Homeಕರ್ನಾಟಕ'ನೀವು ಯಾವಾಗಲೂ ನಮ್ಮ ಚಾಂಪಿಯನ್ ಆಗಿರುತ್ತೀರಿ..'; ವಿನೇಶಾ ಅನರ್ಹತೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

‘ನೀವು ಯಾವಾಗಲೂ ನಮ್ಮ ಚಾಂಪಿಯನ್ ಆಗಿರುತ್ತೀರಿ..’; ವಿನೇಶಾ ಅನರ್ಹತೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

- Advertisement -
- Advertisement -

ಕೇವಲ 100 ಗ್ರಾಂ ತೂಕ ಹೆಚ್ಚಾಗಿದೆ ಎಂಬ ಕಾರಣಕ್ಕೆ ಪ್ಯಾರಿಸ್‌ ಒಲಂಪಿಕ್ಸ್‌ನ ಮಹಿಳಾ ಕುಸ್ತಿಯ ಫೈನಲ್ಸ್‌ನಿಂದ ಅನರ್ಹಗೊಂಡಿರುವ ಕುಸ್ತಿಪಟು ವಿನೇಶಾ ಫೋಗಟ್‌ ಅವರಿಗೆ ಧೈರ್ಯ ತುಂಬಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ನೀವು ಯಾವಾಗಲೂ ನಮ್ಮ ಚಾಂಪಿಯನ್ ಆಗಿರುತ್ತೀರಿ” ಎಂದು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಪ್ಯಾರಿಸ್ ಒಲಂಪಿಕ್ಸ್‌ನ ದುರದೃಷ್ಟಕರ ಘಟನೆಯ ನಂತರ ವಿನೇಶಾ ಫೋಗಟ್‌ ಅವರಿಗಾಗಿ ನಮ್ಮ ಹೃದಯ ಮಿಡಿಯುತ್ತಿದೆ. ನಿಮ್ಮ ಶಕ್ತಿ, ಸ್ಥಿತಿಸ್ಥಾಪಕತ್ವ ಮತ್ತು ಸಮರ್ಪಣೆ ಯಾವಾಗಲೂ ರಾಷ್ಟ್ರವನ್ನು ಪ್ರೇರೇಪಿಸುತ್ತದೆ” ಎಂದು ವಿನೇಶಾ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

“ನೆನಪಿಡಿ, ಈ ಕ್ಷಣವು ನಿಮ್ಮ ಲೆಕ್ಕವಿಲ್ಲದಷ್ಟು ಸಾಧನೆಗಳನ್ನು ಮತ್ತು ನೀವು ಭಾರತಕ್ಕೆ ತಂದ ಹೆಮ್ಮೆಯನ್ನು ಕಡಿಮೆ ಮಾಡುವುದಿಲ್ಲ. ಧೈರ್ಯವಾಗಿರು ವಿನೇಶಾ. ನಾವು ನಿಮ್ಮನ್ನು ಮತ್ತು ನಿಮ್ಮ ಅದ್ಭುತ ಪ್ರಯಾಣವನ್ನು ನಂಬುತ್ತೇವೆ. ನೀವು ಯಾವಾಗಲೂ ನಮ್ಮ ಚಾಂಪಿಯನ್ ಆಗಿರುತ್ತೀರಿ” ಎಂದು ಹೊಗಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ವಿನೇಶಾ ಫೋಗಟ್, ನಿಜವಾದ ಚಾಂಪಿಯನ್‌ಗಳನ್ನು ಅವರ ಆತ್ಮದಿಂದ ವ್ಯಾಖ್ಯಾನಿಸಲಾಗುತ್ತದೆ, ಅವರ ಹಿನ್ನಡೆಯಿಂದಲ್ಲ. ಪದಕ ಅಥವಾ ಪದಕವಿಲ್ಲದೆಯೂ ನೀವು ನಮಗೆ ಚಾಂಪಿಯನ್. ನಿಮ್ಮ ಕಠಿಣ ಪರಿಶ್ರಮ ಮತ್ತು ಸ್ಥಿತಿಸ್ಥಾಪಕತ್ವವು ಭಾರತದಾದ್ಯಂತ ಯುವಜನರನ್ನು ಪ್ರೇರೇಪಿಸುತ್ತದೆ. ಇಡೀ ರಾಷ್ಟ್ರವೇ ನಿಮ್ಮ ಬೆನ್ನಿಗೆ ನಿಂತಿದೆ. ಧೃತಿಗೆಡಬೇಡಿ, ಉತ್ತಮವಾದದ್ದು ಇನ್ನೂ ಬರಬೇಕಿದೆ” ಎಂದು ಬರೆದುಕೊಂಡಿದ್ದಾರೆ.

“ಒಲಂಪಿಕ್ಸ್‌ ಕುಸ್ತಿ ಪಂದ್ಯಾವಳಿಯಲ್ಲಿ ಫೈನಲ್ ತಲುಪಿ ಚಿನ್ನದ ಪದಕದ ಗೆಲುವಿನ ಭರವಸೆ ಮೂಡಿಸಿದ್ದ ವಿನೇಶಾ ಪೋಗಟ್ ಅವರು ತೂಕದ ಕಾರಣಕ್ಕೆ ಅನರ್ಹತೆ ಹೊಂದಿದ್ದು ನಿಜಕ್ಕೂ ಬೇಸರದ ಸಂಗತಿ.
ಆದರೂ ನಿಮ್ಮ ಹೋರಾಟದ ಹಾದಿ ದೇಶಕ್ಕೇ ಸ್ಪೂರ್ತಿ” ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ; ತೂಕದ ಕಾರಣಕ್ಕೆ ವಿನೇಶಾ ಫೋಗಟ್ ಅನರ್ಹತೆ; ‘ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್’ ನಿಯಮ ಹೇಳುವುದೇನು..?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

0
ಆಪಾದಿತ ಮುಡಾ ಹಗರಣ ಪ್ರಕರಣದಲ್ಲಿ ತನ್ನ ವಿರುದ್ದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ 12ಕ್ಕೆ ಮುಂದೂಡಿದೆ. ಇಂದು ಅರ್ಜಿ ವಿಚಾರಣೆ ನಡೆಯಿತು. ವಾದ...