಿದ್ದ ಐಜಿಪಿ ಎನ್. ಶಶಿಕುಮಾರ್...

ಇಸ್ರೇಲ್ ಚುನಾವಣೆ: ನೆತನ್ಯಾಹು, ಐಸೆನ್‌ಕೋಟ್ ಬಣಗಳಿಗೆ ಬಹುಮತದ ಕೊರತೆ; ಸರ್ಕಾರ ರಚನೆಯಲ್ಲಿ ಅರಬ್ ಪಕ್ಷಗಳೇ ನಿರ್ಣಾಯಕ!

ಇಸ್ರೇಲ್‌ನ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಆಡಳಿತಾರೂಢ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ಸೇನಾ ಮುಖ್ಯಸ್ಥ ಗಡಿ ಐಸೆನ್‌ಕೋಟ್ ನೇತೃತ್ವದ ವಿರೋಧ ಪಕ್ಷದ ಬಣಗಳೆರಡಕ್ಕೂ ಭಾರಿ ಸವಾಲು ತಂದೊಡ್ಡಿದೆ. 120 ಸದಸ್ಯ ಬಲದ...

ನ.1ರ ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಬೆಂಬಲ ಘೋಷಿಸಿದ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’

ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಲಿರುವ ಬೃಹತ್ ರ‍್ಯಾಲಿಗೆ ಪೀಪಲ್ ಅಗೆನೆಸ್ಟ್ ಎಸ್‌ಐಆರ್‌ ಬೆಂಬಲ ಘೋಷಿಸಿದೆ. ಪ್ರಜಾಪ್ರಭುತ್ವವನ್ನು ಉಳಿಸಲು, ಎಸ್‌ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ...

‘ನುಸುಳುಕೋರರನ್ನು’ ಹೊರಹಾಕಲು SIR ಎಂದಿತ್ತು ಬಿಜೆಪಿ ಮತ್ತು ಚು. ಆಯೋಗ : ಆರು ರಾಜ್ಯಗಳಲ್ಲಿ ಪತ್ತೆಯಾಗಿದ್ದು ಕೇವಲ 1,600 ವಿದೇಶಿಯರು ಮಾತ್ರ

'ನುಸುಳುಕೋರರನ್ನು' ಪತ್ತೆ ಹಚ್ಚುವುದು ಅಥವಾ 'ವಿದೇಶಿ ಅಕ್ರಮ ವಲಸಿಗರನ್ನು' ಪತ್ತೆ ಹಚ್ಚುವುದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿತ್ತು....

ಸಂತ್ರಸ್ತೆ ಮತ್ತು ಆರೋಪಿ ನಡುವಿನ ‘ಒಪ್ಪಂದ’ವನ್ನಷ್ಟೇ ಆಧರಿಸಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಪಕ್ಷಕಾರರ (ಸಂತ್ರಸ್ತೆ ಮತ್ತು ಆರೋಪಿ) ನಡುವಿನ ರಾಜಿ ಸಂಧಾನದ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇವಲ ಒಪ್ಪಂದದ ಆಧಾರದ ಮೇಲೆ ಗಂಭೀರ ಅಪರಾಧಗಳನ್ನು...

DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು,...

ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ...

Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...