Homeಮುಖಪುಟನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ ; ರೈಲಿನಲ್ಲಿ ಕರಪತ್ರ ಹಂಚಿದ ಕಾಂಗ್ರೆಸ್‌ ಶಾಸಕ

ನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ ; ರೈಲಿನಲ್ಲಿ ಕರಪತ್ರ ಹಂಚಿದ ಕಾಂಗ್ರೆಸ್‌ ಶಾಸಕ

- Advertisement -
- Advertisement -

ನಿಮ್ಮ ಟಿಕೆಟ್ ಶುಲ್ಕವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪಾವತಿಸಿದ್ದಾರೆ. ಕಾಂಗ್ರೆಸ್ ಪಕ್ಷ, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಸುನಿಲ್ ಜಖರ್ ಅವರು ನಿಮ್ಮನ್ನು ಕಳುಹಿಸುತ್ತಿದ್ದಾರೆ. ಎಲ್ಲವನ್ನೂ ಈ ಕರಪತ್ರದಲ್ಲಿ ಬರೆಯಲಾಗಿದೆ, ನಿಮ್ಮ ಪ್ರಯಾಣದ ಬಿಡುವಿನ ವೇಳೆಯಲ್ಲಿ ನೀವು ಇದನ್ನು ಓದಬಹುದು ಎಂದು ಪಂಜಾಬ್‌ನ ಕಾಂಗ್ರೆಸ್ ಶಾಸಕರು ಭಾಷಣ ಮಾಡಿರುವ ವಿಶೇಷ ಘಟನೆ ಜರುಗಿದೆ.

ಕಾಂಗ್ರೆಸ್‌ ಶಾಸಕರಾದ ಅಮರಿಂದರ್ ರಾಜಾ ವಾರಿಂಗ್ ಅವರು ಇಂದು ಪಂಜಾಬ್‌ನಿಂದ ರೈಲಿನಲ್ಲಿ ಬಿಹಾರದ ಮುಜಾಫರ್‌ಪುರಕ್ಕೆ ತೆರಳುತ್ತಿರುವ ವಲಸಿಗರನ್ನು ನೋಡಲು ಮತ್ತು ಅದಕ್ಕೆ ಹಣ ಪಾವತಿಸಿದವರು ಯಾರೆಂದು ಅವರಿಗೆ ತಿಳಿದಿದೆಯೆ ಎಂದು ಖಚಿತಪಡಿಸಿಕೊಳ್ಳಲು ಕಾಂಗ್ರೆಸ್ ಕಾರ್ಯಕರ್ತರ ತಂಡದೊಂದಿಗೆ ರೈಲು ನಿಲ್ದಾಣಕ್ಕೆ ಧಾವಿಸಿದ್ದಾರೆ.

ನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ

ನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ ; ರೈಲಿನಲ್ಲಿ ಕರಪತ್ರ ಹಂಚಿದ ಕಾಂಗ್ರೆಸ್‌ ಶಾಸಕ

Posted by Naanu Gauri on Monday, May 11, 2020

ಕಾಂಗ್ರೆಸ್ ಆಡಳಿತದ ಪಂಜಾಬ್‌ನಲ್ಲಿ ವಲಸಿಗರಿಗೆ ವಿಶೇಷ ರೈಲು ಭಾನುವಾರ ಆರಂಭವಾಗುತ್ತಿದ್ದಂತೆಯೇ ಪ್ರತಿ ಪ್ರಯಾಣಿಕರಿಗೆ “ನಿಮ್ಮ ಅಗತ್ಯದ ಸಮಯದಲ್ಲಿ ಕಾಂಗ್ರೆಸ್ ಜೊತೆಗಿರುತ್ತದೆ” ಎಂದು ಶೀರ್ಷಿಕೆಯುಳ್ಳ ಕರಪತ್ರವನ್ನು ಹಂಚಲಾಯಿತು. “ನಿಮ್ಮ ಟಿಕೆಟ್ ದರವನ್ನು ಸೋನಿಯಾ ಗಾಂಧಿ ಪಾವತಿಸಿದ್ದಾರೆ” ವಲಸೆ ಕಾರ್ಮಿಕರಿಗೆ ಸಹಾಯ ಮಾಡಲೆಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕಳೆದ ವಾರ ಘೋಷಿಸಿದ್ದ ಒಂದು ಕ್ರಮದಿಂದ ಇದು ಸಾಧ್ಯವಾಗಿದೆ ಎಂದು ಆ ಶಾಸಕರು ಭಟಿಂಡಾ ನಿಲ್ದಾಣದಲ್ಲಿ ಭಾಷಣ ಮಾಡಿದ್ದಾರೆ.

ವೈರಲ್‌ ವಿಡಯೋದ ದೃಶ್ಯಗಳಲ್ಲಿ ಗಿಡ್ಡರ್‌ಬಾಹಾದ ಶಾಸಕರು ಕಿಟಕಿಗಳ ಮೂಲಕ ರೈಲಿನಲ್ಲಿ ಕುಳಿತ ಪ್ರಯಾಣಿಕರಿಗೆ ಕರಪತ್ರಗಳನ್ನು ಹಂಚುವುದನ್ನು ಕಾಣಬಹುದು.

ಮೇ 1 ರಿಂದ ವಲಸೆ ಕಾರ್ಮಿಕರಿಗಾಗಿ ಶ್ರಮಿಕ್‌ ರೈಲುಗಳಿಗೆ ಅವಕಾಶ ನೀಡಿದ್ದ ಕೇಂದ್ರ ಸರ್ಕಾರ ಅದರ ಟಿಕೆಟ್ ಹಣವನ್ನು ಕಾರ್ಮಿಕರಿಂದಲೇ ಪಡೆಯಲು ನಿರ್ಧರಿಸಿತ್ತು. ಲಾಕ್‌ಡೌನ್‌ನಿಂದ ತೊಂದರೆಗೊಳಗಾದ ಕಾರ್ಮಿಕರು ರೈಲು ಪ್ರಯಾಣದರವನ್ನು ಭರಿಸಲು ಸಾಧ್ಯವಾಗದ ಹಲವು ದೃಶ್ಯಗಳು ಕಂಡುಬಂದಿದ್ದವು. ನಂತರ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರು ದೇಶದ ಎಲ್ಲಾ ಕಾರ್ಮಿಕರ ರೈಲು ಪ್ರಯಣದರವನ್ನು ಕಾಂಗ್ರೆಸ್‌ ಪಕ್ಷ ಭರಿಸುತ್ತದೆ ಎಂದು ಘೋಷಿಸಿದ್ದರು.


ಇದನ್ನೂ ಓದಿ: ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ 


ತದನಂತರ ರೈಲ್ವೆ ಸಚಿವಾಲಯವು ಶೇಕಡಾ 85 ರಷ್ಟು ಶುಲ್ಕವನ್ನು ಕೇಂದ್ರ ಸರ್ಕಾರ ಪಾವತಿ ಮಾಡುತ್ತದೆ ಮತ್ತು ಉಳಿದ ಹಣವನ್ನು ರಾಜ್ಯಗಳು ಪಾವತಿಸಬಹುದೆಂದು ಸ್ಪಷ್ಟಪಡಿಸಿತು. ಆದಾಗ್ಯೂ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಯಾಣದರವನ್ನು ವಲಸೆ ಕಾರ್ಮಿಕರಿಂದಲೇ ವಸೂಲಿ ಮಾಡುತ್ತಿರುವುದು ಕಂಡುಬಂದಿದೆ. ಇದರ ವಿರುದ್ಧ ಪ್ರತಿಭಟನೆಯೂ ಆರಂಭವಾಗಿದೆ.

ಇಂತಹ ಸಮಯದಲ್ಲಿ ಪಂಜಾಬ್‌ ಸರ್ಕಾರ ಉಚಿತವಾಗಿ ವಲಸೆ ಕಾರ್ಮಿಕರನ್ನು ಕಳಿಸಿಕೊಡುತ್ತಿದ್ದ ಅದಕ್ಕಾಗಿ ಕರಪತ್ರವನ್ನು ಸಹ ಹಂಚುತ್ತಿರುವುದು ವಿಶೇಷವಾಗಿದೆ.


ಇದನ್ನೂ ಓದಿ: ಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದು ತಪ್ಪು ಸಂದೇಶ್ ನೀಡುವ ವಿಚಾರವಾಗಿದೆ ಬಿಜೆಪಿ ಇದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...