Homeಕರ್ನಾಟಕಬೆಂಗಳೂರು: ಪೋಷಕರು ಫೋಟೋಶೂಟ್‌ಗೆ ಹೋಗಬೇಡ ಎಂದಿದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ!

ಬೆಂಗಳೂರು: ಪೋಷಕರು ಫೋಟೋಶೂಟ್‌ಗೆ ಹೋಗಬೇಡ ಎಂದಿದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ!

- Advertisement -
- Advertisement -

ಬೆಂಗಳೂರಿನಲ್ಲಿ ಎಲ್ಲರೂ ಹೊಸ ವರ್ಷದ ಸಂಭ್ರಮದಲ್ಲಿದ್ದರೆ, ವಿದ್ಯಾರ್ಥಿನಿಯೋರ್ವಳು ಮಾಲ್‌ನಲ್ಲಿ ಹೊಸ ವರ್ಷದ ಮುನ್ನಾದಿನ ಫೋಟೋಶೂಟ್ ಮಾಡಲು ಪೋಷಕರು ಅನುಮತಿ ಕೊಟ್ಟಿಲ್ಲ ಎಂದು ಮನನೊಂದು  ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಸುಧಾಮನಗರ ನಿವಾಸಿ ಬಿಬಿಎ ವಿದ್ಯಾರ್ಥಿನಿ ವರ್ಷಿಣಿ(21) ಭಾನುವಾರ ಬೆಳಗ್ಗೆ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ವರ್ಷಿಣಿ ಫೋಟೋಗ್ರಫಿ ಕೋರ್ಸ್ ಮುಗಿಸಿದ್ದು, ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಳು. ಮಾಲ್‌ನಲ್ಲಿ ಪೋಟೋಶೂಟ್‌ ಇದೆ ನಾನು ಹೋಗುತ್ತೇನೆ ಎಂದು ಪೋಷಕರಲ್ಲಿ ಹೇಳಿದ್ದಾಳೆ. ಇದಕ್ಕೆ ಪೋಷಕರು ಅನುಮತಿ ಕೊಟ್ಟಿರಲಿಲ್ಲ. ಮಾಲ್​ಗೆ ಹೋಗಬೇಡ ಎಂದು ಬುದ್ಧಿವಾದ ಹೇಳಿದ್ದರು. ಇದರಿಂದ ನೊಂದ ವರ್ಷಿಣಿ ಮನೆಯ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಕುರಿತು ಪೊಲೀಸ್‌ ಅಧಿಕಾರಿಯೋರ್ವರು ಮಾಹಿತಿ ನೀಡಿದ್ದು, ಹೊಸ ವರ್ಷದ ಮುನ್ನಾ ದಿನದಂದು ಮಾಲ್‌ನಲ್ಲಿ ಫೋಟೋಶೂಟ್ ಮಾಡಲು ವರ್ಷಿಣಿ ಪೋಷಕರ ಜೊತೆ ಅನುಮತಿ ಕೇಳಿದ್ದಾರೆ. ಪೋಷಕರು ಅನುಮತಿ ನಿರಾಕರಿಸಿದ ನಂತರ ಆಕೆ ತನ್ನ ಕೋಣೆಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ನಮಗೆ ಯಾವುದೇ ಸೂಸೈಡ್ ನೋಟ್ ಸಿಕ್ಕಿಲ್ಲ. ಆದರೆ ಘಟನೆಯ ಮೊದಲು ಅವರು ಯಾರಿಗಾದರೂ ಸಂದೇಶ ಕಳುಹಿಸಿದ್ದಾರಾ ಎಂದು ನೋಡಲು ಅವರ ಮೊಬೈಲ್ ಫೋನ್ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಈ ಕುರಿತು ಪೋಷಕರ ದೂರಿನ ಮೇರೆಗೆ ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಡಿಸಿಪಿ ಶೇಖರ್ ಎಚ್‌ಟಿ ಈ ಕುರಿತು ಮಾದ್ಯಮಗಳ ಜೊತೆ ಮಾತನಾಡಿದ್ದು, ವರ್ಷಿಣಿ ಅವರ ತಂದೆ ಪೊಲೀಸ್ ದೂರು ದಾಖಲಿಸಿದ್ದಾರೆ ಮತ್ತು ಮರಣೋತ್ತರ ಪರೀಕ್ಷೆಯ ನಂತರ ಆಕೆಯ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

 

ಇದನ್ನು ಓದಿ: ನರೇಗಾ ಯೋಜನೆಯಡಿ ಆಧಾರ್ ಆಧಾರಿತ ಪಾವತಿ ವ್ಯವಸ್ಥೆ: ಮೋದಿಯ ‘ಹೊಸ ವರ್ಷದ ಕ್ರೂರ ಉಡುಗೊರೆ’ ಎಂದ ಕಾಂಗ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...