Homeಮುಖಪುಟಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

- Advertisement -
- Advertisement -

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ.

ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ. ಈ ಘಟನೆ ಫೆ.18ರಂದು ಬೆಳಕಿಗೆ ಬಂದಿದ್ದು, ಅಂದೇ ಯುವತಿಯನ್ನು ರಕ್ಷಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ಯುವತಿಯನ್ನು ಮೂರು ದಿನಗಳ ಕಾಲ ಕೊಠಡಿಯಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾನೆ. ಆಕೆಯ ಖಾಸಗಿ ಅಂಗಗಳ ಮೇಲೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾನೆ ಹಾಗೂ ಆಕೆಯ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದಾನೆ ಎಂದು ವರದಿಯಾಗಿದೆ.

ಅಷ್ಟೇ ಅಲ್ಲದೆ, ಸ್ಟೀಲ್ ಬಾಟಲಿ ಮತ್ತು ಮಣ್ಣಿನ ಮಡಕೆಯಿಂದ ಆಕೆಯ ತಲೆಗೆ ಹೊಡೆದಿದ್ದಾನೆ. ಚಾಕುವಿನಿಂದ ಆಕೆಯ ಕಾಲುಗಳಿಗೆ ಗಾಯಗೊಳಿಸಿ, “ನೀನು ಇನ್ನು ಮುಂದೆ ನಡೆಯಲು ಅಥವಾ ತಾಯಿಯಾಗಲು ಸಾಧ್ಯವಾಗದಂತೆ ಮಾಡುತ್ತೇನೆ” ಎಂದು ಬೆದರಿಸಿದ್ದಾನೆ ಎನ್ನಲಾಗಿದೆ.

ಫೆಬ್ರವರಿ 18ರಂದು ರಾತ್ರಿ ಯುವತಿ ಹೇಗೋ ಮಾಡಿ ಆರೋಪಿಯ ಫೋನ್ ಬಳಸಿ ತನ್ನ ತಾಯಿಗೆ ಕರೆ ಮಾಡಿದ್ದಳು. ಆರೋಪಿಗೆ ಬಂಗಾಳಿ ಭಾಷೆ ಗೊತ್ತಿಲ್ಲದ ಕಾರಣ ಆಕೆ ಆ ಭಾಷೆಯಲ್ಲಿ ತನ್ನ ಸಂಕಷ್ಟವನ್ನು ವಿವರಿಸಿದ್ದಳು. “ನನ್ನ ಬಳಿ ಸಮಯವಿಲ್ಲ, ಅವನು ನನ್ನನ್ನು ಕೊಂದು ಹಾಕುತ್ತಾನೆ” ಎಂದು ಆಕೆ ಅತ್ತಿದ್ದನ್ನು ತಾಯಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ತಾಯಿ ತಕ್ಷಣವೇ ಗುರುಗಾಂವ್ ಪೊಲೀಸರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದರು. ದೂರು ಬಂದ ತಕ್ಷಣವೇ ಎಚ್ಚೆತ್ತ ಪೊಲೀಸರು ಸೆಕ್ಟರ್ 69ರಲ್ಲಿರುವ ಪಿಜಿಗೆ ಧಾವಿಸಿದ್ದರು. ಅಲ್ಲಿ ಸಂತ್ರಸ್ತೆಯು ಅತ್ಯಂತ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಆಕೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ದೆಹಲಿ ಮೂಲದ ಆರೋಪಿ ಶಿವಂ ಮತ್ತು ಉತ್ತರ ತ್ರಿಪುರದ ಯುವತಿ ಡೇಟಿಂಗ್ ಆಪ್ ಒಂದರ ಮೂಲಕ ಪರಸ್ಪರ ಪರಿಚಯವಾಗಿದ್ದರು. ಸೆಪ್ಟೆಂಬರ್ 2025ರಲ್ಲಿ ಮೊದಲ ಭೇಟಿಯಾಗಿದ್ದರು. ಪರಿಚಯವಾದ ಕೆಲವೇ ಸಮಯದಲ್ಲಿ ಇವರ ನಡುವೆ ಸ್ನೇಹ ಬೆಳೆದು, ನಂತರ ಅದು ಪ್ರೇಮಕ್ಕೆ ತಿರುಗಿತ್ತು. ಮದುವೆಯಾಗುವ ಭರವಸೆಯೊಂದಿಗೆ ಇಬ್ಬರೂ ಗುರುಗಾಂವ್‌ನ ಸೆಕ್ಟರ್ 69ರ ಪಿಜಿಯಲ್ಲಿ ಲಿವ್-ಇನ್ ಸಂಬಂಧದಲ್ಲಿ ವಾಸಿಸಲು ಪ್ರಾರಂಭಿಸಿದ್ದರು.

ಇವರ ಸಂಬಂಧದ ಬಗ್ಗೆ ಇಬ್ಬರ ಕುಟುಂಬಸ್ಥರಿಗೂ ತಿಳಿದಿತ್ತು ಮತ್ತು ಮದುವೆಯ ಬಗ್ಗೆ ಮಾತುಕತೆಗಳು ಕೂಡ ನಡೆಯುತ್ತಿದ್ದವು ಎಂದು ವರದಿಯಾಗಿದೆ. ಆರೋಪಿ ಯುವತಿಯ ನಡತೆಯ ಮೇಲೆ ಶಂಕೆ ವ್ಯಕ್ತಪಡಿಸಿ ದೌರ್ಜನ್ಯ ನಡೆಸಿದ್ದಾನೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....