Homeಮುಖಪುಟಯುವತಿಯ ಹತ್ಯೆಗೈದು ಶವದ ಜೊತೆ ಸಂಭೋಗ: ಮೂವರ ಬಂಧನ

ಯುವತಿಯ ಹತ್ಯೆಗೈದು ಶವದ ಜೊತೆ ಸಂಭೋಗ: ಮೂವರ ಬಂಧನ

- Advertisement -
- Advertisement -

15 ವರ್ಷದ ಯುವತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಆನಂತರ ಆಕೆಯ ಶವದ ಜೊತೆ ಸಂಭೋಗ ನಡೆಸಿದ ಆರೋಪದಲ್ಲಿ ರೈಲ್ವೆ ಸಿಬ್ಬಂದಿ ಸೇರಿದಂತೆ ಮೂವರನ್ನು ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಸೆಪ್ಟೆಂಬರ್ 9ರಂದು ಈ ಘಟನೆ ನಡೆದಿದ್ದು, ಹತ್ಯೆ ನಡೆದ ದಿನವೇ ಅಪ್ರಾಪ್ತ ವಯಸ್ಸಿನ ಯುವತಿಯ ಮೃತದೇಹ ಕರೀಂಗಂಜ್ ಪಟ್ಟಣದ ಬೈಪಾಸ್ ನಲ್ಲಿ ಪತ್ತೆಯಾಗಿತ್ತು.

ಈ ಬಗ್ಗೆ ಮಾಹಿತಿ ನೀಡಿದ ಕರೀಂಗಂಜ್ ಎಸ್ಪಿ ಪಾರ್ಥ ಪ್ರತೀಂ ದಾಸ್, ”ಶವಸಂಭೋಗ (ನೆರ್ಕೊಫಿಲಿಯಾ) ನಡೆದಿರುವುದು ಮರಣೋತ್ತರ ಪರೀಕ್ಷೆಯಿಂದ ದೃಢಪಟ್ಟಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ.

ಯುವತಿಯ ಡೈರಿಯಲ್ಲಿ ಪತ್ತೆಯಾದ ಫೋನ್ ನಂಬರ್ ಆಧಾರದಲ್ಲಿ ತನಿಖೆ ಮುಂದುವರಿಸಿದ ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

”ಹೊಸದಾಗಿ ಉದ್ಯೋಗಕ್ಕೆ ಸೇರಿದ ರೈಲ್ವೆ ಸಿಬ್ಬಂದಿಯೊಬ್ಬ ಈ ಯುವತಿ ಜತೆ ಪ್ರೇಮಸಂಬಂಧ ಹೊಂದಿದ್ದ ಹಾಗೂ ದೈಹಿಕ ಸಂಪರ್ಕಕ್ಕಾಗಿ ಒತ್ತಾಯಿಸುತ್ತಿದ್ದ. ಆದರೆ ಲೈಂಗಿಕತೆಯನ್ನು ಆಕೆ ನಿರಾಕರಿಸುತ್ತಾ ಬಂದಿದ್ದಳು ಎನ್ನುವುದು ತನಿಖೆಯಿಂದ ತಿಳಿದು ಬಂದಿದೆ” ಎಂದು ಪಾರ್ಥ ಪ್ರತೀಂ ದಾಸ್ ವಿವರಿಸಿದ್ದಾರೆ.

ಸೆ. 9ರಂದು ಯುವತಿ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಆಕೆಯ ಪ್ರಿಯಕರ ತನ್ನ ಇಬ್ಬರು ಸ್ನೇಹಿತರ ಜತೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ ಯುವತಿಯನ್ನು ಉಸಿರುಗಟ್ಟಿಸಿ ಸಾಯಿಸಿ ಒಬ್ಬರ ಮೇಲೆ ಒಬ್ಬರಂತೆ ಶವದ ಜತೆ ಲೈಂಗಿಕ ಚಟುವಟಿಕೆ ನಡೆಸಿದರು ಎಂದು ಹೇಳಿದ್ದಾರೆ. ಆರೋಪಿಗಳು ಮೃತದೇಹವನ್ನು ಹೆದ್ದಾರಿ ಬದಿ ಬಿಸಾಕಿ ಹೋಗಿದ್ದು, ಪತ್ತೆಯಾದ ಶವವನ್ನು ಯುವತಿಯ ಪೋಷಕರು ಗುರುತಿಸಿದ್ದರು.

ಇದನ್ನೂ ಓದಿ: ಉ.ಪ್ರದೇಶ: ದೂರು ನೀಡಲು ಬಂದ ದಲಿತ ಮಹಿಳೆ ಮೇಲೆ ಪೊಲೀಸ್ ಅಧಿಕಾರಿಯಿಂದಲೇ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಮ್ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...