Homeಮುಖಪುಟಗೆಳೆಯನಿಂದ ಬಾಲಕಿಯ ಕೊಲೆ; ಘಟನೆ ಕಣ್ಮುಂದೆ ನಡೆದರೂ ನಿಲ್ಲಿಸದ ಜನತೆ

ಗೆಳೆಯನಿಂದ ಬಾಲಕಿಯ ಕೊಲೆ; ಘಟನೆ ಕಣ್ಮುಂದೆ ನಡೆದರೂ ನಿಲ್ಲಿಸದ ಜನತೆ

- Advertisement -
- Advertisement -

ಒಬ್ಬ ಬಾಲಕಿಗೆ ಅನೇಕ ಬಾರಿ ಇರಿದು, ಕಲ್ಲಿನ ಚಪ್ಪಡಿಯಿಂದ ಹೊಡೆದು ಕೊಲ್ಲುತ್ತಿದ್ದರೂ ಸುತ್ತಲಿದ್ದ ಜನರು ಏನನ್ನೂ ಮಾಡದೆ ನೋಡುತ್ತಾ ನಿಂತಿದ್ದ ಘಟನೆ ಕ್ಯಾಮೆರಾದಲ್ಲಿ ವರದಿಯಾಗಿದೆ.

ಉತ್ತರ ದೆಹಲಿಯ ರೋಹಿಣಿಯಲ್ಲಿ ಇದು ವರದಿಯಾಗಿದೆ. “ಜನರು ಅಲ್ಲಿಯೇ ಹಾದು ಹೋಗುತ್ತಾರೆ, ಅದನ್ನು ನೋಡುತ್ತಿದ್ದರೂ ಘಟನೆಯನ್ನು ನಿಲ್ಲಿಸಲು ಯಾವುದೇ ಕ್ರಮ ಜರುಗಿಸಲಿಲ್ಲ” ಎಂದು ಎನ್‌ಡಿಟಿವಿ ವರದಿ ಮಾಡಿದೆ.

16 ವರ್ಷದ ಬಾಲಕಿ ನಡೆದು ಹೋಗುತ್ತಿದ್ದಾಗ ದಾಳಿಯಾಯಿತು. ಇದು ಉತ್ತರ ದೆಹಲಿಯ ರೋಹಿಣಿಯಲ್ಲಿ ಭದ್ರತಾ ಕ್ಯಾಮರಾದಲ್ಲಿ ಸೆರೆಯಾಗಿದೆ. ದೃಶ್ಯಗಳು ಅಸ್ಪಷ್ಟವಾಗಿಯೂ, ಗೊಂದಲಕಾರಿಯಾಗಿಯೂ ಗೋಚರಿಸಿವೆ.

ಜನನಿಬಿಡ ಪ್ರದೇಶದಲ್ಲಿಯೇ ಆಕೆಯ ಗೆಳೆಯ ಸಾಹಿಲ್‌ ಕೊಂದಿದ್ದಾನೆ. ಆದರೆ ಯಾರೂ ಆಕೆಯನ್ನು ಉಳಿಸಲು ಸಾಧ್ಯವಾಗಲಿಲ್ಲ. ಇಂದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹಿಂದಿನ ದಿನ ಸಂಜೆ ಇಬ್ಬರೂ ಜಗಳವಾಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಭಾನುವಾರ ಸಂಜೆ ಸಾಹಿಲ್‌, ಬಾಲಕಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪದೇ ಪದೇ ಇರಿದಿದ್ದಾನೆ. ಒಂದು ಹಂತದಲ್ಲಿ, ಚಾಕು ಸಿಕ್ಕಿಹಾಕಿಕೊಂಡಾಗ ಕೊಲೆಗಾರ ಅದನ್ನು ಮತ್ತೆ ತೆಗೆದು ಚುಚ್ಚಿದ್ದಾನೆ. ನಂತರ ಆತ ಕಲ್ಲಿನ ಚಪ್ಪಡಿ ಎತ್ತಿಕೊಂಡು ಹೋಗಿ ಆಕೆಗೆ ಪದೇ ಪದೇ ಹೊಡೆದಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ಸಂತ್ರಸ್ತ ಬಾಲಕಿ ತನ್ನ ಸ್ನೇಹಿತನ ಮಗನ ಹುಟ್ಟುಹಬ್ಬಕ್ಕೆ ತೆರಳುತ್ತಿದ್ದಾಗ ಹಿಂದಿನಿಂದ ಬಂದು ಕೃತ್ಯ ಎಸಗಲಾಗಿದೆ.

“ಬಾಲಕಿ ಮತ್ತು ಆರೋಪಿ ಇಬ್ಬರೂ ರಿಲೇಷನ್‌ ಶಿಪ್‌ನಲ್ಲಿ ಇದ್ದರು. ಆದರೆ ನಿನ್ನೆ ಇಬ್ಬರೂ ಜಗಳವಾಡಿದ್ದರು. ಇಬ್ಬರೂ ತನ್ನ ಸ್ನೇಹಿತನ ಮಗನ ಹುಟ್ಟುಹಬ್ಬಕ್ಕೆ ಹಾಜರಾಗಲು ಯೋಜಿಸಿದ್ದರು. ಆ ವ್ಯಕ್ತಿ ಆಕೆಯನ್ನು ಹಿಂಬಾಲಿಸಿ ಕೃತ್ಯ ಎಸಗಿದ್ದಾನೆ” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿರಿ: ಕುಸ್ತಿಪಟುಗಳಿಗೆ ಸವಾಲಾಗಿರುವ ‘ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌’ ಯಾರು? ಆತನ ಹಿನ್ನಲೆ, ಪ್ರಭಾವವೇನು?

ಸ್ಥಳೀಯರಿಂದ ಮಾಹಿತಿ ಪಡೆದು ಎಚ್ಚೆತ್ತ ಪೊಲೀಸರು ಸ್ಥಳಕ್ಕೆ ಆಗಮಿಸಿ ಬಾಲಕಿಯ ಶವ ಹಾಗೂ ಸುತ್ತ ರಕ್ತ ಮಡುಗಟ್ಟಿರುವುದನ್ನು ಪತ್ತೆ ಹಚ್ಚಿದ್ದಾರೆ. ಪೊಲೀಸ್ ತಂಡಗಳು ಇನ್ನುಳಿದ ಹಂತಕರಿಗಾಗಿ ಶೋಧ ನಡೆಸುತ್ತಿವೆ.

ಘಟನೆಯ ಕುರಿತು ಪೊಲೀಸರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ದೆಹಲಿ ಮಹಿಳಾ ಸಮಿತಿ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಹೇಳಿದ್ದಾರೆ.

“ಅಪರಾಧವನ್ನು ಸಿಸಿಟಿವಿಯಲ್ಲಿ ಸೆರೆಹಿಡಿಯಲಾಗಿದೆ. ಹಲವಾರು ಜನರು ಇದನ್ನು ನೋಡಿದ್ದಾರೆ, ಆದರೆ ಗಮನ ಹರಿಸಲಿಲ್ಲ. ಮಹಿಳೆಯರು ಮತ್ತು ಯುವತಿಯರಿಗೆ ದೆಹಲಿ ಅತ್ಯಂತ ಅಸುರಕ್ಷಿತವಾಗಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...