ಯುವ ಪತ್ರಕರ್ತನ ಕೊಲೆ ಪ್ರಕರಣ : ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಡೆದ ಯುವ ಪತ್ರಕರ್ತ ಮುಕೇಶ್ ಚಂದ್ರಕರ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುರೇಶ್ ಚಂದ್ರಕರ್‌ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳು ಹೈದರಾಬಾದ್‌ನಲ್ಲಿ ಇಂದು (ಜ.6) ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಗುತ್ತಿಗೆದಾರನಾಗಿರುವ ಆರೋಪಿ ಸುರೇಶ್ ಚಂದ್ರಕರ್, ಜನವರಿ 3ರಂದು ಪತ್ರಕರ್ತ ಮುಕೇಶ್ ಚಂದ್ರಕರ್ ಶವ ಪತ್ತೆಯಾದ ಬಳಿಕ ನಾಪತ್ತೆಯಾಗಿದ್ದರು. ಪತ್ರಕರ್ತನ ಸಾವು ದೇಶದಾದ್ಯಂತ ಸುದ್ದಿಯಾದ ಬಳಿಕ ಛತ್ತೀಸ್‌ಗಢ ಸರ್ಕಾರ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿತ್ತು. ತನಿಖಾ ಅಧಿಕಾರಿಗಳು ತಲೆಮರೆಸಿಕೊಂಡಿದ್ದ ಆರೋಪಿ ಸುರೇಶ್‌ಗಾಗಿ … Continue reading ಯುವ ಪತ್ರಕರ್ತನ ಕೊಲೆ ಪ್ರಕರಣ : ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ