Homeಕರ್ನಾಟಕಬೆಂಗಳೂರಿನಲ್ಲಿ ನಾಲ್ವರು ಕಾಮುಕರಿಂದ ಯುವತಿಯ ಮೇಲೆ ಗ್ಯಾಂಗ್ ರೇಪ್; ಆರೋಪಿಗಳ ಬಂಧನ

ಬೆಂಗಳೂರಿನಲ್ಲಿ ನಾಲ್ವರು ಕಾಮುಕರಿಂದ ಯುವತಿಯ ಮೇಲೆ ಗ್ಯಾಂಗ್ ರೇಪ್; ಆರೋಪಿಗಳ ಬಂಧನ

- Advertisement -
- Advertisement -

ಪಾರ್ಕ್​ನಲ್ಲಿ ಸ್ನೇಹಿತನ ಜೊತೆ ಕುಳಿತಿದ್ದ ಯುವತಿಯನ್ನು ನಾಲ್ವರು ಕಾಮುಕರು ಎಳೆದೊಯ್ದು ಚಲಿಸುತ್ತಿರುವ ಕಾರ್‌ನಲ್ಲಿಯೇ ಸಾಮೂಹಿಕ ಅತ್ಯಾಚಾರ ನಡೆಸಿದ ಪೈಶಾಚಿಕ ಕೃತ್ಯ ನಗರದ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಈ ಘಟನೆ ಮಾರ್ಚ್ 25ರ ರಾತ್ರಿ 10 ಗಂಟೆಗೆ ಘಟನೆ ನಡೆದಿದೆ. ಸರ್ಕಾರಿ ನೌಕರರು ಇರುವ ನ್ಯಾಷನಲ್ ಗೇಮ್ಸ್ ವಿಲೇಜ್​​​​ ಪಾರ್ಕ್​ನಲ್ಲಿ ಯುವತಿ ಹಾಗೂ ಆಕೆಯ ಸ್ನೇಹಿತ ಕುಳಿತುಕೊಂಡಿದ್ದರು. ಈ ವೇಳೆ ಅಲ್ಲಿಗೆ ಬಂದ ನಾಲ್ವರು ಯುವಕರು ಆಕೆಯ ಸ್ನೇಹಿತನನ್ನು ಬೆದರಿಸಿ, ಯುವತಿಯನ್ನು ಎಳೆದೊಯ್ದು ಚಲಿಸುತ್ತಿದ್ದ ಕಾರಿನಲ್ಲಿಯೇ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಈ ಕುರಿತು ಯುವತಿ ಪೊಲೀಸ್​ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಗಳನ್ನ ಬಂಧಿಸಿದ್ದಾರೆ.

ಆರೋಪಿಗಳಾದ ಸತೀಶ್, ವಿಜಯ್, ಶ್ರೀಧರ್, ಕಿರಣ್ ಎಂಬುವವರು ಈ ಕೃತ್ಯವೆಸಗಿದ್ದಾರೆ ಎಂದು ಹೇಳಲಾಗಿದೆ. ಆರೋಪಿಗಳ ಪೈಕಿ ಇಬ್ಬರು ಆಫಿಸ್ ಬಾಯ್, ಒಬ್ಬ ಕಾಲ್‌ ಸೆಂಟರ್ ಉದ್ಯೋಗಿ, ಮತ್ತೊಬ್ಬ ಇಲೆಸ್ಟ್ರಿಷಿಯನ್ ವೃತ್ತಿ ಮಾಡುತ್ತಿದ್ದಾನೆ.

ಇದನ್ನೂ ಓದಿ: ಎರಡನೇ ರೇಪ್ ಕೇಸ್‌ನಲ್ಲೂ ಅಸಾರಾಂಗೆ ಜೀವಾವಧಿ ಶಿಕ್ಷೆ ಘೋಷಣೆ

ಈ ಕಾಮುಕರು ಕೆಎ 01 ಎಂಬಿ 6169 ಸಂಖ್ಯೆಯ ಕಾರಿನಲ್ಲಿ ಕಿಡ್ನ್ಯಾಪ್ ಮಾಡಿ ದೊಮ್ಮಲೂರು, ಇಂದಿರಾನಗರ, ಆನೇಕಲ್, ನೈಸ್ ರಸ್ತೆ ಸೇರಿದಂತೆ ಹಲವೆಡೆ ಕಾರಿನಲ್ಲಿ ಸುತ್ತಾಟ ನಡೆಸಿ ಕೃತ್ಯವೆಸಗಿದ್ದಾರೆ. ಬಳಿಕ ಮಾರ್ಚ್ 26ರ ಬೆಳಗ್ಗೆ 4 ಗಂಟೆಗೆ ಯುವತಿಯನ್ನು ಮನೆ ಬಳಿ ಬಿಟ್ಟು ಪರಾರಿಯಾಗಿದ್ದರು.

ನಂತರ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಅದೇ ದಿನ ಪೊಲೀಸರು ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಡಿಪಿಸಿ (ಆಗ್ನೇಯ) ಸಿ.ಕೆ.ಬಾಬಾ ಅವರು, ”ಪ್ರಕರಣ ದಾಖಲಾದ ಎಂಟು ಗಂಟೆಗಳ ನಂತರ ಎಲ್ಲಾ ನಾಲ್ವರು ಆರೋಪಿಗಳನ್ನು ಬಂಧಿಸಲಾಯಿತು. ನಾವು ವೈದ್ಯಕೀಯ ವರದಿಗಳಿಗಾಗಿ ಕಾಯುತ್ತಿದ್ದೇವೆ ಮತ್ತು ತನಿಖೆ ಇನ್ನೂ ನಡೆಯುತ್ತಿರುವುದರಿಂದ ಹೆಚ್ಚಿನ ವಿವರಗಳನ್ನು ನೀಡಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

ಸಂತ್ರಸ್ತ ಯುವತಿಯು ಕೂಡ ಅದೇ ಪ್ರದೇಶದ ನಿವಾಸಿಯಾಗಿದ್ದು, ಆರೋಪಿಗಳು ಆಕೆಗೆ ಪರಿಚಯಸ್ಥರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇನ್ನು ಈ ಘಟನೆಯಲ್ಲಿ ಆಕೆಯ ಪುರುಷ ಸ್ನೇಹಿತನ ಪಾತ್ರವಿರುವ ಸಾಧ್ಯತೆ ಇಲ್ಲ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...