Homeಮುಖಪುಟದೆಹಲಿ: ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಯೂತ್ ಕಾಂಗ್ರೆಸ್ ಪ್ರತಿಭಟನೆ

ದೆಹಲಿ: ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಯೂತ್ ಕಾಂಗ್ರೆಸ್ ಪ್ರತಿಭಟನೆ

’ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಷ್ಟ್ರೀಯ ಮಾರುಕಟ್ಟೆಲೆ ಕಡಿಮೆಯಿದ್ದರೂ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಿರಂತರವಾಗಿ ಹೆಚ್ಚುತ್ತಿವೆ’

- Advertisement -
- Advertisement -

ಸತತವಾಗಿ ಏರುತ್ತಿರುವ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ದರ ಏರಿಕೆ ಖಂಡಿಸಿ ದೆಹಲಿಯಲ್ಲಿ ಇಂಡಿಯನ್ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ (ಫೆ.17) ಪ್ರತಿಭಟನೆ ನಡೆಸಿದ್ದಾರೆ.

ಯುವ ಕಾಂಗ್ರೆಸ್ ಕಾರ್ಯಕರ್ತರ ಗುಂಪು ಬುಧವಾರ ದೆಹಲಿಯ ಕೊನಾಟ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಸರ್ಕಾರವು ದರ ಹೆಚ್ಚಳವನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿತು. ಪ್ರತಿಭಟನಾಕಾರರು ಸೈಕಲ್ ಸವಾರಿ ಮಾಡಿದರು ಜೊತೆಗೆ ಕ್ರಿಕೆಟ್ ಕಿಟ್‌ಗಳನ್ನು ಧರಿಸಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೇಗೆ ಏರುತ್ತಿವೆ ಮತ್ತು ಶತಕಕ್ಕೆ ತಲುಪುತ್ತವೆ ಎಂಬುದನ್ನು ವ್ಯಂಗ್ಯವಾಡಿದರು.

“ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಮತ್ತೆ ಮತ್ತೆ ಹೆಚ್ಚಿಸುವ ಮೂಲಕ, ಸಾಮಾನ್ಯ ಜನರ ಸಮಸ್ಯೆಗಳ ಬಗ್ಗೆ ಕಾಳಜಿಯಿಲ್ಲ ಎಂದು ಮೋದಿ ಸರ್ಕಾರ ಸ್ಪಷ್ಟಪಡಿಸಿದೆ” ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ತಿಳಿಸಿದ್ದಾರೆ.

ಇದನ್ನೂ ಓದಿ: ಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

Image
PC: twitter@srinivasiyc

“ಸಾಮಾನ್ಯ ಜನರು ಹಣದುಬ್ಬರದಿಂದ ತೀವ್ರವಾಗಿ ಹಾನಿಗೊಳಗಾಗುತ್ತಾರೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಿದ್ದರೂ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಿರಂತರವಾಗಿ ಹೆಚ್ಚುತ್ತಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 26 ಪೈಸೆ ಮತ್ತು ಡೀಸೆಲ್ ಅನ್ನು 29 ಪೈಸೆ ಹೆಚ್ಚಿಸಲಾಗಿದೆ. ಈ ಹೆಚ್ಚಳವು ದೆಹಲಿಯಲ್ಲಿ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 88.99 ರೂಪಾಯಿ ಮತ್ತು ಡೀಸೆಲ್ ಲೀಟರ್‌ಗೆ 79.35 ರೂಪಾಯಿಗೆ ತಲುಪಿದೆ.


ಇದನ್ನೂ ಓದಿ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ: ಸರ್ಕಾರದ ವಿರುದ್ದ ಎಳ್ಳು ನೀರು ಬಿಡುವ ಅಭಿಯಾನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ...

0
"ಕಾಂಗ್ರೆಸ್ ಸಂವಿಧಾನವನ್ನು ಗೌರವಿಸಲಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಗೌರವಿಸಲಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಮೂಲಕ ನಮಗೆ ಅವಕಾಶ ಸಿಕ್ಕಾಗ ನಾವು ಮಾಡಿದ ಮೊದಲ ಕೆಲಸವೆಂದರೆ, ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ನೀಡಿದ್ದ ಮುಸ್ಲಿಂ...