Homeಕರ್ನಾಟಕಯುವಜನತೆ ಸಂವಿಧಾನ ರಕ್ಷಿಸಿಕೊಳ್ಳುವ ನಾಯಕರಾಗಬೇಕು: ಮನೋಜ್ ಆಜಾದ್

ಯುವಜನತೆ ಸಂವಿಧಾನ ರಕ್ಷಿಸಿಕೊಳ್ಳುವ ನಾಯಕರಾಗಬೇಕು: ಮನೋಜ್ ಆಜಾದ್

- Advertisement -
- Advertisement -

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುತ್ತೇವೆಂದು ಬಿಜೆಪಿಯ ಹಲವು ನಾಯಕರು ಹೇಳಿದ್ದರು, ಜೊತೆಗೆ ಅವರು ಈಗಲೂ ಅಂತಹದೇ ಕುತಂತ್ರಗಳ್ನು ಮುಂದುವರೆಸಿದ್ದಾರೆ. ಆದುದರಿಂದ ಯುವಜನತೆ ಕೋಮುವಾದಿಗಳಿಂದ ಸಂವಿಧಾನವನ್ನು ರಕ್ಷಿಸಿಕೊಳ್ಳುವ ನಾಯಕರಾಬೇಕಿದೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ನಾಯಕ, ಪತ್ರಕರ್ತ ಮನೋಜ್ ಆಜಾದ್ ಶನಿವಾರ ಕರೆ ನೀಡಿದ್ದಾರೆ. ಯುವಜನತೆ ಸಂವಿಧಾನ

ಬೆಂಗಳೂರು ವಿಶ್ವವಿದ್ಯಾನಿಲಯದ ಕೇಂದ್ರೀಯ ಗ್ರಂಥಾಲಯ ಆವರಣದಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಮತ್ತು ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ಚಿಂತಕ ಶಿವಸುಂದರ್ ರಚಿಸಿರುವ ‘ಸಂವಿಧಾನ ಮತ್ತು ಸಂಘಿಗಳ ಸುಳ್ಳು ಅಭಿಯಾನ’ ಕೃತಿ ಓದುವ ಅಭಿಯಾನದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಸಮಾಜದಲ್ಲಿ ಶಾಂತಿ-ಸೌಹಾರ್ಧತೆಯಿಂದ ಜೀವಿಸಲು ಸಾಮಾಜಿಕವಾಗಿ, ಆರ್ಥಿಕವಾಗಿ ಪ್ರಬಲರಾಗಿ ಬದುಕಲು, ಜನರಿಗೆ ಸಾಮಾಜಿಕ ನ್ಯಾಯ ಒದಗಿಸಲು ಸಂವಿಧಾನ ಅತ್ಯವಶ್ಯಕ. ಪ್ರತಿಯೊಂದು ಧರ್ಮವೂ ತಮ್ಮದೇ ಆದ ಧರ್ಮ ಗ್ರಂಥ ಹೊಂದಿದೆ. ಆದರೆ ಅದೆಲ್ಲವನ್ನೂ ಮೀರಿದ ಮತ್ತು ಎಲ್ಲ ಧರ್ಮದವರಿಗೂ ಅನ್ವಯಿಸುವ ಮಹಾಗ್ರಂಥವೇ ಸಂವಿಧಾನ. ಅದನ್ನು ಉಳಿಸಿ ರಕ್ಷಿಸುವುದು ಮತ್ತು ಪಾಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಅವರು ಹೇಳಿದ್ದಾರೆ.

ಅಂಬೇಡ್ಕರ್‌ ಅವರ ನಿಜವಾದ ಅನುಯಾಯಿಗಳು ನಾವೇ ಎಂದು ಹೇಳುತ್ತಿರುವ ಸಂಘಪರಿವಾರದವರು, ಜನರನ್ನು ನಂಬಿಸುವ ಸಲುವಾಗಿ ಹಲವಾರು ಸುಳ್ಳುಗಳನ್ನು ಹೇಳುತ್ತಾ, ಅರ್ಧ ಸತ್ಯಗಳನ್ನು ಹೇಳುತ್ತಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಹಿಂದುತ್ವದ ಬಗ್ಗೆ ಅಂಬೇಡ್ಕರ್‌ ಅವರಿಗೆ ಇದ್ದ ನಿಜವಾದ ಅಭಿಪ್ರಾಯಗಳನ್ನು ಮರೆಮಾಚಲು ಸಂವಿಧಾನ ವಿರೋಧಿ ಕುತಂತ್ರಗಳನ್ನು ಮಾಡುತ್ತಿದ್ದಾರೆ. ಯುವಜನತೆ ಅಧ್ಯಯನ, ಸಂಶೋಧನೆಗಳ ಮೂಲಕ ನಿಜ ಏನೆಂದರು ಅರ್ಥ ಮಾಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ಶಿವಸುಂದರ್ ರಚಿಸಿರುವ ಕೃತಿ ನೆರವಾಗಲಿದೆ ಎಂದು ಮನೋಜ್ ಅಭಿಪ್ರಾಯಪಟ್ಟಿದ್ದಾರೆ.

ಕೆವಿಎಸ್ ಪದಾಧಿಕಾರಿ ಗುರುಬಸವ ಮಾತನಾಡಿ, ಸಂವಿಧಾನದ ಆಶಯವನ್ನು ಅರ್ಥ ಮಾಡಿಕೊಳ್ಳುವುದು ಇದೆಂದಿಗಿಂತಲು ಮಹತ್ವದ್ದಾಗಿದೆ. ನಮ್ಮ ಸಂವಿಧಾನ ಇತರೇ ದೇಶಗಳ ಸಂವಿಧಾನದಂತಲ್ಲ. ಸ್ವಾತಂತ್ರ್ಯ ಪೂರ್ವ, ಸ್ವಾತಂತ್ರದ ಸಂದರ್ಭದಲ್ಲಿ ಹಾಗೂ ನಂತರದ ವಿದ್ಯಮಾನಗಳನ್ನು ಅರ್ಥಮಾಡಿಕೊಳ್ಳಬೇಕೆಂದರೆ ಭಾರತದ ಇತಿಹಾಸವನ್ನು ಮತ್ತು ಅಂಬೇಡ್ಕರ್ ಜೀವನ ಚರಿತ್ರೆಯನ್ನು ಓದಿಕೊಳ್ಳಬೇಕು. ಇಲ್ಲವಾದರೆ ಸಂವಿಧಾನದ ಮಹತ್ವ ತಿಳಿಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಅಭಿಯಾನದಲ್ಲಿ ಸಂಶೋಧನಾ ವಿದ್ಯಾರ್ಥಿ ಒಕ್ಕೂಟದ ಪದಾಧಿಕಾರಿಗಳಾದ ಸುಗುಣಾ, ನಾಗಪ್ಪ, ಗೌತಮ್, ನಾಗರಾಜ, ಅಭಿ, ಶ್ರೀನಿವಾಸ್ ಸೇರಿದಂತೆ ಹಲವು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...