Homeಮುಖಪುಟಉತ್ತರ ಪ್ರದೇಶ: ಕೆಲಸ ಹುಡುಕಿ ಬಂದ ಯುವತಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ ದುಷ್ಕರ್ಮಿಗಳು

ಉತ್ತರ ಪ್ರದೇಶ: ಕೆಲಸ ಹುಡುಕಿ ಬಂದ ಯುವತಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ ದುಷ್ಕರ್ಮಿಗಳು

- Advertisement -
- Advertisement -

ಕೆಲಸ ಹುಡುಕಿಕೊಂಡು ಉತ್ತರ ಪ್ರದೇಶದ ಬರೇಲಿಗೆ ಬಂದಿದ್ದ ನೇಪಾಳ ಮೂಲದ ಯುವತಿಯನ್ನು ಕಳ್ಳತನದ ಶಂಕೆ ಮೇಲೆ ಕಟ್ಟಿ ಹಾಕಿ ಥಳಿಸಿದ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ನೇಪಾಳದ ಪೋಖರಾ ಜಿಲ್ಲೆಯ ಸುಶ್ಮಿತಾ ಸರು ಮಗರ್ ಅಲಿಯಾಸ್ ಕಾಜಲ್ ಹಲ್ಲೆಗೊಳಗಾದ ಯುವತಿ. ಪ್ರಸ್ತುತ ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ಹೇಳಿವೆ.

ಪೊಲೀಸರ ಪ್ರಕಾರ, ಶುಕ್ರವಾರ ರಾತ್ರಿ ಯುವತಿ ಬರದಾರಿಯಲ್ಲಿರುವ ಪರಿಚಯಸ್ಥ ವಿನಯ್ ಗಂಗ್ವಾರ್ ಎಂಬವರ ಮನೆಯಲ್ಲಿ ತಂಗಿದ್ದಾಗ ಘಟನೆ ನಡೆದಿದೆ.

ಬೆಳಗಿನ ಜಾವ 1 ಗಂಟೆ ಸುಮಾರಿಗೆ ಯುವತಿ ಫೋನ್‌ನಲ್ಲಿ ಮಾತನಾಡುತ್ತಾ ಮನೆಯ ಟೆರೇಸ್ ಮೇಲೆ ಹೋಗಿದ್ದರು. ಈ ವೇಳೆ ಸ್ಥಳೀಯರು ಆಕೆಯನ್ನು ಕಳ್ಳಿ ಎಂದು ಶಂಕಿಸಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ.

ಯುವತಿ ಟೆರೇಸ್ ಮೇಲೆ ನಿಂತಿದ್ದಾಗ ಕೆಲ ವ್ಯಕ್ತಿಗಳು ಆಕೆಯ ಕಡೆ ಟಾರ್ಚ್ ಹಾಕಿ ಕಳ್ಳಿ ಎಂದು ಕೂಗಿದ್ದರು. ಧಾವಿಸಿ ಬಂದ ಸ್ಥಳೀಯರೆಲ್ಲ ಆಕೆಯ ಕಡೆಗೆ ಓಡಿ ಹೋಗಿದ್ದಾರೆ. ಈ ವೇಳೆ ಯುವತಿ ಟೆರೇಸ್ ಬಾಗಿಲು ತೆರೆದು ಮನೆಯೊಳಗೆ ಹೋಗಲು ನೋಡಿದ್ದರು. ಆದರೆ, ಅದು ಸಾಧ್ಯವಾಗಿಲ್ಲ. ಹಾಗಾಗಿ, ಹೆದರಿದ ಯುವತಿ ಟೆರೇಸ್‌ನಿಂದ ಕೆಳಗೆ ಹಾರಿದ್ದರು. ಈ ವೇಳೆ ಆಕೆಯನ್ನು ಬೆನ್ನಟ್ಟಿದ ಸ್ಥಳೀಯರು ಕಂಬಕ್ಕೆ ಕಟ್ಟಿ ಹಾಕಿ ಕೋಲಿನಿಂದ ಥಳಿಸಿದ್ದಾರೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅದರಲ್ಲಿ ಯುವತಿ ಕೈಮುಗಿದು “ನಾನು ಕಳ್ಳಿ ಅಲ್ಲ, ಪೊಲೀಸರನ್ನು ಕರೆಯಿರಿ” ಎಂದು ಪದೇ ಪದೇ ಹೇಳುತ್ತಿರುವುದು ಮತ್ತು ಅದನ್ನು ಕೇಳಿಸಿಕೊಳ್ಳದೆ ಸ್ಥಳೀಯರ ಗುಂಪು ಆಕೆಗೆ ಥಳಿಸುವುದನ್ನು ನೋಡಬಹುದು.

ವಿಡಿಯೋ ಸಾಕ್ಷ್ಯ ಮತ್ತು ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಬರದಾರಿಯ ನಿವಾಸಿಗಳಾದ ಗೌರವ್ ಸಕ್ಸೇನಾ, ಶಿವಂ ಸಕ್ಸೇನಾ, ಅಮನ್ ಸಕ್ಸೇನಾ ಮತ್ತು ಅರುಣ್ ಸೈನಿ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮಾನುಷ್ ಪರೀಕ್ ತಿಳಿಸಿದ್ದಾರೆ.

ಉಳಿದ ಆರೋಪಿಗಳನ್ನು ಗುರುತಿಸಿ ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ. ತಾನು ನೋಯ್ಡಾದಲ್ಲಿ ಕೆಲಸ ಮಾಡುತ್ತಿದ್ದೆ. ಆದರೆ, ಕೆಲಸ ಕಳೆದುಕೊಂಡ ಕಾರಣ ಪರಿಚಿತ ವ್ಯಕ್ತಿಯ ಮೂಲಕ ಕೆಲಸ ಹುಡುಕಿಕೊಂಡು ಬರೇಲಿಗೆ ಬಂದಿದ್ದೆ ಎಂದು ಸಂತ್ರಸ್ತೆ ಹೇಳಿದ್ದಾರೆ. ಹಲ್ಲೆಯಿಂದ ಆಕೆಯ ಎರಡು ಹಲ್ಲುಗಳು ಮುರಿದಿವೆ. ಕಾಲಿಗೆ ಗಾಯಗಳಾಗಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿವರಿಸಿದ್ದಾರೆ.

ಕಾನೂನನ್ನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.

ದುಷ್ಕರ್ಮಿಗಳು ಅಪಹರಿಸಿ ಬೆಂಕಿ ಹಚ್ಚಿದ್ದ 15 ವರ್ಷದ ಬಾಲಕಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...