Homeಮುಖಪುಟ'ನೀವು ಬೆಂಕಿಯೊಂದಿಗೆ ಆಟವಾಡುತ್ತಿದ್ದೀರಿ': ರಾಜ್ಯಪಾಲರಿಗೆ ಸುಪ್ರೀಂ ತರಾಟೆ

‘ನೀವು ಬೆಂಕಿಯೊಂದಿಗೆ ಆಟವಾಡುತ್ತಿದ್ದೀರಿ’: ರಾಜ್ಯಪಾಲರಿಗೆ ಸುಪ್ರೀಂ ತರಾಟೆ

- Advertisement -
- Advertisement -

ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳ ಮೇಲೆ ಕ್ರಮ ಕೈಗೊಳ್ಳಲು ವಿಳಂಬ ಮಾಡುತ್ತಿದ್ದಾರೆ ಎಂದು ಪಂಜಾಬ್ ಮತ್ತು ತಮಿಳುನಾಡು ರಾಜ್ಯ ಸರ್ಕಾರಗಳು ರಾಜ್ಯಪಾಲರ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಈ ವಿಚಾರವಾಗಿ ರಾಜ್ಯಪಾಲರನ್ನು ಸುಪ್ರೀಂ ಕೋರ್ಟ್ ಇಂದು ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ, ಚುನಾಯಿತ ವಿಧಾನಸಭೆಯಿಂದ ಅಂಗೀಕರಿಸಲ್ಪಟ್ಟ ಮಸೂದೆಗಳನ್ನು ವಿಳಂಬ ಮಾಡದಂತೆ ಎರಡೂ ರಾಜ್ಯಪಾಲರನ್ನು ಒತ್ತಾಯಿಸಿದೆ.

”ಚುನಾಯಿತ ಸಭೆಯು ಅಂಗೀಕರಿಸಿದ ಮಸೂದೆಗಳ ಬಗ್ಗೆ ದಯವಿಟ್ಟು ನಿಷ್ಕಾಳಜಿ ತೋರಬೇಡಿ. ಇದು ಅತ್ಯಂತ ಗಂಭೀರ ಹಾಗೂ ಕಾಳಜಿಯ ವಿಷಯವಾಗಿದೆ” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.

”ನೀವು ಬೆಂಕಿಯೊಂದಿಗೆ ಆಟವಾಡುತ್ತಿದ್ದೀರಿ. ಪಂಜಾಬ್‌ನಲ್ಲಿ ನಡೆಯುತ್ತಿಋಊಔ ಬಗ್ಗೆ ನಮಗೆ ಅಸಮಧಾನ ಇದೆ. ನಾವು ಸಂಸದೀಯ ಪ್ರಜಾಪ್ರಭುತ್ವವಾಗಿ ಮುಂದುವರಿಯುತ್ತೇವೆಯೇ? ಭಾರತವು ಸ್ಥಾಪಿತ ಸಂಪ್ರದಾಯಗಳು ಮೇಲೆ ಕಾರ್ಯನಿರ್ವಹಿಸುತ್ತಿದೆ ಮತ್ತು ಅವುಗಳನ್ನು ಅನುಸರಿಸುವ ಅಗತ್ಯವಿದೆ” ಎಂದು ಪೀಠವು ಒತ್ತಿಹೇಳಿತು.

ರಾಜ್ಯ ವಿಧಾನಸಭೆ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ಒಪ್ಪಿಗೆ ನೀಡುವಲ್ಲಿ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪಂಜಾಬ್ ಸರ್ಕಾರ ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಇಂತಹ ಅಸಂವಿಧಾನಿಕ ನಿಷ್ಕ್ರಿಯತೆ” ಇಡೀ ಆಡಳಿತವನ್ನು ಹಾಳುಮಾಡುತ್ತದೆ ಎಂದು ಮನವಿ ಹೇಳಿದೆ. ಪಂಜಾಬ್ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ”ಹಣಕಾಸು ನಿರ್ವಹಣೆ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಏಳು ಮಸೂದೆಗಳನ್ನು ರಾಜ್ಯಪಾಲರು ಹಿಂದಿರುಗಿಸಿದ್ದಾರೆ. ಜುಲೈನಲ್ಲಿ ರಾಜ್ಯಪಾಲರ ಒಪ್ಪಿಗೆಗಾಗಿ ಮಸೂದೆಗಳನ್ನು ಕಳುಹಿಸಲಾಗಿದೆ ಮತ್ತು ಅವರ ನಿಷ್ಕ್ರಿಯತೆಯು ಆಡಳಿತದ ಮೇಲೆ ಪರಿಣಾಮ ಬೀರಿದೆ” ಎಂದು ಅವರು ಹೇಳಿದರು.

ಪಂಜಾಬ್ ರಾಜ್ಯಪಾಲರು ಮತ್ತು ಅಲ್ಲಿಯ ಮುಖ್ಯಮಂತ್ರಿ ಭಗವಂತ್ ಮಾನ್ ನಡುವೆ ಬಹುದಿನದಿಂದ ಜಗಳ ನಡೆಯುತ್ತಿದೆ.

”ಸಾಂವಿಧಾನಿಕ ಪ್ರಾಧಿಕಾರವು ನಿರಂತರವಾಗಿ ಅಸಂವಿಧಾನಿಕ ರೀತಿಯಲ್ಲಿ ಬಾಹ್ಯ ಕಾರಣಗಳಿಗಾಗಿ ರಾಜ್ಯ ಸರ್ಕಾರದ ಕಾರ್ಯಚಟುವಟಿಕೆಗೆ ಅಡ್ಡಿಯುಂಟುಮಾಡುತ್ತದೆ ಎಂದು ಆರೋಪಿಸಿ ಮಧ್ಯಪ್ರವೇಶಿಸುವಂತೆ ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್ ಅನ್ನು ಒತ್ತಾಯಿಸಿತ್ತು.

ಇದನ್ನೂ ಓದಿ: ಮಸೂದೆಗಳ ತೆರವು ವಿಚಾರ: ರಾಜ್ಯಪಾಲರ ವಿರುದ್ಧ ಮತ್ತೆ ಸುಪ್ರೀಂ ಮೊರೆ ಹೋದ ಕೇರಳ ಸರ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

0
ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು, ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ರೋಹಿತ್ ವೇಮುಲಾ ತಾಯಿ ರಾಧಿಕಾ...