Homeಮುಖಪುಟಯುವ ಪತ್ರಕರ್ತನ ಕೊಲೆ ಪ್ರಕರಣ : ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

ಯುವ ಪತ್ರಕರ್ತನ ಕೊಲೆ ಪ್ರಕರಣ : ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

- Advertisement -
- Advertisement -

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಡೆದ ಯುವ ಪತ್ರಕರ್ತ ಮುಕೇಶ್ ಚಂದ್ರಕರ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುರೇಶ್ ಚಂದ್ರಕರ್‌ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳು ಹೈದರಾಬಾದ್‌ನಲ್ಲಿ ಇಂದು (ಜ.6) ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಗುತ್ತಿಗೆದಾರನಾಗಿರುವ ಆರೋಪಿ ಸುರೇಶ್ ಚಂದ್ರಕರ್, ಜನವರಿ 3ರಂದು ಪತ್ರಕರ್ತ ಮುಕೇಶ್ ಚಂದ್ರಕರ್ ಶವ ಪತ್ತೆಯಾದ ಬಳಿಕ ನಾಪತ್ತೆಯಾಗಿದ್ದರು.

ಪತ್ರಕರ್ತನ ಸಾವು ದೇಶದಾದ್ಯಂತ ಸುದ್ದಿಯಾದ ಬಳಿಕ ಛತ್ತೀಸ್‌ಗಢ ಸರ್ಕಾರ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿತ್ತು. ತನಿಖಾ ಅಧಿಕಾರಿಗಳು ತಲೆಮರೆಸಿಕೊಂಡಿದ್ದ ಆರೋಪಿ ಸುರೇಶ್‌ಗಾಗಿ ಹುಡುಕಾಟ ನಡೆಸುತ್ತಿದ್ದರು. ಭಾನುವಾರ (ಜ.5) ರಾತ್ರಿ ಹೈದರಾಬಾದ್‌ನಲ್ಲಿ ಸೆರೆ ಹಿಡಿದಿದ್ದಾರೆ ಎಂದು ವರದಿಗಳು ಹೇಳಿವೆ.

ಪ್ರಕರಣದ ಇತರ ಆರೋಪಿಗಳಾದ ಸುರೇಶ್ ಚಂದ್ರಕರ್‌ನ ಸಹೋದರರು ರಿತೇಶ್ ಚಂದ್ರಕರ್‌ ಮತ್ತು ದಿನೇಶ್ ಚಂದ್ರಕರ್‌ ಹಾಗೂ ಇನ್ನೋರ್ವ ಮಹೇಂದ್ರ ರಾಮಟೆಕೆ ಅವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

ರಸ್ತೆ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿರುವ ಕುರಿತು ವರದಿ ಮಾಡಿದ ಬಳಿಕ, ಜನವರಿ 1ರಿಂದ ಸ್ವತಂತ್ರ ಪತ್ರಕರ್ತ ಮುಕೇಶ್ ಚಂದ್ರಕರ್ ಅವರು ನಾಪತ್ತೆಯಾಗಿದ್ದರು. ಜನವರಿ 3ರಂದು ಬಿಜಾಪುರ ಜಿಲ್ಲೆಯ ಚಟ್ಟಂಪಾರ ಬಸ್ತಿಯ ಆರೋಪಿ ಗುತ್ತಿಗೆದಾರ ಸುರೇಶ್ ಚಂದ್ರಕರ್ ಅವರ ಜಮೀನಿನ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಮುಕೇಶ್ ಅವರ ಶವ ಪತ್ತೆಯಾಗಿತ್ತು.

ಆರೋಪಿ ಸುರೇಶ್ ಚಂದ್ರಕರ್‌ ಗುತ್ತಿಗೆ ಪಡೆದಿದ್ದ ರಸ್ತೆ ಕಾಮಗಾರಿಯಲ್ಲಿ ನಡೆದ ಭ್ರಷ್ಟಾಚಾರದ ಕುರಿತು ವರದಿ ಮಾಡಿದ್ದಕ್ಕೆ ಪತ್ರಕರ್ತ ಮುಕೇಶ್ ಅವರನ್ನು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಮೃತನ ಸಹೋದರ ಟಿವಿ ಪತ್ರಕರ್ತ ಯುಕೇಶ್ ಚಂದ್ರಕರ್ ನೀಡಿದ ದೂರು ಆಧರಿಸಿ ಸುರೇಶ್ ಚಂದ್ರಕರ್ ಹಾಗೂ ಇತರರ ವಿರುದ್ದ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ತನಿಖೆಯನ್ನು ಎಸ್‌ಐಟಿ ನಡೆಸುತ್ತಿದೆ.

ಪತ್ರಿಕಾ ಸಂಸ್ಥೆಗಳಿಂದ ಖಂಡನೆ

ಪತ್ರಕರ್ತ ಮುಕೇಶ್ ಚಂದ್ರಕರ್‌ ಕೊಲೆಯನ್ನು ಡಿಜಿಟಲ್ ಸುದ್ದಿ ಸಂಸ್ಥೆಗಳ ಸಂಘ ‘DIGIPUB’ ಸೇರಿದಂತೆ ಹಲವು ಸುದ್ದಿ ಸಂಸ್ಥೆಗಳು ಖಂಡಿಸಿದ್ದು, ಅಪರಾಧಿಗಳ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿವೆ.

ಇದನ್ನೂ ಓದಿ : ಛತ್ತೀಸ್‌ಗಢದಲ್ಲಿ ಪತ್ರಕರ್ತ ಮುಕೇಶ್‌ ಚಂದ್ರಾಕರ್‌ ಹತ್ಯೆ: ಯಾರಿ ಪತ್ರಕರ್ತ, ಏನಿದು ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...