Homeಮುಖಪುಟಚಲಿಸುತ್ತಿದ್ದ ವ್ಯಾನ್‌ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ವರದಿ

ಚಲಿಸುತ್ತಿದ್ದ ವ್ಯಾನ್‌ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ವರದಿ

- Advertisement -
- Advertisement -

ಒಡಿಶಾದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಾಕ್ಷಿ ಎಂಬಂತೆ, ಚಲಿಸುತ್ತಿದ್ದ ವ್ಯಾನ್‌ನಲ್ಲಿ ಯುವತಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಬಳಿಕ ಆಕೆಯನ್ನು ಹೆದ್ದಾರಿ ಬದಿ ಬಿಟ್ಟು ಹೋದ ಆಘಾತಕಾರಿ ಘಟನೆ ವರದಿಯಾಗಿದೆ.

ಕಳೆದ ಶುಕ್ರವಾರ (ಆ.29) ಸಂಜೆ ಒಡಿಶಾದ ಉಡಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾಜ್ಯ ಹೆದ್ದಾರಿಯಲ್ಲಿ ಪ್ರಯಾಣಿಕರ ವ್ಯಾನ್‌ನಲ್ಲಿ 21 ವರ್ಷದ ಯುವತಿಯ ಮೇಲೆ ಆರು ಜನರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ, ಉಡಾಲ-ಬಾಲಸೋರ್ ರಸ್ತೆಯಲ್ಲಿ ಸಂಜೆ 6 ರಿಂದ 7 ಗಂಟೆಯ ನಡುವೆ ಈ ಘಟನೆ ನಡೆದಿದೆ. ಆರೋಪಿಗಳೆಲ್ಲರೂ ಶರತ್ ಪ್ರದೇಶದವರಾಗಿದ್ದು, ಸಂತ್ರಸ್ತೆ ಸಹಾಯಕ್ಕಾಗಿ ಕಿರುಚಿದಾಗ ಆಕೆಯನ್ನು ರಸ್ತೆ ಬದಿ ಬಿಟ್ಟು ಹೋಗಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಯುವತಿಯ ತಾಯಿ ನೀಡಿದ ದೂರಿನಲ್ಲಿ, ಈ ವರ್ಷದ ಆರಂಭದಲ್ಲಿ ಬಂಗಿರಿಪೋಸಿಯಲ್ಲಿ ನಡೆದ ಮಕರ ಹಬ್ಬದ ಆಚರಣೆಯ ಸಂದರ್ಭದಲ್ಲಿ ಭೇಟಿಯಾದ ಇಬ್ಬರು ಯುವಕರು ಯುವತಿಗೆ ಪರಿಚ ಇದ್ದರು. ಆ ಇಬ್ಬರು ಆಕೆಯೊಂದಿಗೆ ಫೋನ್ ನಂಬರ್ ವಿನಿಮಯ ಮಾಡಿಕೊಂಡಿದ್ದರು. ಖಾಸಗಿ ಕಂಪನಿಯಲ್ಲಿ ಆಕೆಗೆ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದರು. ಅವರ ಮಾತುಗಳನ್ನು ನಂಬಿದ ತಾಯಿ ಅವರೊಂದಿಗೆ ಮಾತುಕತೆ ನಡೆಸಲು ಮಗಳಿಗೆ ಅವಕಾಶ ನೀಡಿದ್ದರು.

ಶುಕ್ರವಾರ, ಆ ಇಬ್ಬರು ಇತರ ನಾಲ್ವರೊಂದಿಗೆ ಯುವತಿಯ ಮನೆಗೆ ಹೋಗಿ ತಮ್ಮೊಂದಿಗೆ ಬರುವಂತೆ ಆಕೆಯ ಮನವೊಲಿಸಿದ್ದರು. ಪರಿಚಯಸ್ಥರು ಕರೆದ ಕಾರಣ ಯುವತಿ ಹೋಗಿದ್ದರು. ಅವರ ವಾಹನವು ಕಪ್ತಿಪಡ ಚೌಕ್‌ನಿಂದ ಬಾಲಸೋರ್ ಕಡೆಗೆ ಹೋಗುತ್ತಿದ್ದಾಗ, ಬಂಗಿರಿಪೋಸಿಯಿಂದ ಸುಮಾರು 70 ಕಿ.ಮೀ ದೂರದಲ್ಲಿ ವ್ಯಾನ್‌ನೊಳಗೆ ಎಲ್ಲರೂ ಸೇರಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ವೇಳೆ ಸಹಾಯಕ್ಕಾಗಿ ಆಕೆ ಕಿರುಚಿದಾಗ, ಆರೋಪಿಗಳು ಆಕೆಯನ್ನು ರಸ್ತೆ ಬದಿಯಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.

ಸಂತ್ರಸ್ತೆ ತನ್ನ ತಾಯಿಗೆ ವಿಷಯ ತಿಳಿಸುವಲ್ಲಿ ಯಶಸ್ವಿಯಾಗಿದ್ದರು. ತಾಯಿ ತಕ್ಷಣ ಸ್ಥಳಕ್ಕೆ ಧಾವಿಸಿ ಮಗಳನ್ನು ಮನೆಗೆ ಕರೆದೊಯ್ದಿದ್ದರು. ನಂತರ, ಅವರು ಬಂಗಿರಿಪೋಸಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಎಫ್‌ಐಆರ್ ಆಧರಿಸಿ, ಬಂಗಿರಿಪೋಸಿ ಐಐಸಿ ಬೀರೇಂದ್ರ ಸೇನಾಪತಿ ಶನಿವಾರ ಬೆಳಗಿನ ಜಾವ ಶರತ್‌ನ ಇಬ್ಬರು ಶಂಕಿತರನ್ನು ಬಂಧಿಸಿ, ನಂತರ ಉಡಾಲ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಉಡಾಲ ಪೊಲೀಸ್ ಠಾಣೆಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇತರ ನಾಲ್ವರು ತಲೆಮರೆಸಿಕೊಂಡಿದ್ದಾರೆ ಎಂದು ಉಡಾಲ ಎಸ್‌ಡಿಪಿಒ ಹೃಸಿಕೇಶ್ ನಾಯಕ್ ತಿಳಿಸಿದ್ದಾರೆ. ಪೊಲೀಸರು ಹುಡುಕಾಟ ಆರಂಭಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಆಂಧ್ರಪ್ರದೇಶ| ದಲಿತ ಕುಟುಂಬದ ಮೇಲೆ ಟಿಡಿಪಿ ನಾಯಕನಿಂದ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...