Homeಮುಖಪುಟಉದ್ಯೋಗ ನೀಡಿ ಆತ್ಮಹತ್ಯೆ ನಿಲ್ಲಿಸಿ: ಯೂತ್ ಕಾಂಗ್ರೆಸ್ ಅಭಿಯಾನ

ಉದ್ಯೋಗ ನೀಡಿ ಆತ್ಮಹತ್ಯೆ ನಿಲ್ಲಿಸಿ: ಯೂತ್ ಕಾಂಗ್ರೆಸ್ ಅಭಿಯಾನ

ಶೇ 65ರಷ್ಟು ಯುವಕರು ಉದ್ಯೋಗ ಇಲ್ಲದೆ ಬೀದಿಗಳಲ್ಲಿ ಅಡ್ಡಾಡುತ್ತಿದ್ದಾರೆ‌. ಕೇಂದ್ರ ಸರ್ಕಾರ ಉದ್ಯೋಗ ನೀಡುವಲ್ಲಿ ವಿಫಲವಾಗಿದೆ. ಹೀಗಾಗಿ ಕೆಲಸ ಇಲ್ಲದೆ ಸಾಕಷ್ಟು ಯುವಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ

- Advertisement -
- Advertisement -

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಯುವಜನರಿಗೆ ಉದ್ಯೋಗ ನೀಡಿ, ಆತ್ಮಹತ್ಯೆ ನಿಲ್ಲಿಸಿ ಎಂದು ಆಗ್ರಹಿಸಿ ಯೂತ್ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ಇಂದು ಪ್ರತಿಭಟನೆ ನಡೆಸಿತು. ದೇಶಾದ್ಯಂತ ಉದ್ಯೋಗ ನೀಡಿ ಆತ್ಮಹತ್ಯೆ ನಿಲ್ಲಿಸಿ ಅಭಿಯಾನ ನಡೆಸಲು ಯುವ ಕಾಂಗ್ರೆಸ್‌ ಉದ್ದೇಶಿಸಿದ್ದು, ಕರ್ನಾಟಕದಿಂದ ಇದಕ್ಕೆ ಚಾಲನೆ ನೀಡುತ್ತಿದ್ದೇವೆ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಹೇಳಿದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ‘ಉದ್ಯೋಗ ನೀಡಿ ಆತ್ಮಹತ್ಯೆ ನಿಲ್ಲಿಸಿ’ ಅಭಿಯಾನದ ಭಿತ್ತಿಪತ್ರವನ್ನು ಗುರುವಾರ ಬಿಡುಗಡೆ ಮಾಡಿ ಮಾತನಾಡಿ, ದೇಶದಲ್ಲಿ ಶೇ 65 ರಷ್ಟು ಯುವಕರು ಉದ್ಯೋಗ ಇಲ್ಲದೆ ಬೀದಿಗಳಲ್ಲಿ ಅಡ್ಡಾಡುತ್ತಿದ್ದಾರೆ‌. ಕೇಂದ್ರ ಸರ್ಕಾರ ಉದ್ಯೋಗ ನೀಡುವಲ್ಲಿ ವಿಫಲವಾಗಿದೆ. ಹೀಗಾಗಿ ಕೆಲಸ ಇಲ್ಲದೆ ಸಾಕಷ್ಟು ಯುವಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ದೂರಿದರು.

ಇದನ್ನೂ ಓದಿ: ಮೋದಿ ಭಾರತ ಯುವಜನರಿಗೆ ಉದ್ಯೋಗ ಕೊಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

PC: KPYC/Facebook

ಮೋದಿ ಸರ್ಕಾರ ನೀಡಿದ ಭರವಸೆಯಂತೆ 12 ಕೋಟಿ ಜನರಿಗೆ ಉದ್ಯೋಗ ಸಿಗಬೇಕಿತ್ತು. ಮೋದಿ ಸರ್ಕಾರ ಕೆಲಸ ಕೊಡುವ ಬದಲು ಇರುವ ಕೆಲಸವನ್ನು ಕಿತ್ತುಕೊಳ್ಳುತ್ತಿದೆ ಎಂದರು. ಪ್ರಧಾನಿಯವರಿಗೆ ಉದ್ಯೋಗ ನೀಡಿ ಎಂದರೆ ಪಕೋಡಾ ಮಾಡಿ ಮಾರಿ ಎನ್ನುತ್ತಾರೆ. ಕರ್ನಾಟಕದಲ್ಲಿ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. ಈ ಬಗ್ಗೆ ರಾಹುಲ್ ಗಾಂಧಿ ಸಾಕಷ್ಟು ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರ ಯಾವುದೇ ಮುನ್ನಚ್ಚರಿಕೆ ತೆಗೆದುಕೊಳ್ಳದೇ ಇರುವುದರಿಂದ ಯುವಕರು ಬೀದಿಗೆ ಬಂದಿದ್ದಾರೆ ಎಂದು ಸುದ್ದಿಗೋಷ್ಟಿಯಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಹೇಳಿದರು.

ಯೂತ್ ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ಕಚೇರಿಯಿಂದ ಮೌರ್ಯ ಸರ್ಕಲ್‌ವರೆಗೆ ರ್‍ಯಾಲಿ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಮುಂದಿನ ದಿನಗಳಲ್ಲಿ ಎಲ್ಲ ಸಂಸದರು ಮತ್ತು ಸಚಿವರ ಮನೆ ಎದುರು ಉದ್ಯೋಗ ಕೊಡಿ ಎಂದು ಆಗ್ರಹಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದು, ನಿರುದ್ಯೋಗದ ವಿರುದ್ಧ ಧ್ವನಿ ಎತ್ತಲು 7998799854 ನಂಬರ್‌ಗೆ ಮಿಸ್ಡ್ ಕಾಲ್ ನೀಡುವಂತೆ  ಯೂತ್ ಕಾಂಗ್ರೆಸ್ ಮನವಿ ಮಾಡಿದೆ.


ಇದನ್ನೂ ಓದಿ: ಜುಲೈ ತಿಂಗಳೊಂದರಲ್ಲೇ 50 ಲಕ್ಷ ಉದ್ಯೋಗಗಳು ನಷ್ಟ: CMIE

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ಆಡಳಿತದ 10 ವರ್ಷಗಳಲ್ಲಿ ‘ED’ ದಾಳಿಗಳಲ್ಲಿ ಹೆಚ್ಚಳ: ವರದಿ

0
ಮೋದಿ ಆಡಳಿತದ ಕಳೆದ 10 ವರ್ಷಗಳಲ್ಲಿ ಜಾರಿ ನಿರ್ದೇಶನಾಲಯದ ದಾಳಿ ಮತ್ತು, ಆಸ್ತಿಮುಟ್ಟುಗೋಲು ಪ್ರಮಾಣದಲ್ಲಿ ಭಾರೀ ಹೆಚ್ಚಳವಾಗಿದೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ಬಿಜೆಪಿ ಸರಕಾರ 'ಇಡಿ' ಮತ್ತು ಸಿಬಿಐಯಂತಹ ಸರಕಾರಿ ಸಂಸ್ಥೆಗಳನ್ನು ಪ್ರತಿಪಕ್ಷಗಳ...