Homeಮುಖಪುಟನಿಮ್ಮ ನಿಜ ಮುಖವು ಮಹಿಳಾ ವಿರೋಧಿಯಾಗಿದೆ; ಅದು ಇಡೀ ಭಾರತಕ್ಕೆ ತಿಳಿದಿದೆ: ಮೋದಿ ವಿರುದ್ಧ ಟಿಎಂಸಿ...

ನಿಮ್ಮ ನಿಜ ಮುಖವು ಮಹಿಳಾ ವಿರೋಧಿಯಾಗಿದೆ; ಅದು ಇಡೀ ಭಾರತಕ್ಕೆ ತಿಳಿದಿದೆ: ಮೋದಿ ವಿರುದ್ಧ ಟಿಎಂಸಿ ವಾಗ್ದಾಳಿ

- Advertisement -
- Advertisement -

ಬಿಜೆಪಿ ಸಂಸದನ ವಿರುದ್ಧದ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ ಬಗ್ಗೆ ಮಾತನಾಡದೆ, ಪಶ್ಚಿಮ ಬಂಗಾಳದ ಸಂದೇಶಖಾಲಿ ವಿಚಾರವನ್ನು ಮುಂದಿಟ್ಟುಕೊಂಡು ಟಿಎಂಸಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಟಿಎಂಸಿ ಮುಖಂಡರು, ಪ್ರಧಾನಿ ಮೋದಿ ನಡೆಯನ್ನು ‘ಇಬ್ಬಗೆ’ ಎಂದು ಕರೆದಿದ್ದಾರೆ. ‘ನಿಮ್ಮ ವಾಕ್ಚಾತುರ್ಯದ ಭಾಷಣಗಳು ತಮಾಷೆಯಷ್ಟೇ ಅಲ್ಲ. ನಿಮ್ಮ ನಿಜವಾದ ಮುಖವು ಮಹಿಳಾ ವಿರೋಧಿಯಾಗಿದೆ ಮತ್ತು ಅದು ಇಡೀ ಭಾರತಕ್ಕೆ ತಿಳಿದಿದೆ’ ಎಂದು ಕಿಡಿಕಾರಿದ್ದಾರೆ.

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿಜೆಪಿ ನಾಯಕರ ವಿರುದ್ಧ ಮಹಿಳಾ ಭದ್ರತೆಯ ಕುರಿತು ಉಪನ್ಯಾಸ ನೀಡುವ ಹಕ್ಕು ಪ್ರಧಾನಿ ನರೇಂದ್ರ ಮೋದಿಯವರಿಗೆ ಇಲ್ಲ ಎಂದು ತೃಣಮೂಲ ಪಕ್ಷವು ವಾಗ್ದಾಳಿ ನಡೆಸಿದೆ.

‘ದೇಶದಲ್ಲಿ ಪ್ರತಿ ಗಂಟೆಗೆ ಮಹಿಳೆಯರ ವಿರುದ್ಧ 51 ಅಪರಾಧ ಪ್ರಕರಣಗಳು ದಾಖಲಾಗುತ್ತಿವೆ; ಪರಿಸ್ಥಿತಿಯನ್ನು ಸುಧಾರಿಸಲು ನೀವು ಏನು ಮಾಡಿದ್ದೀರಿ’ ಎಂದು ಪ್ರಧಾನಿ ಮೋದಿಯವರನ್ನು ಟಿಎಂಸಿಯ ಹಿರಿಯ ನಾಯಕ ಮತ್ತು ಪಕ್ಷದ ರಾಜ್ಯಸಭಾ ಸಂಸದ ಡೆರೆಕ್ ಒ’ಬ್ರೇನ್ ಅವರು ಪ್ರಶ್ನಿಸಿದ್ದಾರೆ.

ಇಂದು ಪಶ್ಚಿಮ ಬಂಗಾಳದ ಬರಾಸತ್‌ನಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ‘ಸಂದೇಶಖಾಲಿ ಚಂಡಮಾರುತ ಪಶ್ಚಿಮ ಬಂಗಾಳದ ಪ್ರತಿಯೊಂದು ಭಾಗಕ್ಕೂ ತಲುಪಲಿದೆ, ರಾಜ್ಯದಲ್ಲಿ ಆಡಳಿತಾರೂಢ ಟಿಎಂಸಿಯನ್ನು ನಾಶಮಾಡುವಲ್ಲಿ ‘ನಾರಿ ಶಕ್ತಿ’ (ಮಹಿಳಾ ಶಕ್ತಿ) ಪ್ರಮುಖ ಪಾತ್ರ ವಹಿಸುತ್ತದೆ’ ಎಂದು ಹೇಳಿದರು.

ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಲಿ ಎಂಬ ನದಿತೀರದ ದ್ವೀಪವು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅಮಾನತುಗೊಂಡಿರುವ ಟಿಎಂಸಿ ನಾಯಕ ಶಾಜಹಾನ್ ಶೇಖ್, ಅವರ ಸಹವರ್ತಿಗಳಿಂದ ಭೂಕಬಳಿಕೆ ಆರೋಪದಿಂದ ದೇಶದಾದ್ಯಂತ ಸುದ್ದಿಯಲ್ಲಿದೆ.

‘ಪ್ರಧಾನಿ ನರೇಂದ್ರ ಮೋದಿಯವರು ಇಂದು ನಾರಿ ಶಕ್ತಿ ಕುರಿತು ಉಪನ್ಯಾಸ ನೀಡಿದ್ದಾರೆ. ನಿಮಗೆ ಮೂರು ಪ್ರಶ್ನೆಗಳು ಸರ್.. ಮಹಿಳೆಯರ ವಿರುದ್ಧ ಪ್ರತಿ ಗಂಟೆಗೆ 51 ಅಪರಾಧ ಪ್ರಕರಣಗಳು ಏಕೆ ದಾಖಲಾಗುತ್ತಿವೆ? ಲೋಕಸಭೆಯಲ್ಲಿ ಬಿಜೆಪಿ 13 ಪ್ರತಿಶತ ಮಹಿಳೆಯರನ್ನು ಏಕೆ ಹೊಂದಿದೆ? ಬಿಜೆಪಿ ಬಿಡುಗಡೆ ಮಾಡಿರುವ 195 ಅಭ್ಯರ್ಥಿಗಳ ಪಟ್ಟಿಯಲ್ಲಿ ಕೇವಲ 14 ಪ್ರತಿಶತ ಮಹಿಳೆಯರಿದ್ದಾರೆ ಏಕೆ?’ ಎಂದು ಒ’ಬ್ರೇನ್ ತಮ್ಮ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

‘ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿಜೆಪಿ ಸಂಸದರ ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳಲಿಲ್ಲ’ ಎಂದು ಪ್ರಶ್ನಿಸಿದ್ದು, ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಬಿಜೆಪಿ ಸಂಸದ ಮತ್ತು ಮಾಜಿ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಈ ಪ್ರಶ್ನೆ ಉಲ್ಲೇಖಿಸಿದೆ. ಆದರೆ, ಸಿಂಗ್ ಅವರು ತಮ್ಮ ಮೇಲಿನ ಆರೋಪವನ್ನು ತಳ್ಳಿಹಾಕಿದ್ದಾರೆ.

ಅತ್ಯಾಚಾರಿಗಳ ವಿರುದ್ಧ ತಮ್ಮ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾತನಾಡಲು ಪ್ರಧಾನಿ ಮೋದಿಗೆ ನೈತಿಕ ಹಕ್ಕಿದೆಯೇ ಎಂದು ಆಶ್ಚರ್ಯ ವ್ಯಕ್ತಪಡಿಸಿದ ಟಿಎಂಸಿ ರಾಜ್ಯಸಭಾ ಸಂಸದೆ ಸುಶ್ಮಿತಾ ದೇವ್, ‘ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಅಭಿನಂದಿಸಿದ್ದಾರೆ’ ಎಂದು ಕಿಡಿಕಾರಿದರು.

2002ರ ಗುಜರಾತ್‌ನ ಬಿಲ್ಕಿಸ್ ಬಾನೋ ಪ್ರಕರಣದ 11 ಅಪರಾಧಿಗಳನ್ನು ಸುಪ್ರೀಂ ಕೋರ್ಟ್ ಆದೇಶದ ನಂತರ ಬಿಡುಗಡೆ ಮಾಡಲಾಯಿತು ಮತ್ತು 2023 ರಲ್ಲಿ ಜೈಲಿನಿಂದ ಬಿಡುಗಡೆಯಾದ ನಂತರ ಅವರನ್ನು ಬಿಜೆಪಿ ನಾಯಕರು ಹೂಮಾಲೆಯೊಂದಿಗೆ ಸ್ವಾಗತಿಸಿದರು. ಆದರೆ ಈ ವರ್ಷದ ಜನವರಿ 8 ರಂದು ಸುಪ್ರೀಂ ಕೋರ್ಟ್ ಗುಜರಾತ್ ಅನ್ನು ರದ್ದುಗೊಳಿಸಿತು.

ಈ ಬಗ್ಗೆ ಮಾತನಾಡಿದ ಸುಶ್ಮಿತಾ ದೇವ್, ‘ಹರ್ಯಾಣದ ಮಹಿಳಾ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್ ಹೊರಗೆ ಪ್ರತಿಭಟನೆ ನಡೆಸಿದ್ದಕ್ಕಾಗಿ ದೆಹಲಿ ಪೊಲೀಸರು ಅವರನ್ನು ಹೊಡೆದಾಗ ನೀವು (ಪ್ರಧಾನಿ ಮೋದಿ) ಮಹಿಳೆಯರ ಸುರಕ್ಷತೆಯ ಬಗ್ಗೆ ಮಾತನಾಡುತ್ತಿದ್ದೀರಿ. ಆಗ ಮಹಿಳೆಯರಿಗಾಗಿ ನಿಮ್ಮ ಸಹಾಯವಾಣಿ ಎಲ್ಲಿತ್ತು’ ಎಂದು ಕಿಡಿಕಾರಿದ್ದಾರೆ.

ಪ್ರಧಾನಿ ಮೋದಿ ನಡೆಯನ್ನು ‘ಇಬ್ಬಗೆ’ ಎಂದು ಕರೆದ ಅವರು, ‘ನಿಮ್ಮ ವಾಕ್ಚಾತುರ್ಯದ ಭಾಷಣಗಳು ತಮಾಷೆಯಷ್ಟೇ ಅಲ್ಲ. ನಿಮ್ಮ ನಿಜವಾದ ಮುಖವು ಮಹಿಳಾ ವಿರೋಧಿಯಾಗಿದೆ ಮತ್ತು ಇಡೀ ಭಾರತಕ್ಕೆ ತಿಳಿದಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ; ‘ಸನಾತನ’ ಕುರಿತು ಟೀಕೆ; ಉದಯನಿಧಿ ಸ್ಟಾಲಿನ್ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...