Homeಕರ್ನಾಟಕದಕ್ಷಿಣ ಕನ್ನಡದ ಸುರತ್ಕಲ್‌ನಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ

ದಕ್ಷಿಣ ಕನ್ನಡದ ಸುರತ್ಕಲ್‌ನಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ

ಜಿಲ್ಲೆಯಲ್ಲಿ ಒಂದು ವಾರದೊಳಗಡೆ ಮೂರನೇ ಘಟನೆ

- Advertisement -
- Advertisement -

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆಯಾಗಿ ಒಂದೇ ದಿನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ತಲವಾರು ದಾಳಿ ಗುರುವಾರ ಸಂಜೆ ನಡೆದಿದೆ. ಜಿಲ್ಲೆಯ ಮಂಗಳೂರು ನಗರದ ಹೊರ ವಲಯದ ಸುರತ್ಕಲ್‌ಗೆ ಅಂಗಡಿಗೆಂದು ಬಂದಿದ್ದ ಯುವಕನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಮಾಡಲಾಗಿದೆ.

ದಾಳಿಗೊಳಗಾದ ಯುವಕನನ್ನು ಸುರತ್ಕಲ್‌ನ ಮಂಗಳಪೇಟೆ ನಿವಾಸಿ ಫಾಝಿಲ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ ಎಂದು ವಾರ್ತಾಭಾರತಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಪ್ಪಲಿ ಖರೀದಿಗೆಂದು ಬಂದಿದ್ದ ಫಾಝಿಲ್‌ ಮೇಲೆ ಜನರ ಮುಂದೆಯೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಫಾಝಿಲ್ ಮೇಲೆ ದಾಳಿ ನಡೆಸಿದ್ದಾರೆ.

ದುಷ್ಕರ್ಮಿಗಳ ದಾಳಿಯಿಂದಾಗಿ ಗಾಯಗೊಂಡಿದ್ದ ಯುವಕ ತೀವ್ರ ರಕ್ತಸ್ರಾವಕ್ಕೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ರಸ್ತೆಗಿಳಿದು ಕಲ್ಲು ಹೊಡೆಯಬಹುದು: ಸಂಸದ ತೇಜಸ್ವಿ ಸೂರ್ಯ ಆಡಿಯೋ ವೈರಲ್

ಸುರತ್ಕಲ್ ಬೀಜೆಶ್‌ ಎಂಬ ಜವಳಿ ಅಂಗಡಿಯ ಮುಂಭಾಗ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ ಎಂದು ವಾರ್ತಾಭಾರತಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...